Ezekiel 39:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ಹೇಳಿದ್ದೇನೆಂದರೆ, “ನಾನು ಮಾಡಿದ್ದನ್ನು ಇತರ ದೇಶಗಳವರು ನೋಡುವಂತೆ ಮಾಡುವೆನು. ಆಗ ಆ ದೇಶದವರು ನನ್ನನ್ನು ಗೌರವಿಸಲು ಪ್ರಾರಂಭಿಸುವರು. ಆ ಶತ್ರುವಿಗೆದುರಾಗಿ ನನ್ನ ಸಾಮರ್ಥ್ಯ ತೋರಿಸಿದುದನ್ನು ಅವರು ನೋಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಂತರ ನಾನು ಜನಾಂಗಗಳ ನಡುವೆ ನನ್ನ ಮಹಿಮೆಯನ್ನು ಸ್ಥಾಪಿಸಲು, ಆ ಸೈನಿಕರ ಮೇಲೆ ಕೈಮಾಡಿ, ನ್ಯಾಯದಂಡನೆ ನಡೆಸಿದವನು ನಾನೇ ಎಂಬುದು ಆ ಜನಾಂಗಗಳಿಗೆಲ್ಲಾ ತಿಳಿಯುವುದು.
Kannada BSI Bible 2016
ನಾನು ನನ್ನ ಮಹಿಮೆಯನ್ನು ಅನ್ಯಜನಾಂಗಗಳಲ್ಲಿ ಸ್ಥಾಪಿಸುತ್ತೇನೆ; ಎಲ್ಲಾ ಅನ್ಯಜನಾಂಗಗಳು ನಾನು ನಡೆಸಿದ ನನ್ನ ನ್ಯಾಯತೀರ್ಪನ್ನು ಮತ್ತು ಅವರ ಮೇಲೆ ಇರಿಸಿದ ನನ್ನ ಕೈಯನ್ನು ನೋಡುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗೆ ನಾನು ಜನಾಂಗಗಳ ನಡುವೆ ನನ್ನ ಮಹಿಮೆಯನ್ನು ಸ್ಥಾಪಿಸಲು ಆ ಸೈನಿಕರ ಮೇಲೆ ಕೈಮಾಡಿ ನ್ಯಾಯದಂಡನೆ ನಡಿಸಿದವನು ನಾನೇ ಎಂಬದು ಆ ಜನಾಂಗಗಳಿಗೆಲ್ಲಾ ಗೋಚರವಾಗುವದು.
Kannada Bible (KNCL) BSI 2016
“ಹೀಗೆ ನಾನು ಜನಾಂಗಗಳ ನಡುವೆ ನನ್ನ ಮಹಿಮೆಯನ್ನು ಸ್ಥಾಪಿಸುವೆನು. ಆಗ ಆ ಸೈನಿಕರ ಮೇಲೆ ಕೈಮಾಡಿ ನ್ಯಾಯದಂಡನೆ ನಡೆಸಿದವನು ನಾನೇ ಎಂದು ಆ ಜನಾಂಗಗಳಿಗೆಲ್ಲಾ ಗೋಚರವಾಗುವುದು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಾನು ನನ್ನ ಮಹಿಮೆಯನ್ನು ಇತರ ಜನಾಂಗಗಳಲ್ಲಿ ಸ್ಥಾಪಿಸಲು ಎಲ್ಲಾ ಜನಾಂಗಗಳು ನಾನು ನಡೆಸಿದ ನನ್ನ ನ್ಯಾಯತೀರ್ಪನ್ನು ಮತ್ತು ಅವರ ಮೇಲೆ ಇರಿಸಿದ ನನ್ನ ಕೈಯನ್ನು ನೋಡುವುವು.