Ezekiel 38:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಅವರನ್ನು ಸೋಲಿಸಿ ಅವರ ಬಳಿಯಲ್ಲಿರುವ ಎಲ್ಲಾ ಬೆಲೆಬಾಳುವ ವಸ್ತುಗಳನ್ನು ದೋಚಿಕೊಳ್ಳುವೆನು. ಹಿಂದೆ ನಾಶವಾಗಿದ್ದು ಈಗ ಜನಭರಿತವಾಗಿರುವ ಆ ನಗರಗಳ ಮೇಲೆ ಯುದ್ಧ ಮಾಡುವೆನು. ಈಗ ಆ ಜನರಿಗೆ ದನಕರುಗಳೂ ಸಬತ್ತುಗಳೂ ಇವೆ. ಅವರು ಲೋಕದ ಕೇಂದ್ರ ಸ್ಥಳಗಳಲ್ಲಿ ವಾಸಿಸುತ್ತಿದ್ದಾರೆ. ಘಲಾಢ್ಯ ದೇಶಗಳು ಬೇರೆ ಘಲಾಢ್ಯ ದೇಶಗಳೊಂದಿಗೆ ಸಂಪರ್ಕಿಸಲು ಇವರ ಮೂಲಕ ಹೋಗಲೇಙೇಕು’ ಎಂದು ನೀನು ಹೇಳಿಕೊಳ್ಳುತ್ತಿರುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸುಲಿಗೆಯನ್ನು, ಕೊಳ್ಳೆಯನ್ನು ಹೊಡೆಯಬೇಕೆಂತಲೂ, ನಿರ್ಜನವಾಗಿದ್ದು ಜನಭರಿತವಾದ ಪ್ರದೇಶಗಳ ಮೇಲೆ ಕೈಮಾಡಬೇಕೆಂತಲೂ ಜನಾಂಗಗಳೊಳಗಿಂದ ಕೂಡಿಸಲ್ಪಟ್ಟ ಧನ ಕನಕ ಮೊದಲಾದ ಸೊತ್ತನ್ನು ಸಂಗ್ರಹಿಸಿಕೊಂಡು, ಭೂಮಿಯ ಮಧ್ಯದಲ್ಲಿ ವಾಸಿಸುವವರನ್ನು ಹತಿಸಬೇಕೆಂತಲೂ ಕುತಂತ್ರವನ್ನು ಕಲ್ಪಿಸುವಿ.
Kannada BSI Bible 2016
ಸುಲಿಗೆ ಯನ್ನು ಕೊಳ್ಳೆಯನ್ನು ತೆಗೆದುಕೊಳ್ಳುವೆನು; ಹೀಗೆ ನಿವಾಸಗಳಿದ್ದು ಬೀಡಾಗಿದ್ದ ಸ್ಥಳಗಳಲ್ಲಿಯೂ ಜನಾಂಗ ಗಳಿಂದ ಕೂಡಿಸಲ್ಪಟ್ಟಂತಹ ದನಗಳೂ ಸಂಪತ್ತೂ ಉಳ್ಳಂಥ ಮತ್ತು ಭೂಮಿಯ ಮಧ್ಯದಲ್ಲಿ ವಾಸಮಾಡು ವಂಥ ಜನರ ಮೇಲೆಯೂ ಕೈಹಾಕವೆನು ಎಂದು ಹೇಳುವಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೂರೆಗೆಯ್ದು ಕೊಳ್ಳೆಹೊಡೆಯಬೇಕೆಂತಲೂ ನಿರ್ಜನವಾಗಿದ್ದು ಜನಭರಿತವಾದ ಪ್ರದೇಶಗಳ ಮೇಲೆ ಕೈಮಾಡಬೇಕೆಂತಲೂ ಜನಾಂಗಗಳೊಳಗಿಂದ ಒಟ್ಟುಗೂಡಿ ದನ ಮೊದಲಾದ ಸೊತ್ತನ್ನು ಸಂಗ್ರಹಿಸಿಕೊಂಡು ಲೋಕದ ನಟ್ಟನಡುವೆ ವಾಸಿಸುವವರನ್ನು ಹತಿಸಬೇಕೆಂತಲೂ ಕುತಂತ್ರವನ್ನು ಕಲ್ಪಿಸುವಿ.
Kannada Bible (KNCL) BSI 2016
‘ಕೊಳ್ಳೆಹೊಡೆಯಬೇಕು, ನಿರ್ಜನವಾಗಿದ್ದು ಜನಭರಿತವಾದ ಪ್ರದೇಶಗಳ ಮೇಲೆ ಕೈಮಾಡಬೇಕು ಹಾಗು ಜನಾಂಗಗಳಿಂದ ಒಟ್ಟುಗೂಡಿ, ದನ ಮೊದಲಾದ ಸೊತ್ತನ್ನು ಸಂಗ್ರಹಿಸಿಕೊಂಡು ಲೋಕದ ನಟ್ಟನಡುವೆ ವಾಸಿಸುವವರನ್ನು ಹತಿಸಬೇಕು’ ಎಂದು ಕುತಂತ್ರ ಕಲ್ಪಿಸುವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಸುಲಿಗೆಯನ್ನು ಮತ್ತು ಕೊಳ್ಳೆಯನ್ನು ತೆಗೆದುಕೊಳ್ಳುವೆನು. ಹೀಗೆ ನಿರ್ಜನವಾಗಿದ್ದು ಜನಭರಿತವಾದ ಪ್ರದೇಶಗಳನ್ನು ಎದುರಿಸುವೆನು. ಜನಾಂಗಗಳಿಂದ ಒಟ್ಟುಗೂಡಿ, ಪಶುಗಳೂ ಸಂಪತ್ತೂ ಉಳ್ಳಂಥ ಮತ್ತು ಭೂಮಿಯ ಮಧ್ಯದಲ್ಲಿ ವಾಸಿಸುವವರ ಮೇಲೆಯೂ ಕೈಹಾಕುವೆನು,” ಎಂದು ಹೇಳುವೆ.