Ezekiel 39:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನರಪುತ್ರನೇ, ನನ್ನ ಪರವಾಗಿ ಗೋಗನಿಗೆ ವಿರುದ್ಧವಾಗಿ ಹೇಳು. ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆಂದು ಅವನಿಗೆ ಹೇಳು: ‘ಗೋಗನೇ, ನೀನು ಮೆಷೆಕ್ ಮತ್ತು ತೂಘಲ್ ದೇಶಗಳ ಪ್ರಮುಖ ನಾಯಕನು. ಆದರೆ ನಾನು ನಿನಗೆ ವಿರುದ್ಧವಾಗಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈಗ, “ನರಪುತ್ರನೇ, ನೀನು ಗೋಗನಿಗೆ ವಿರುದ್ಧವಾಗಿ ಈ ಪ್ರವಾದನೆಯನ್ನು ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ರೋಷ್, ಮೆಷೆಕ್, ತೂಬಲ್ ಜನಾಂಗಗಳ ಪ್ರಭುವಾದ ಗೋಗನೇ, ಆಹಾ! ನಾನು ನಿನ್ನ ವಿರುದ್ಧವಾಗಿದ್ದೇನೆ.
Kannada BSI Bible 2016
ಆದದರಿಂದ, ಮನುಷ್ಯಪುತ್ರನೇ, ನೀನು, ಗೋಗನಿಗೆ ವಿರುದ್ಧವಾಗಿ ಪ್ರವಾದಿಸಿ, ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು --ಇಗೋ, ಮೇಷಕ್ ಮತ್ತು ತೂಬಲಿಗೆ ಮುಖ್ಯ ಪ್ರಭುವಾದ ಓ ಗೋಗನೇ, ನಾನು ನಿನಗೆ ವಿರೋಧ ವಾಗಿದ್ದೇನೆ;
Kannada BSI JV (ಕನ್ನಡ ಸತ್ಯವೇದವು J.V. (BSI))
ನರಪುತ್ರನೇ, ನೀನು ಗೋಗನಿಗೆ ವಿರುದ್ಧವಾಗಿ ಈ ದೈವೋಕ್ತಿಯನ್ನು ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ರೋಷ್ ಮೆಷೆಕ್ ತೂಬಲ್ ಜನಾಂಗಗಳ ಪ್ರಭುವಾದ ಗೋಗನೇ,
Kannada Bible (KNCL) BSI 2016
“ನರಪುತ್ರನೇ, ನೀನು ಗೋಗನಿಗೆ ವಿರುದ್ಧ ಈ ದೈವೋಕ್ತಿಯನ್ನು ನುಡಿ: ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ‘ರೋಷ್, ಮೆಷೆಕ್, ತೂಬಲ್ ಜನಾಂಗಗಳ ಒಡೆಯನಾದ ಗೋಗನೇ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಮನುಷ್ಯಪುತ್ರನೇ, ನೀನು, ಗೋಗನಿಗೆ ವಿರುದ್ಧವಾಗಿ ಪ್ರವಾದಿಸಿ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆಂದು ಹೇಳು, ರೋಷ್, ಮೆಷೆಕ್ ಮತ್ತು ತೂಬಲಿಗೆ ಮುಖ್ಯ ಪ್ರಭುವಾದ ಓ ಗೋಗನೇ, ನಿನಗೆ ನಾನು ವಿರೋಧವಾಗಿದ್ದೇನೆ.