Ezekiel 38:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ನೀನು ಮತ್ತು ಬೇರೆ ದೇಶಗಳ ಸೈನಿಕರು ಅವರೊಂದಿಗೆ ಯುದ್ಧಮಾಡಲು ಬಿರುಗಾಳಿಯಂತೆಯೂ ಕಾರ್ಮುಗಿಲಿನಂತೆಯೂ ಬರುವಿರಿ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಮೇಲೇರಿ ಬಿರುಗಾಳಿಯಂತೆ ಹೊರಟು ಬರುವೆ. ನಿನ್ನ ಎಲ್ಲಾ ದಂಡುಗಳೂ ಅನೇಕ ಜನರ ಸಹಿತವಾಗಿ ಕಾರ್ಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವುದು.’”
Kannada BSI Bible 2016
ನೀನು ಮೇಲೇರಿ ಬಿರುಗಾಳಿಯಂತೆ ಬರುವಿ. ನೀನೂ ನಿನ್ನ ಎಲ್ಲಾ ದಂಡುಗಳೂ ಮತ್ತು ಅನೇಕ ಜನರ ಸಹಿತವಾಗಿ ಮೇಘದಂತೆ ದೇಶವನ್ನು ಮುಚ್ಚುವಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನೂ ನಿನ್ನ ಎಲ್ಲಾ ಗುವ್ಮಿುಗಳೂ ನಿನ್ನೊಂದಿಗಿರುವ ಬಹುಜನಾಂಗಗಳೂ ಬಿರುಗಾಳಿಯಂತೆ ಹೊರಟುಬರುವಿರಿ; ಕಾರ್ಮುಗಿಲಿನೋಪಾದಿಯಲ್ಲಿ ದೇಶವನ್ನು ಮುಚ್ಚಿಬಿಡುವಿರಿ.
Kannada Bible (KNCL) BSI 2016
ನೀನೂ ನಿನ್ನ ಎಲ್ಲ ಪಡೆಗಳೂ ನಿನ್ನೊಂದಿಗಿರುವ ಬಹು ಜನಾಂಗಗಳೂ ಬಿರುಗಾಳಿಯಂತೆ ಹೊರಟುಬರುವಿರಿ; ಕಾರ್ಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವಿರಿ.’
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ಮೇಲೇರಿ ಬಿರುಗಾಳಿಯಂತೆ ಬರುವೆ. ನೀನೂ ನಿನ್ನ ಎಲ್ಲಾ ದಂಡುಗಳೂ ಅನೇಕ ಜನರಸಹಿತವಾಗಿ ಮೇಘದಂತೆ ದೇಶವನ್ನು ಮುಚ್ಚುವಿರಿ.