Ezekiel 38:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ಇಸ್ರೇಲಿನ ಪರ್ವತಗಳಲ್ಲಿ ಗೋಗನಿಗೆ ಭಯಂಕರ ಪರಿಸ್ಥಿತಿ ಉಂಟಾಗುವಂತೆ ಮಾಡುವೆನು. ಅವನ ಸೈನಿಕರು ಭಯಗೊಂಡು ಒಬ್ಬರನೊಐಬ್ಬರು ಕತ್ತಿಯಿಂದ ಕೊಲ್ಲುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಖಡ್ಗವು ನನ್ನ ಪರ್ವತಗಳಲ್ಲೆಲ್ಲಾ ಗೋಗನನ್ನು ಸಂಹರಿಸಲಿ ಎಂದು ಅಪ್ಪಣೆಕೊಡುವೆನು; ಪ್ರತಿಯೊಬ್ಬ ಮನುಷ್ಯನ ಕತ್ತಿಯೂ ಅವನ ಸಹೋದರನಿಗೆ ವಿರುದ್ಧವಾಗಿರುವುದು.
Kannada BSI Bible 2016
ನನ್ನ ಎಲ್ಲಾ ಪರ್ವತಗಳಲ್ಲೂ ನಾನು ಅವನಿಗೆ ವಿರುದ್ಧವಾಗಿ ಕತ್ತಿಯನ್ನು ಕರೆಯುವೆ ನೆಂದೂ ದೇವರಾದ ಕರ್ತನು ಹೇಳುತ್ತಾನೆ; ಪ್ರತಿ ಯೊಬ್ಬ ಮನುಷ್ಯನ ಕತ್ತಿಯೂ ಅವನ ಸಹೋದರನಿಗೆ ವಿರೋಧವಾಗಿರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಖಡ್ಗವು ನನ್ನ ಪರ್ವತಗಳಲ್ಲೆಲ್ಲಾ ಗೋಗನವರನ್ನು ಸಂಹರಿಸಲಿ ಎಂದು ಅಪ್ಪಣೆಕೊಡುವೆನು; ಒಬ್ಬರಿಂದೊಬ್ಬರು ಹತರಾಗುವರು.
Kannada Bible (KNCL) BSI 2016
ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ‘ಖಡ್ಗವು ನನ್ನ ಪರ್ವತಗಳಲ್ಲೆಲ್ಲಾ ಗೋಗನವರನ್ನು ಸಂಹರಿಸಲಿ,’ ಎಂದು ಅಪ್ಪಣೆಕೊಡುವೆನು; ಒಬ್ಬರಿಂದೊಬ್ಬರು ಹತರಾಗುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಎಲ್ಲಾ ಪರ್ವತಗಳಲ್ಲೂ ನಾನು ಅವನಿಗೆ ವಿರುದ್ಧವಾಗಿ ಖಡ್ಗವನ್ನು ಕರೆಯುವೆನೆಂದೂ ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಪ್ರತಿಯೊಬ್ಬ ಮನುಷ್ಯನ ಖಡ್ಗವೂ ಅವನ ಸಹೋದರನಿಗೆ ವಿರೋಧವಾಗಿರುವುದು.