Ezekiel 38:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರು ಹೇಳಿದ್ದೇನೆಂದರೆ, “ನರಪುತ್ರನೇ, ನನ್ನ ಪರವಾಗಿ ಗೋಗನಿಗೆ ಹೇಳು, ನನ್ನ ಒಡೆಯನಾಗಿರುವ ಯೆಹೋವನು ಹೀಗೆನ್ನುತ್ತಾನೆ: ‘ನನ್ನ ಜನರು ಸಮಾಧಾನದಿಂದಲೂ ಶಾಂತಿಯಿಂದಲೂ ಜೀವಿಸುತ್ತಿರುವಾಗ ನೀನು ಅವರನ್ನು ವಶ ಮಾಡಲು ಘಂದಿರುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲು, “ನರಪುತ್ರನೇ, ನೀನು ಗೋಗನಿಗೆ ಈ ಪ್ರವಾದನೆಯನ್ನು ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನನ್ನ ಜನರಾದ ಇಸ್ರಾಯೇಲರು ನೆಮ್ಮದಿಯಾಗಿ ವಾಸಿಸುವ ಕಾಲದಲ್ಲಿ ಆ ನೆಮ್ಮದಿಯು ನಿನಗೆ ಗೊತ್ತಾಗುವುದು.
Kannada BSI Bible 2016
ಆದದರಿಂದ ಮನುಷ್ಯಪುತ್ರನೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಗೋಗನಿಗೆ ಪ್ರವಾ ದಿಸು ಮತ್ತು ಹೇಳು--ಯಾವಾಗ ನನ್ನ ಜನರಾದ ಇಸ್ರಾಯೇಲ್ಯರು ಸುಖವಾಗಿ ವಾಸಿಸುವರೋ ಆ ದಿನದಲ್ಲಿ ಅದು ನಿನಗೆ ತಿಳಿಯುವುದಿಲ್ಲವೋ
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲು, ನರಪುತ್ರನೇ, ನೀನು ಗೋಗನಿಗೆ ಈ ದೈವೋಕ್ತಿಯನ್ನು ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಜನರಾದ ಇಸ್ರಾಯೇಲ್ಯರು ನೆಮ್ಮದಿಯಾಗಿ ವಾಸಿಸುವ ಕಾಲದಲ್ಲಿ ಆ ನೆಮ್ಮದಿಯು ನಿನಗೆ ಗೊತ್ತಾಗುವದಲ್ಲವೆ.
Kannada Bible (KNCL) BSI 2016
“ಹೀಗಿರಲು ನರಪುತ್ರನೇ, ನೀನು ಗೋಗನಿಗೆ ಈ ದೈವೋಕ್ತಿಯನ್ನು ನುಡಿ: ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ನನ್ನ ಜನರಾದ ಇಸ್ರಯೇಲರು ನೆಮ್ಮದಿಯಾಗಿ ವಾಸಿಸುವ ಕಾಲದಲ್ಲಿ ಆ ನೆಮ್ಮದಿಯು ನನಗೆ ಗೊತ್ತಾಗುವುದಿಲ್ಲವೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದ್ದರಿಂದ ಮನುಷ್ಯಪುತ್ರನೇ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ಗೋಗಿಗೆ ಪ್ರವಾದಿಸಿ ಹೇಳು, ನನ್ನ ಜನರಾದ ಇಸ್ರಾಯೇಲರು ಸುಖವಾಗಿ ವಾಸಿಸುವರೋ ಆ ದಿನದಲ್ಲಿ ಅದು ನಿನಗೆ ತಿಳಿಯುವುದಿಲ್ಲವೋ