Ezekiel 37:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ನನ್ನ ಒಡೆಯನಾದ ಯೆಹೋವನು ಹೇಳಿದ್ದೇನೆಂದರೆ, “ನನ್ನ ಪರವಾಗಿ ಗಾಳಿಯೊಂದಿಗೆ ಮಾತನಾಡು. ನರಪುತ್ರನೇ, ಗಾಳಿಯೊಂದಿಗೆ ಮಾತನಾಡು. ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ, ‘ಗಾಳಿಯೇ, ಎಲ್ಲಾ ದಿಕ್ಕುಗಳಿಂದ ಬಂದು ಈ ಸತ್ತ ಶರೀರಗಳ ಮೇಲೆ ಊದು. ಅವರ ಮೇಲೆ ಗಾಳಿ ಊದು. ಆಗ ಅವುಗಳಿಗೆ ಜೀವ ಬರುವದು.’“
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಆತನು ನನಗೆ, “ನರಪುತ್ರನೇ, ನೀನು ಶ್ವಾಸಕ್ಕೆ ನುಡಿ, ‘ಓ ಶ್ವಾಸವೇ,’ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನೀನು ಚತುರ್ದಿಕ್ಕುಗಳಿಂದ ಬೀಸಿ, ಈ ಹತಶರೀರಗಳು ಬದುಕುವಂತೆ ಅವುಗಳ ಮೇಲೆ ಊದು.’”
Kannada BSI Bible 2016
ಆಮೇಲೆ ಆತನು ನನಗೆ ಹೇಳಿದ್ದೇನಂದರೆ--ಪ್ರವಾ ದಿಸು, ಉಸಿರಿನ ಕಡೆಗೆ ಪ್ರವಾದಿಸು, ಮನುಷ್ಯ ಪುತ್ರನೇ, ಆ ಉಸಿರಿಗೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಓ ಉಸಿರೇ, ನಾಲ್ಕು ದಿಕ್ಕುಗಳಿಂದ ಬಂದು ಈ ಹತ ಶರೀರಗಳು ಬದುಕುವಂತೆ ಅದರ ಮೇಲೆ ಸುಳಿ,
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅತನು ನನಗೆ - ನರಪುತ್ರನೇ, ನೀನು ಶ್ವಾಸಕ್ಕೆ ನುಡಿ, ನುಡಿ; ಶ್ವಾಸವೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀನು ಚತುರ್ದಿಕ್ಕುಗಳಿಂದ ಬೀಸಿ ಹತಶರೀರಗಳು ಬದುಕುವಂತೆ ಅವುಗಳ ಮೇಲೆ ಸುಳಿ ಎಂಬದಾಗಿ ಶ್ವಾಸಕ್ಕೆ ನುಡಿ ಎಂದು ಅಪ್ಪಣೆಕೊಡಲು ನಾನು ಅಪ್ಪಣೆಯಂತೆ ನುಡಿದೆನು.
Kannada Bible (KNCL) BSI 2016
ಆಗ ಸರ್ವೇಶ್ವರ ನನಗೆ - “ನರಪುತ್ರನೇ, ನೀನು ಶ್ವಾಸಕ್ಕೆ ನುಡಿ; ಶ್ವಾಸವೇ, ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನೀನು ಚತುರ್ದಿಕ್ಕುಗಳಿಂದ ಬೀಸಿ ಹತ ಶರೀರಗಳು ಬದುಕುವಂತೆ ಅವುಗಳ ಮೇಲೆ ಸುಳಿ, ಎಂಬುದಾಗಿ ಶ್ವಾಸಕ್ಕೆ ನುಡಿ,” ಎಂದು ಅಪ್ಪಣೆಕೊಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಮೇಲೆ ಆತನು ನನಗೆ ಹೇಳಿದ್ದೇನೆಂದರೆ, “ಉಸಿರಿನ ಕಡೆಗೆ ಪ್ರವಾದಿಸು, ಮನುಷ್ಯಪುತ್ರನೇ, ಆ ಉಸಿರಿಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಓ ಉಸಿರೇ, ನಾಲ್ಕು ದಿಕ್ಕುಗಳಿಂದ ಬಂದು ಈ ಹತಶರೀರಗಳು ಬದುಕುವಂತೆ ಅದರ ಮೇಲೆ ಊದು.’ ”