Ezekiel 38:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಘಹುಕಾಲದ ನಂತರ, ನಿಮ್ಮನ್ನು ಕೆಲಸಕ್ಕೆ ತೆಗೆದುಕೊಳ್ಳಲಾಗುವುದು. ಅನಂತರದ ವರ್ಷಗಳಲ್ಲಿ, ನೀವು ಯುದ್ಧದಿಂದ ಗುಣಹೊಂದಿರುವ ದೇಶಕ್ಕೆ ಬರುವಿರಿ. ಆ ದೇಶದಲ್ಲಿರುವ ಜನರು ತಾವು ಕಳುಹಿಸಲ್ಪಟ್ಟಿದ್ದ ಅನೇಕ ದೇಶಗಳಿಂದ ಹಿಂತಿರುಗಿ ಬಂದು ಒಟ್ಟಾಗಿ ಸೇರಿದವರಾಗಿದ್ದಾರೆ. ಅವರು ಇಸ್ರೇಲಿನ ಪರ್ವತಗಳಿಗೆ ಮತ್ತೆ ಬರಮಾಡಲ್ಪಟ್ಟರಾಗಿದ್ದಾರೆ. ಹಿಂದಿನ ಕಾಲದಲ್ಲಿ ಅನೇಕ ಸಲ ಈ ಪರ್ವತಗಳು ಹಾಳು ಮಾಡಲ್ಪಟ್ಟಿದ್ದರೂ ಸಹ ಈಗ ಜನರನ್ನು ಮತ್ತೆ ಕರೆದುಕೊಂಡು ಬರಲಾಗಿದೆ ಮತ್ತು ಅವರೆಲ್ಲರೂ ಅಲ್ಲಿ ಸುರಕ್ಷಿತವಾಗಿ ನೆಲೆಸುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಹಳ ದಿನಗಳಾದ ಮೇಲೆ ನಾನು ನಿನ್ನನ್ನು ಕರೆಯುತ್ತೇನೆ; ಕೆಲವು ವರ್ಷಗಳ ನಂತರ ಖಡ್ಗದಿಂದ ಉಳಿದುಕೊಂಡ ದೇಶಕ್ಕೂ, ಯಾವಾಗಲೂ ಹಾಳಾಗಿದ್ದ ಇಸ್ರಾಯೇಲಿನ ಪರ್ವತಗಳ ಮೇಲೆಯೂ, ಜನಾಂಗಗಳೊಳಗಿಂದ ಕೂಡಿಸಲ್ಪಟ್ಟು ಎಲ್ಲರೂ ಭದ್ರವಾಗಿ ವಾಸಿಸುವವರ ಬಳಿಗೆ ನೀನು ಬರುವಿ.
Kannada BSI Bible 2016
ಬಹಳ ದಿವಸಗಳಾದ ಮೇಲೆ ನಾನು ನಿನ್ನನ್ನು ಪರಿಶೀ ಲಿಸುತ್ತೇನೆ; ವರುಷಗಳ ಅಂತ್ಯದಲ್ಲಿ ನೀನು ಕತ್ತಿಯಿಂದ ಹಿಂತಿರುಗಿಸಲ್ಪಟ್ಟಂಥ ದೇಶಕ್ಕೂ ಯಾವಾಗಲೂ ಬೀಡಾ ಗಿದ್ದ ಇಸ್ರಾಯೇಲ್‌ ಪರ್ವತಗಳ ಮೇಲೆಯೂ ಜನಾಂಗಗಳೊಳಗಿಂದ ಮುಂದೆ ತರಲ್ಪಟ್ಟು ಎಲ್ಲರೂ ಭದ್ರವಾಗಿ ವಾಸಿಸುವವರ ಬಳಿಗೂ ಬರುವಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಹುದಿವಸಗಳ ಮೇಲೆ ನಿನಗೆ ಅಪ್ಪಣೆಯಾಗುವದು; ಖಡ್ಗದಿಂದ ನಾಶವಾಗಿ ಪುನರ್ಜೀವಿತವಾದ ದೇಶದೊಳಗೆ ನೀನು ಕಾಲಾನುಕಾಲಕ್ಕೆ ನುಗ್ಗಿ ಅನೇಕ ಜನಾಂಗಗಳೊಳಗಿಂದ ಒಟ್ಟುಗೂಡಿದ [ನನ್ನ] ಜನರ ಮೇಲೆ ಬೀಳುವಿ; ಹೌದು, ಜನಾಂಗಗಳೊಳಗಿಂದ ಪಾರಾದ ಆ ಜನರೆಲ್ಲರು ಬಹುಕಾಲ ಹಾಳಾಗಿದ್ದ ಇಸ್ರಾಯೇಲಿನ ಪರ್ವತಗಳಲ್ಲಿ ನೆಮ್ಮದಿಯಾಗಿ ವಾಸಿಸುತ್ತಿರಲು ನೀನು ಅವರ ಮೇಲೆ ಬೀಳುವಿ.
Kannada Bible (KNCL) BSI 2016
ಬಹುದಿನಗಳ ಮೇಲೆ ನಿನಗೆ ಅಪ್ಪಣೆಯಾಗಿರುವುದು; ಖಡ್ಗದಿಂದ ನಾಶವಾಗಿ, ಪುನರ್ಜೀವಿತವಾದ ದೇಶದೊಳಗೆ ನೀನು ಕಾಲಾನುಕಾಲಕ್ಕೆ ನುಗ್ಗಿ, ಅನೇಕ ಜನಾಂಗಗಳಿಂದ ಒಟ್ಟುಗೂಡಿದ ನನ್ನ ಜನರ ಮೇಲೆ ಬೀಳುವೆ; ಹೌದು, ಜನಾಂಗಗಳಿಂದ ಪಾರಾದ ಆ ಜನರೆಲ್ಲರು ಬಹುಕಾಲ ಹಾಳಾಗಿದ್ದ ಇಸ್ರಯೇಲಿನ ಪರ್ವತಗಳಲ್ಲಿ ನೆಮ್ಮದಿಯಾಗಿ ವಾಸಿಸುತ್ತಿರುವಾಗ ನೀನು ಅವರ ಮೇಲೆ ಬೀಳುವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಹಳ ದಿವಸಗಳಾದ ಮೇಲೆ ನಾನು ನಿನ್ನನ್ನು ಕರೆಯುವೆನು; ನೀನು ಯುದ್ಧದಿಂದ ಉಳಿದುಕೊಂಡ ದೇಶಕ್ಕೂ, ಯಾವಾಗಲೂ ಹಾಳಾಗಿದ್ದ ಇಸ್ರಾಯೇಲ್ ಪರ್ವತಗಳ ಮೇಲೆಯೂ, ಜನಾಂಗಗಳಿಂದ ಒಟ್ಟುಗೂಡಿ ಭದ್ರವಾಗಿ ವಾಸಿಸುವವರ ವಿರೋಧವಾಗಿ ವರ್ಷಗಳ ಅಂತ್ಯದಲ್ಲಿ ಬರುವೆ.