Ezekiel 38:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
‘ನಾನು ಹೋಗಿ ಇಸ್ರೇಲಿನಲ್ಲಿರುವ ಗೋಡೆಯಿಲ್ಲದ ನಗರಗಳನ್ನು ವಶಮಾಡಿಕೊಳ್ಳುತ್ತೇನೆ; ಅವರು ಶಾಂತಿಯಿಂದ ನೆಲೆಸಿರುತ್ತಾರೆ; ತಾವು ಸುರಕ್ಷಿತರಾಗಿದ್ದೇವೆ ಎಂದುಕೊಂಡಿದ್ದಾರೆ. ಆದರೆ ಅವರನ್ನು ರಕ್ಷಿಸಲು ಅವರ ಪಟ್ಟಣಗಳಿಗೆ ಕೋಟೆಗಳೇ ಇಲ್ಲ. ಅವರ ಹೆಙ್ಬಾಗಿಲಿಗೆ ಚಿಲಕವಿಲ್ಲ. ಅವರಿಗೆ ಬಾಗಿಲು ಸಹ ಇಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ನೀನು, ‘ಆಹಾ, ನಾನು ಪೌಳಿಗೋಡೆಯಿಲ್ಲದ ಹಳ್ಳಿಗಳಿಂದ ತುಂಬಿದ ದೇಶವನ್ನು ನುಗ್ಗಿ, ಅಗುಳಿ, ಬಾಗಿಲು, ಗೋಡೆಗಳಿಲ್ಲದೆ ನೆಮ್ಮದಿಯಿಂದ ನಿರ್ಭಯವಾಗಿರುವವರ ಮೇಲೆ ಬೀಳುವೆನು’ ಅಂದುಕೊಂಡೆ.
Kannada BSI Bible 2016
ನೀನು ಪೌಳಿಗೋಡೆಯಿಲ್ಲದ ಹಳ್ಳಿಗಳುಳ್ಳ ದೇಶಕ್ಕೆ ನಾನು ಹೋಗುವೆನು; ಪೌಳಿ ಗೋಡೆಗಳಿಲ್ಲದೆ ಇಲ್ಲವೆ ಬಾಗಲುಗಳು ಅಗುಳಿಗಳು ಇಲ್ಲದೆ ಅದೂ ಅವರು ವಿಶ್ರಾಂತಿಯಿಂದಲೂ ಸುಖ ವಾಗಿ ವಾಸಿಸುತ್ತಿರುವಾಗ ನಾನು ಹೋಗಿ,
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು - ಆಹಾ, ನಾನು ಪೌಳಿಗೋಡೆಯಿಲ್ಲದ ಹಳ್ಳಿಪಳ್ಳಿಗಳು ತುಂಬಿದ ದೇಶವನ್ನು ನುಗ್ಗಿ ಅಗುಳಿ ಬಾಗಿಲು ಗೋಡೆಗಳಿಲ್ಲದೆ ನೆಮ್ಮದಿಯಿಂದ ನಿರ್ಭಯವಾಗಿರುವವರ ಮೇಲೆ ಬೀಳುವೆನು ಅಂದುಕೊಂಡು
Kannada Bible (KNCL) BSI 2016
ನೀನು, ‘ಆಹಾ, ನಾನು ಪೌಳಿಗೋಡೆಯಿಲ್ಲದ, ಹಳ್ಳಿಪಳ್ಳಿಗಳು ತುಂಬಿದ ದೇಶವನ್ನು ನುಗ್ಗಿ, ಅಗುಳಿ ಬಾಗಿಲು ಗೋಡೆಗಳಿಲ್ಲದೆ ನೆಮ್ಮದಿಯಿಂದ ನಿರ್ಭಯವಾಗಿರುವವರ ಮೇಲೆ ಬೀಳುವೆನು,’ ಎಂದುಕೊಂಡು ಸೂರೆಗೈಯಲು ಆಶಿಸುವೆ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಹೇಳುವಿರಿ, “ಗೋಡೆಯಿಲ್ಲದ ಹಳ್ಳಿಗಳಿಲ್ಲದ ದೇಶದ ಮೇಲೆ ನಾನು ಆಕ್ರಮಣ ಮಾಡುತ್ತೇನೆ. ಪೌಳಿಗೋಡೆಗಳಿಲ್ಲದೆ ಇಲ್ಲವೆ ಬಾಗಿಲುಗಳು ಅಗುಳಿಗಳು ಇಲ್ಲದೆ ಅವರು ಶಾಂತಿಯುತ ಮತ್ತು ನಿರ್ಭಯವಾಗಿ ವಾಸಿಸುವವರ ಮೇಲೆ ದಾಳಿಮಾಡುತ್ತೇನೆ.