Ezekiel 39:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇವರನೆಐಲ್ಲಾ ಸಮಾಊ ಮಾಡಲು ಇಸ್ರೇಲರಿಗೆ ಏಳು ತಿಂಗಳು ಬೇಕಾಗುವದು. ತಮ್ಮ ರಾಜ್ಯವನ್ನು ಶುದ್ಧಪಡಿಸಲು ಅವರು ಹಾಗೆ ಮಾಡಲೇಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರು ದೇಶವನ್ನು ಶುದ್ಧಿಮಾಡುವುದಕ್ಕಾಗಿ ಏಳು ತಿಂಗಳು ಅವರನ್ನು ಸಮಾಧಿ ಮಾಡುತ್ತಲೇ ಇರುವರು.
Kannada BSI Bible 2016
ಇಸ್ರಾಯೇಲನ ಮನೆತನ ದವರು ದೇಶವನ್ನು ಶುದ್ಧಮಾಡುವ ಹಾಗೆ ಅವರನ್ನು ಏಳು ತಿಂಗಳುಗಳ ವರೆಗೂ ಸಮಾಧಿಮಾಡುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರು ದೇಶವನ್ನು ಶುದ್ಧಿಮಾಡುವದಕ್ಕಾಗಿ ಏಳು ತಿಂಗಳು ಅವರನ್ನು ಹೂಣುತ್ತಲೇ ಇರುವರು.
Kannada Bible (KNCL) BSI 2016
ಇಸ್ರಯೇಲರು ನಾಡನ್ನು ಶುದ್ಧಿಮಾಡುವುದಕ್ಕಾಗಿ ಏಳು ತಿಂಗಳು ಅವರನ್ನು ಹೂಣುತ್ತಲೇ ಇರುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಇಸ್ರಾಯೇಲನ ಮನೆತನದವರು ದೇಶವನ್ನು ಶುದ್ಧಮಾಡುವ ಹಾಗೆ ಅವರನ್ನು ಏಳು ತಿಂಗಳುಗಳವರೆಗೂ ಸಮಾಧಿಮಾಡುವರು.