Ezekiel 39:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಹೆಣಗಳನ್ನು ಹೂಳಿಟ್ಟು ದೇಶವನ್ನು ಶುದ್ಧಗೊಳಿಸುವ ಕೆಲಸಗಾರರಿಗೆ ಖಾಯಂ ಕೆಲಸ ಕೊಡಲಾಗುವದು. ಅವರು ದೇಶದಲ್ಲೆಲ್ಲಾ ಹೆಣಗಳನ್ನು ಹುಡುಕಿ ತೆಗೆಯುವರು. ಅವರಿಗೆ ಏಳು ತಿಂಗಳು ಙೇಕಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಅವರು ದೇಶವನ್ನು ಶುದ್ಧಿ ಮಾಡುವುದಕ್ಕೆ ತಕ್ಕವರನ್ನು ಆರಿಸಿ, ದೇಶದಲ್ಲಿ ತಿರುಗುತ್ತಾ ನೆಲದ ಮೇಲೆ ಉಳಿದಿರುವವರನ್ನು ಸಮಾಧಿ ಮಾಡುವುದಕ್ಕೆ ಯಾವಾಗಲೂ ದೇಶವನ್ನು ಹಾದುಹೋಗುವ ಮನುಷ್ಯರನ್ನೇ ನೇಮಿಸುವರು ಮತ್ತು ಏಳು ತಿಂಗಳಾದ ಮೇಲೆ ಇವರು ಈ ಹುಡುಕುವ ಕೆಲಸದಲ್ಲಿ ತೊಡಗುವರು.
Kannada BSI Bible 2016
ದೇಶವನ್ನು ಶುದ್ಧೀಕರಿಸುವ ಹಾಗೆ ಅದರ ಮೇಲೆ ಮಿಕ್ಕವರನ್ನು ಹಾದುಹೋಗುವವರ ಸಹಾಯದಿಂದ ಹೂಣಿಡುವ ದಕ್ಕೆ ಯಾವಾಗಲೂ ದೇಶವನ್ನು ಹಾದುಹೋಗುವ ಮನುಷ್ಯರನ್ನೇ ನೇಮಿಸುವರು ಮತ್ತು ಇವರು ಏಳು ತಿಂಗಳುಗಳಾದ ಮೇಲೆ ಹುಡುಕುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಅವರು ದೇಶವನ್ನು ಶುದ್ಧಿಮಾಡುವದಕ್ಕೆ ತಕ್ಕವರನ್ನು ಆರಿಸಿ - ನೀವು ದೇಶದಲ್ಲಿ ತಿರುಗುತ್ತಾ ನೆಲದ ಮೇಲೆ ವಿುಕ್ಕಿರುವ ಎಲುಬುಗಳನ್ನು ಹೂಣಿಡಿರೆಂದು ನಿಯತವಾಗಿ ನೇವಿುಸುವರು; ಏಳು ತಿಂಗಳು ಕಳೆದ ಕೂಡಲೆ ಇವರು ಈ ಹುಡುಕುವ ಕೆಲಸವನ್ನು ತೊಡಗುವರು.
Kannada Bible (KNCL) BSI 2016
ತರುವಾಯ ಅವರು ನಾಡನ್ನು ಶುದ್ಧಿಮಾಡುವುದಕ್ಕೆ ತಕ್ಕವರನ್ನು ಆರಿಸಿ, ‘ನೀವು ನಾಡಿನಲ್ಲಿ ತಿರುಗಾಡುತ್ತಾ ನೆಲದ ಮೇಲೆ ಉಳಿದಿರುವ ಎಲುಬುಗಳನ್ನು ಹೂಣಿಡಿ’ ಎಂದು ನಿಯತವಾಗಿ ನೇಮಿಸುವರು; ಏಳು ತಿಂಗಳು ಕಳೆದ ಕೂಡಲೆ, ಇವರು ಈ ಹುಡುಕುವ ಕೆಲಸದಲ್ಲಿ ತೊಡಗುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇಶವನ್ನು ಶುದ್ಧೀಕರಿಸುವ ಹಾಗೆ ಅದರ ಮೇಲೆ ಮಿಕ್ಕವರನ್ನು ಹೂಳಿಡುವುದಕ್ಕೆ ಯಾವಾಗಲೂ ದೇಶವನ್ನು ಹಾದುಹೋಗುವ ಮನುಷ್ಯರನ್ನೇ ನಿರಂತರವಾಗಿ ನೇಮಿಸುವರು. “ ‘ಮತ್ತು ಇವರು ಏಳು ತಿಂಗಳುಗಳಾದ ಮೇಲೆ ಹುಡುಕುವರು.