Ezekiel 39:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಾಮಾನ್ಯ ಜನರು ಶತ್ರು ಸೈನಿಕರನ್ನು ಹೂಣಿಡುವರು. ನಾನು ನನ್ನ ಹೆಸರನ್ನು ಪ್ರಸಿದ್ಧಿಗೆ ತರುವ ದಿವಸ ಆ ಜನರು ಪ್ರಸಿದ್ಧರಾಗುವರು.” ಇದು ನನ್ನ ಒಡೆಯನಾದ ಯೆಹೋವನ ನುಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೌದು, ದೇಶದ ಸಕಲ ಪ್ರಜೆಗಳು ಅವರನ್ನು ಸಮಾಧಿ ಮಾಡುವರು. ಹೀಗೆ ನಾನು ಮಹಿಮೆಯನ್ನು ಹೊಂದುವ ದಿನವು ನನ್ನ ಜನರಿಗೆ ಸ್ಮರಣೆಯ ದಿನವಾಗಿರುವುದು” ಇದು ಕರ್ತನಾದ ಯೆಹೋವನ ನುಡಿ.
Kannada BSI Bible 2016
ಹೌದು ದೇಶದ ಎಲ್ಲಾ ಜನರು ಅವರನ್ನು ಹೂಣಿಡುವರು; ನಾನು ಮಹಿಮೆಯನ್ನು ಹೊಂದುವ ದಿನದಲ್ಲಿ ಅದರ ಪ್ರಖ್ಯಾತಿ ಅವರಿಗಾಗುವದು ಎಂದು ದೇವರಾದ ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೌದು, ದೇಶದ ಸಕಲಪ್ರಜೆಗಳು ಅವರನ್ನು ಹೂಳಿಬಿಡುವರು; ಹೀಗೆ ನಾನು ಪ್ರಖ್ಯಾತಿಗೊಳ್ಳುವಾಗ ನನ್ನ ಜನರಿಗೆ ಹೆಸರುವಾಸಿಯಾಗುವದು; ಇದು ಕರ್ತನಾದ ಯೆಹೋವನ ನುಡಿ.
Kannada Bible (KNCL) BSI 2016
ಹೌದು, ದೇಶದ ಸಕಲ ಪ್ರಜೆಗಳು ಅವರನ್ನು ಹೂಳಿಬಿಡುವರು. ಹೀಗೆ ನನ್ನ ಮಹಿಮೆಯನ್ನು ಪ್ರತ್ಯಕ್ಷಗೊಳಿಸುವಾಗ ನನ್ನ ಜನರಿಗೆ ಗೌರವ ಉಂಟಾಗುವುದು; ಇದು ಸರ್ವೇಶ್ವರನಾದ ದೇವರ ನುಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇಶದ ಎಲ್ಲಾ ಜನರು ಅವರನ್ನು ಹೂಳಿಡುವರು. ನಾನು ಮಹಿಮೆಯನ್ನು ಹೊಂದುವ ದಿನವು ಅವರಿಗೆ ಸ್ಮರಣ ದಿನವಾಗಿರುವುದು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.