Ezekiel 39:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಅವರಿಗೆ ಅಡವಿಯಿಂದ ಮತ್ತು ಬಯಲಿನಿಂದ ಸೌದೆಯನ್ನು ತೆಗೆಯುವ ಅವಶ್ಯಕತೆ ಇರುವದಿಲ್ಲ. ಅವರು ಸತ್ತ ಸೈನಿಕರಿಂದ ಬೆಲೆಬಾಳುವ ವಸ್ತುಗಳನ್ನು ದೋಚುವರು. ತಮ್ಮಿಂದ ದೋಚಿದ ಸೈನಿಕರಿಂದ ಅವರು ದೋಚುವರು.” ಇದು ಒಡೆಯನಾದ ಯೆಹೋವನ ನುಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕಾಗಿ ಅವರು ಕಾಡಿನಿಂದ ಸೌದೆಯನ್ನು ತರಬೇಕಾಗುವುದಿಲ್ಲ, ವನದಲ್ಲಿ ಮರವನ್ನು ಕಡಿಯಬೇಕಾಗುವುದಿಲ್ಲ; ಆಯುಧಗಳನ್ನೇ ಸೌದೆಯನ್ನಾಗಿ ಉರಿಸುವರು; ತಮ್ಮನ್ನು ಸೂರೆಮಾಡಿದವರನ್ನು ತಾವು ಸೂರೆಮಾಡುವರು, ತಮ್ಮನ್ನು ಕೊಳ್ಳೆಹೊಡೆದವರನ್ನು ತಾವು ಕೊಳ್ಳೆಹೊಡೆಯುವರು” ಇದು ಕರ್ತನಾದ ಯೆಹೋವನ ನುಡಿ.
Kannada BSI Bible 2016
ಅದಕ್ಕಾಗಿ ಅವರು ಬಯಲಿನಿಂದ ಮರ ಗಳನ್ನಾಗಲಿ ತೆಗೆದುಕೊಳ್ಳುವುದಿಲ್ಲ, ಅಥವಾ ಅರಣ್ಯ ದಲ್ಲಿ ಯಾವುದನ್ನೂ ಕತ್ತರಿಸಿಕೊಳ್ಳುವದೂ ಇಲ್ಲ; ಅವರು ಆಯುಧಗಳನ್ನು ಬೆಂಕಿಯಿಂದಲೇ ಸುಡುವರು; ಅವರು ಸೂರೆಯಾದವುಗಳನ್ನು ಸೂರೆಮಾಡುವರು ಮತ್ತು ಕೊಳ್ಳೆಹೊಡೆದವರನ್ನು ತಾವು ಕೊಳ್ಳೆಹೊಡೆ ಯುವರು ಎಂದು ದೇವರಾದ ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಾಡಿನಿಂದ ಸೌದೆಯನ್ನು ತರಬೇಕಾಗುವದಿಲ್ಲ, ವನದಲ್ಲಿ ಮರವನ್ನು ಕಡಿಯಬೇಕಾಗುವದಿಲ್ಲ; ಆಯುಧಗಳನ್ನೇ ಉರಿಸುವರು; ತಮ್ಮನ್ನು ಸೂರೆಮಾಡಿದವರನ್ನು ತಾವು ಸೂರೆಮಾಡುವರು, ತಮ್ಮನ್ನು ಕೊಳ್ಳೆ ಹೊಡೆದವರನ್ನು ತಾವು ಕೊಳ್ಳೆಹೊಡೆಯುವರು; ಇದು ಕರ್ತನಾದ ಯೆಹೋವನ ನುಡಿ.
Kannada Bible (KNCL) BSI 2016
ಕಾಡಿನಿಂದ ಸೌದೆಯನ್ನು ತರಬೇಕಾಗುವುದಿಲ್ಲ, ವನದಲ್ಲಿ ಮರವನ್ನು ಕಡಿಯಬೇಕಾಗುವುದಿಲ್ಲ; ಆಯುಧಗಳನ್ನೇ ಉರಿಸುವರು. ತಮ್ಮನ್ನು ಸೂರೆಮಾಡಿದವರನ್ನು ತಾವು ಸೂರೆಮಾಡುವರು, ತಮ್ಮನ್ನು ಕೊಳ್ಳೆಹೊಡೆದವರನ್ನು ತಾವು ಕೊಳ್ಳೆಹೊಡೆಯುವರು; ಇದು ಸರ್ವೇಶ್ವರನಾದ ದೇವರ ನುಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕಾಗಿ ಅವರು ಬಯಲಿನಿಂದ ಮರಗಳನ್ನು ತೆಗೆದುಕೊಳ್ಳುವುದಿಲ್ಲ ಅಥವಾ ಅರಣ್ಯಗಳಲ್ಲಿ ಯಾವುದನ್ನೂ ಕತ್ತರಿಸಿಕೊಳ್ಳುವುದೂ ಇಲ್ಲ, ಅವರು ಆಯುಧಗಳನ್ನು ಬೆಂಕಿಗೆ ಸೌದೆಯಾಗಿ ಉಪಯೋಗಿಸುವರು. ಅವರು ಸೂರೆಯಾದವುಗಳನ್ನು ಸೂರೆ ಮಾಡುವರು ಮತ್ತು ಕೊಳ್ಳೆ ಹೊಡೆದವರನ್ನು ತಾವು ಕೊಳ್ಳೆಹೊಡೆಯುವರು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.