Ezekiel 39:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಒಡೆಯನಾದ ಯೆಹೋವನು ಹೇಳಿದ್ದೇನೆಂದರೆ, “ನರಪುತ್ರನೇ, ಎಲ್ಲಾ ಪಕ್ಷಿಗಳಿಗೂ ಕಾಡುಪ್ರಾಣಿಗಳಿಗೂ ಹೀಗೆ ಹೇಳು: ‘ನೀವೆಲ್ಲಾ ಕೂಡಿ ಬನ್ನಿರಿ. ನಾನು ನಿಮಗಾಗಿ ಇಸ್ರೇಲಿನ ಪರ್ವತಗಳಲ್ಲಿ ಮಾಡುವ ಮಹಾಯಜ್ಞಕ್ಕೆ ಎಲ್ಲಾ ಕಡೆಯಿಂದಲೂ ನೆರೆದುಬಂದು ಮಾಂಸವನ್ನು ತಿಂದು ರಕ್ತವನ್ನು ಕುಡಿಯಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನರಪುತ್ರನೇ, ಎಲ್ಲಾ ಬಗೆಯ ಪಕ್ಷಿಗಳಿಗೂ, ಸಮಸ್ತ ಭೂಜಂತುಗಳಿಗೂ ಹೀಗೆ ನುಡಿ, ‘ನೀವು ಕೂಡಿಬನ್ನಿರಿ; ನಾನು ಇಸ್ರಾಯೇಲಿನ ಪರ್ವತಗಳ ಮೇಲೆ ನಿಮಗಾಗಿ ಅರ್ಪಿಸುವ ಮಹಾಯಜ್ಞಕ್ಕೆ ಎಲ್ಲಾ ಕಡೆಯಿಂದಲೂ ನೆರೆದು ಬಂದು, ಮಾಂಸವನ್ನು ತಿಂದು, ರಕ್ತವನ್ನು ಕುಡಿಯಿರಿ.
Kannada BSI Bible 2016
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಮನುಷ್ಯಪುತ್ರನೇ, ನೀನು ಪ್ರತಿಯೊಂದು ರೀತಿಯ ಪಕ್ಷಿಗಳಿಗೂ ಮತ್ತು ಬಯಲಿನ ಪ್ರತಿಯೊಂದು ಪ್ರಾಣಿ ಗಳಿಗೂ ಮಾತನಾಡಿ--ಒಟ್ಟಾಗಿ ಬನ್ನಿರಿ. ನಾನು ನಿಮ ಗಾಗಿ ಅರ್ಪಿಸುವ ನನ್ನ ಯಜ್ಞಕ್ಕೋಸ್ಕರ ಪ್ರತಿಯೊಂದು ಕಡೆಯಿಂದಲೂ ಸೇರಿರಿ; ಇದು ಇಸ್ರಾಯೇಲ್‌ ಪರ್ವತಗಳ ಮೇಲೆ ನಡೆಯುವ ಮಹಾಯಜ್ಞವಾಗಿದೆ. ನೀವು ಮಾಂಸವನ್ನು ತಿಂದು ರಕ್ತವನ್ನು ಕುಡಿಯ ಬಹುದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನರಪುತ್ರನೇ, ಎಲ್ಲಾ ಬಗೆಯ ಪಕ್ಷಿಗಳಿಗೂ ಸಮಸ್ತ ಭೂಜಂತುಗಳಿಗೂ ಹೀಗೆ ನುಡಿ - ನೀವು ಕೂಡಿಬನ್ನಿರಿ; ನಾನು ಇಸ್ರಾಯೇಲಿನ ಪರ್ವತಗಳ ಮೇಲೆ ನಿಮಗಾಗಿ ಮಾಡುವ ಮಹಾಯಜ್ಞಕ್ಕೆ ಎಲ್ಲಾ ಕಡೆಯಿಂದಲೂ ನೆರೆದು ಬಂದು ಮಾಂಸವನ್ನು ತಿಂದು ರಕ್ತವನ್ನು ಕುಡಿಯಿರಿ.
Kannada Bible (KNCL) BSI 2016
ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನರಪುತ್ರನೇ, ಎಲ್ಲ ಬಗೆಯ ಪಕ್ಷಿಗಳಿಗೂ ಸಮಸ್ತ ಭೂಜಂತುಗಳಿಗೂ ಹೀಗೆ ನುಡಿ: ನೀವು ಕೂಡಿಬನ್ನಿ; ನಾನು ಇಸ್ರಯೇಲಿನ ಪರ್ವತಗಳ ಮೇಲೆ ನಿಮಗಾಗಿ ಮಾಡುವ ಮಹಾಯಜ್ಞಕ್ಕೆ ಎಲ್ಲ ಕಡೆಯಿಂದಲೂ ನೆರೆದುಬಂದು ಮಾಂಸವನ್ನು ತಿಂದು, ರಕ್ತವನ್ನು ಕುಡಿಯಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಮನುಷ್ಯಪುತ್ರನೇ, ನೀನು ಪ್ರತಿಯೊಂದು ರೀತಿಯ ಪಕ್ಷಿಗಳಿಗೂ ಮತ್ತು ಪ್ರತಿಯೊಂದು ಕಾಡುಮೃಗಗಳಿಗೂ, ‘ಮಾತನಾಡಿ ಒಟ್ಟಾಗಿ ಬನ್ನಿರಿ. ನಾನು ನಿಮಗಾಗಿ ಅರ್ಪಿಸುವ ನನ್ನ ಯಜ್ಞಕ್ಕೋಸ್ಕರ ಪ್ರತಿಯೊಂದು ಕಡೆಯಿಂದಲೂ ಸೇರಿರಿ. ಇದು ಇಸ್ರಾಯೇಲ್ ಪರ್ವತಗಳ ಮೇಲೆ ನಡೆಯುವ ಮಹಾಯಜ್ಞವಾಗಿದೆ. ಅಲ್ಲಿ ನೀವು ಮಾಂಸವನ್ನು ತಿನ್ನಬಹುದು ಮತ್ತು ರಕ್ತವನ್ನು ಕುಡಿಯಬಹುದು.