Ezekiel 38:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಲ್ಲಿ ಗೋಮೆರ್ಯ ರಾಜ್ಯವು ತನ್ನ ಎಲ್ಲಾ ಸಿಪಾಯಿಗಳೊಂದಿಗೆ ಇರುವುದು. ಘಹು ದೂರದ ಉತ್ತರ ದಿಕ್ಕಿನಲ್ಲಿರುವ ತೋಗರ್ಮ ರಾಜ್ಯವೂ ಇದರಲ್ಲಿ ಸೇರಿರುವದು. ಈ ಕೈದಿಗಳ ಸಾಲಿನಲ್ಲಿ ಅನೇಕಾನೇಕ ಮಂದಿ ಇರುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಉತ್ತರದಿಕ್ಕಿನ ಕಟ್ಟಕಡೆಯಿಂದ ಬಂದ ಗೋಮೆರ್ ಮತ್ತು ಸೈನ್ಯದವರನ್ನೂ, ತೋಗರ್ಮದವರನ್ನು ಮತ್ತು ಅನೇಕ ಜನರನ್ನು ನಿನ್ನೊಂದಿಗೆ ಬರಮಾಡುವೆನು.
Kannada BSI Bible 2016
ಗೋಮೆರ್‌ ಮತ್ತು ಅವನ ಎಲ್ಲಾ ದಳಗಳನ್ನು ಉತ್ತರ ದಿಕ್ಕಿನ ತೋಗರ್ಮನ ಮನೆತನದವರನ್ನೂ ಅವನ ಎಲ್ಲಾ ದಳಗಳನ್ನೂ ನಿನ್ನ ಸಂಗಡವಿರುವ ಅನೇಕ ಜನರನ್ನೂ ಹೊರಗೆ ತರುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರನ್ನು ಗುವ್ಮಿುಗುವ್ಮಿುಯಾದ ಗೋಮೆರ್ಯರನ್ನು, ಉತ್ತರದಿಕ್ಕಿನ ಕಟ್ಟಕಡೆಯಿಂದ ಬಂದ ಗುವ್ಮಿುಗುವ್ಮಿುಯಾದ ತೋಗರ್ಮದವರನ್ನು ಅಂತು ಅನೇಕಾನೇಕ ಜನಾಂಗಗಳನ್ನು ನಿನ್ನೊಂದಿಗೆ ಬರಮಾಡುವೆನು.
Kannada Bible (KNCL) BSI 2016
ಪಡೆಪಡೆಯಾದ ಗೋಮೆರ್ಯರನ್ನು, ಉತ್ತರದಿಕ್ಕಿನ ಕಟ್ಟಕಡೆಯಿಂದ ಬಂದ ಪಡೆಪಡೆಯಾದ ತೋಗರ್ಮದವರನ್ನು, ಹೀಗೆ ಅನೇಕಾನೇಕ ಜನಾಂಗಗಳನ್ನು ನಿನ್ನೊಂದಿಗೆ ಬರಮಾಡುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗೋಮೆರ್ ಮತ್ತು ಅದರ ಎಲ್ಲಾ ದಳಗಳನ್ನೂ, ಉತ್ತರ ದಿಕ್ಕಿನ ತೋಗರ್ಮದವರನ್ನೂ ಮತ್ತು ಅದರ ಎಲ್ಲಾ ದಳಗಳನ್ನೂ, ಹೀಗೆ ನಿನ್ನ ಸಂಗಡವಿರುವ ಅನೇಕ ಜನರನ್ನೂ ನಿನ್ನೊಂದಿಗೆ ಬರಮಾಡುವೆನು.