Ezekiel 38:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಶೆಘ, ದೆದಾನ್, ತಾರ್ಷೀಷಿನ ವ್ಯಾಪಾರಿಗಳು ಮತ್ತು ಇತರ ವಾಣಿಜ್ಯ ನಗರಗಳ ಜನರು ನಿನ್ನನ್ನು ನೋಡಿ, ‘ನೀನು ಸೂರೆಮಾಡಲು ಘಂದಿರುವಿಯಾ? ಬೆಳ್ಳಿಘಂಗಾರಗಳನ್ನೂ ಪಶುಗಳನ್ನೂ ಬೆಲೆಬಾಳುವ ವಸ್ತುಗಳನ್ನೂ ಕೊಳ್ಳೆಹೊಡೆಯಲು ನಿನ್ನ ಸೈನ್ಯಸಮೇತವಾಗಿ ಘಂದಿರುವೆಯಾ?”‘ ಎಂದು ವಿಚಾರಿಸುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶೆಬದವರೂ, ದೆದಾನಿನವರೂ, ತಾರ್ಷೀಷಿನ ವರ್ತಕರೂ, ಅದರ ಸಿಂಹಪ್ರಾಯರೆಲ್ಲರೂ ನಿನ್ನನ್ನು ನೋಡಿ, ‘ನೀನು ಸೂರೆಮಾಡಲಿಕ್ಕೆ ಬಂದಿಯೋ? ಕೊಳ್ಳೆಹೊಡೆದು ಬೆಳ್ಳಿಬಂಗಾರವನ್ನು ದೋಚಿಕೊಂಡು, ಧನ ಕನಕ ಮುಂತಾದ ಸೊತ್ತನ್ನು ಅಪಹರಿಸಿ, ಅಪಾರವಾದ ಆಸ್ತಿಯನ್ನು ಸುಲಿದುಕೊಂಡು ಹೋಗಲು ನಿನ್ನ ತಂಡವನ್ನು ಕೂಡಿಸಿಕೊಂಡು ಬಂದೆಯಾ?’” ಎಂದು ಕೇಳುವರು.
Kannada BSI Bible 2016
ಶೇಬಾ, ದೇದಾನ್‌ ಮತ್ತು ತಾರ್ಷೀಷಿನ ವರ್ತಕರು, ಎಲ್ಲಾ ಪ್ರಾಯದ ಸಿಂಹಗಳೊಂದಿಗೆ ಅಲ್ಲಿ ನಿನಗೆ--ನೀನು ಸುಲಿಗೆ ತೆಗೆದುಕೊಳ್ಳಬೇಕೆಂದು ಬಂದಿಯಾ ಕೊಳ್ಳೆಹೊಡೆಯುವದಕ್ಕಾಗಿಯೇ ನಿನ್ನ ತಂಡ ವನ್ನು ಕೂಡಿಸಿದೆಯೋ? ಬಂಗಾರ ಮತ್ತು ಬೆಳ್ಳಿಯನ್ನು ಹೊತ್ತುಕೊಂಡು ದನಗಳನ್ನು ಸಂಪತ್ತನ್ನೂ ತೆಗೆದು ಕೊಂಡು ಮಹಾಸುಲಿಗೆ ತೆಗೆದುಕೊಳ್ಳಬೇಕೆಂದೋ ಅನ್ನುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಶೆಬದವರೂ ದೆದಾನಿನವರೂ ತಾರ್ಷೀಷಿನ ವರ್ತಕರೂ ಅದರ ಸಿಂಹಪ್ರಾಯರೆಲ್ಲರೂ ನಿನ್ನನ್ನು ನೋಡಿ - ನೀನು ಸೂರೆಮಾಡಲಿಕ್ಕೆ ಬಂದಿಯೋ? ಕೊಳ್ಳೆಹೊಡೆದು ಬೆಳ್ಳಿಬಂಗಾರವನ್ನು ದೋಚಿಕೊಂಡು ದನ ಮುಂತಾದ ಸೊತ್ತನ್ನು ಅಪಹರಿಸಿ ಅಪಾರವಾದ ಆಸ್ತಿಯನ್ನು ಸುಲಿದುಕೊಂಡುಹೋಗಲು ನಿನ್ನ ತಂಡವನ್ನು ಕೂಡಿಸಿಕೊಂಡು ಬಂದಿಯಾ ಎಂದು ಕೇಳುವರು.
Kannada Bible (KNCL) BSI 2016
ಶೆಬದವರು, ದೆದಾನಿನವರು, ತಾರ್ಷೀಷಿನ ವರ್ತಕರು ಹಾಗು ಅದರ ಸಿಂಹಪ್ರಾಯರೆಲ್ಲರು ನಿನ್ನನ್ನು ನೋಡಿ, ‘ನೀನು ಸೂರೆಮಾಡಲಿಕ್ಕೆ ಬಂದಿಯೋ? ಕೊಳ್ಳೆಹೊಡೆದು ಬೆಳ್ಳಿಬಂಗಾರವನ್ನು ದೋಚಿಕೊಂಡು, ದನ ಮುಂತಾದ ಸೊತ್ತನ್ನು ಅಪಹರಿಸಿ, ಅಪಾರವಾದ ಆಸ್ತಿಯನ್ನು ಸುಲಿದುಕೊಂಡು ಹೋಗಲು ನಿನ್ನ ತಂಡವನ್ನು ಕೂಡಿಸಿಕೊಂಡು ಬಂದಿಯೋ?’ ಎಂದು ಕೇಳುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಶೆಬ, ದೆದಾನ್ ಮತ್ತು ತಾರ್ಷೀಷಿನ ವರ್ತಕರು, ಅವಳ ಎಲ್ಲಾ ಹಳ್ಳಿಗಳೊಂದಿಗೆ ಅಲ್ಲಿ ನಿನಗೆ, “ನೀನು ಸುಲಿಗೆ ತೆಗೆದುಕೊಳ್ಳಬೇಕೆಂದು ಬಂದೆಯಾ? ಕೊಳ್ಳೆ ಹೊಡೆಯುವುದಕ್ಕಾಗಿಯೇ ನಿನ್ನ ತಂಡವನ್ನು ಕೂಡಿಸಿದೆಯೋ? ಬಂಗಾರ ಮತ್ತು ಬೆಳ್ಳಿಯನ್ನು ಹೊತ್ತುಕೊಂಡು ಪಶುಗಳನ್ನೂ ಸಂಪತ್ತನ್ನೂ ತೆಗೆದುಕೊಂಡು ಮಹಾ ಸುಲಿಗೆ ತೆಗೆದುಕೊಳ್ಳಬೇಕೆಂದೋ?” ಎನ್ನುವರು.’