Ezekiel 39:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರಲ್ಲೊಬ್ಬನಿಗೆ ಒಂದು ಎಲುಬು ನೋಡಸಿಕ್ಕಿದರೆ ಅವನು ಅಲ್ಲಿ ಒಂದು ಗುರುತನ್ನಿಡುವನು. ಹೂಣಿಡುವವರು ಬಂದು ಆ ಎಲುಘನ್ನು ತೆಗೆದು ಗೋಗನ ಸೈನ್ಯದ ತಗ್ಗಿನಲ್ಲಿ ಹೂಣಿಡುವ ತನಕ ಆ ಗುರುತು ಅಲ್ಲಿಯೇ ಇರುವದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರಯಾಣಿಕರಲ್ಲಿ ಯಾರೇ ಆಗಲಿ ಪ್ರಯಾಣ ಮಾಡುತ್ತಿರುವಾಗ ಮನುಷ್ಯನ ಎಲುಬನ್ನು ನೋಡಿದರೆ, ಅಲ್ಲಿ ಒಂದು ಗುರುತನ್ನು ನಿಲ್ಲಿಸುವರು; ಸಮಾಧಿ ಮಾಡುವವರು ಗೋಗನ ಸಮೂಹದ ಕಣಿವೆಯಲ್ಲಿ ಅದನ್ನು ಸಮಾಧಿ ಮಾಡುವ ತನಕ ಆ ಗುರುತು ಹಾಗೆಯೇ ನಿಂತಿರುವುದು.
Kannada BSI Bible 2016
ಪ್ರಯಾಣಿ ಕರು ಆ ದೇಶದಲ್ಲಿ ಹಾದುಹೋದ ಮೇಲೆ ಹೂಣಿಡು ವರು. ಹಮೋನ ಗೋಗನ ಕಣಿವೆಯಲ್ಲಿ ಹೂಣಿ ಡುವ ತನಕ ಆ ದೇಶದಲ್ಲಿ ಹಾದುಹೋಗುವವರು ಯಾವದಾದರೊಂದು ಮನುಷ್ಯನ ಎಲುಬನ್ನು ನೋಡಿ ದಾಗ ಅದಕ್ಕೆ ಗುರುತು ಹಾಕುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾರಿಗಳಲ್ಲಿ ಯಾವನೇ ಆಗಲಿ ಪ್ರಯಾಣಮಾಡುತ್ತಿರುವಾಗ ಮನುಷ್ಯರ ಎಲುಬನ್ನು ಕಂಡರೆ ಅಲ್ಲಿ ಒಂದು ಗುರುತನ್ನು ನಿಲ್ಲಿಸುವನು; ಹೂಣಿಡುವವರು ಗೋಗನ ಸಮೂಹದ ತಗ್ಗಿನಲ್ಲಿ ಅದನ್ನು ಹೂಣುವ ತನಕ ಆ ಗುರುತು ಹಾಗೇ ನಿಂತಿರುವದು.
Kannada Bible (KNCL) BSI 2016
ದಾರಿಗಳಲ್ಲಿ ಯಾವನೇ ಆಗಲಿ ಪ್ರಯಾಣ ಮಾಡುತ್ತಿರುವಾಗ ಮನುಷ್ಯನ ಎಲುಬನ್ನು ಕಂಡರೆ ಅಲ್ಲಿ ಒಂದು ಗುರುತನ್ನು ನಿಲ್ಲಿಸುವನು; ಹೂಣಿಡುವವರು ಗೋಗನ ಸಮೂಹದ ಕಣಿವೆಯಲ್ಲಿ ಅದನ್ನು ಹೂಣುವ ತನಕ ಆ ಗುರುತು ಹಾಗೇ ನಿಂತಿರುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರಯಾಣಿಕರು ಆ ದೇಶದಲ್ಲಿ ಹಾದುಹೋಗುತ್ತಿರುವಾಗ ಯಾವುದಾದರೊಂದು ಮನುಷ್ಯನ ಎಲುಬನ್ನು ಕಂಡರೆ ಅಲ್ಲಿ ಒಂದು ಗುರುತನ್ನು ಹಾಕುವರು, ಹೂಣಿಡುವವರು ಅದನ್ನು ಹಾಮೋನ್ ಗೋಗಿನ ಕಣಿವೆಯಲ್ಲಿ ಹೂಳಿಡುವ ತನಕ ಆ ಗುರುತು ಹಾಗೆಯೇ ಇರುವದು.