Ezekiel 38:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇದು ನನ್ನ ಒಡೆಯನಾದ ಯೆಹೋವನ ನುಡಿ: “ಆಗ ನಾನು ನಿನ್ನ ವಿಷಯದಲ್ಲಿ ಹೇಳಿದ್ದು ಜನರು ಜ್ಞಾಪಕಕ್ಕೆ ಬರುವದು. ನಾನು ಇದನ್ನು ನನ್ನ ಸೇವಕರಾದ ಪ್ರವಾದಿಗಳಿಗೆ ತಿಳಿಸಿರುತ್ತೇನೆ ಎಂದು ಅರಿಯುವರು. ಹಿಂದಿನ ಕಾಲದಲ್ಲಿ ಇಸ್ರೇಲ್ ಪ್ರವಾದಿಗಳು ನನ್ನ ಪರವಾಗಿ ಮಾತನಾಡಿ ನೀವು ಅವರ ವಿರುದ್ಧವಾಗಿ ಯುದ್ಧಕ್ಕೆ ಬರುವಿರೆಂದು ಹೇಳಿರುತ್ತೇನೆ ಎಂಬುದನ್ನು ತಮ್ಮ ಜ್ಞಾಪಕಕ್ಕೆ ತರುವರು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಸೇವಕರಾದ ಇಸ್ರಾಯೇಲಿನ ಪ್ರವಾದಿಗಳು ಪುರಾತನ ಕಾಲದಲ್ಲಿ ಬಹು ವರ್ಷ ಪ್ರವಾದಿಸುತ್ತಾ, ನಾನು ಒಬ್ಬನನ್ನು ಇಸ್ರಾಯೇಲರ ಮೇಲೆ ಬೀಳ ಮಾಡುವೆನು” ಎಂದು ಮುಂತಿಳಿಸಿದಂತೆ; ನಾನು ಅವರ ಮೂಲಕ ಮುಂತಿಳಿಸಿದವನು ನೀನೇ ಅಲ್ಲವೇ.
Kannada BSI Bible 2016
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಯಾವನ ವಿಷಯವಾಗಿ ನನ್ನ ಸೇವಕರಾದ ಇಸ್ರಾಯೇಲಿನ ಪ್ರವಾದಿಗಳಿಂದ ಪೂರ್ವಕಾಲದಲ್ಲಿ ಮಾತನಾಡಿದೆನೋ ಅವನು ನೀನೇ ಅಲ್ಲವೇ? ನಿನ್ನನ್ನು ಅವರಿಗೆ ವಿರೋಧವಾಗಿ ಬರ ಮಾಡುತ್ತೇನೆಂದು ಆ ದಿನಗಳಲ್ಲಿ ಅನೇಕ ವರ್ಷಗ ಳಿಗೆ ಮುಂಚೆ ಪ್ರವಾದಿಸಿದರಲ್ಲವೇ?
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಸೇವಕರಾದ ಇಸ್ರಾಯೇಲಿನ ಪ್ರವಾದಿಗಳು ಪುರಾತನಕಾಲದಲ್ಲಿ ಬಹುವರುಷ ಪ್ರವಾದಿಸುತ್ತಾ ನಾನು ಒಬ್ಬನನ್ನು ಇಸ್ರಾಯೇಲ್ಯರ ಮೇಲೆ ಬೀಳಮಾಡುವೆನು ಎಂದು ಮುಂತಿಳಿಸಿದ್ದರಷ್ಟೆ; ನಾನು ಅವರ ಮೂಲಕ ಮುಂತಿಳಿಸಿದವನು ನೀನೇ ಅಲ್ಲವೇ.
Kannada Bible (KNCL) BSI 2016
ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ‘ನನ್ನ ದಾಸರಾದ ಇಸ್ರಯೇಲಿನ ಪ್ರವಾದಿಗಳು ಪುರಾತನಕಾಲದಲ್ಲಿ ಬಹು ವರ್ಷ ಪ್ರವಾದಿಸುತ್ತಾ ನಾನು ಒಬ್ಬನನ್ನು ಇಸ್ರಯೇಲರ ಮೇಲೆ ಬೀಳಮಾಡುವೆನು, ಎಂದು ಮುಂತಿಳಿಸಿದ್ದರು; ನಾನು ಅವರ ಮುಖಾಂತರ ಮುಂತಿಳಿಸಿದವನು ನೀನೇ ಅಲ್ಲವೇ?’
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಯಾವನ ವಿಷಯವಾಗಿ ನನ್ನ ಸೇವಕರಾದ ಇಸ್ರಾಯೇಲಿನ ಪ್ರವಾದಿಗಳಿಂದ ಪೂರ್ವಕಾಲದಲ್ಲಿ ಮಾತನಾಡಿದೆನೋ ಅವನು ನೀನೇ ಅಲ್ಲವೇ? ನಿನ್ನನ್ನು ಅವರಿಗೆ ವಿರೋಧವಾಗಿ ಬರಮಾಡುತ್ತೇನೆಂದು ಆ ದಿನಗಳಲ್ಲಿ ಅನೇಕ ವರ್ಷಗಳಿಗೆ ಮುಂಚೆ ಪ್ರವಾದಿಸಿದೆಯಲ್ಲವೇ?