Ezekiel 39:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಲ್ಲಾ ಜನಾಂಗಗಳವರಿಗೆ ನಾನು ಯಾಕೆ ಇಸ್ರೇಲರು ಸೆರೆಹಿಡಿಯಲ್ಪಟ್ಟು ಚದರಿಹೋಗುವಂತೆ ಮಾಡಿದೆನು ಎಂದು ತಿಳಿಯುವರು. ನನ್ನ ಜನರು ನನಗೆ ವಿರುದ್ಧವಾಗಿ ತಿರುಗಿ ಬಿದ್ದರು. ಆಗ ನಾನು ಅವರಿಂದ ದೂರ ಹೋದೆನು. ಅವರ ವೈರಿಗಳು ಅವರನ್ನು ಸೋಲಿಸುವಂತೆ ಮಾಡಿದೆನು. ಆದ್ದರಿಂದ ಅವರು ರಣರಂಗದಲ್ಲಿ ಮಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಇದಲ್ಲದೆ, ಇಸ್ರಾಯೇಲರು ತಮ್ಮ ಅಧರ್ಮದ ನಿಮಿತ್ತವೇ ಸೆರೆಯಾಗಿ ಹೋದರೆಂತಲೂ, ಅವರು ನನಗೆ ದ್ರೋಹಮಾಡಿದ್ದರಿಂದ ನಾನು ಅವರಿಗೆ ವಿಮುಖನಾಗಿ ಅವರೆಲ್ಲರೂ ಖಡ್ಗದಿಂದ ಹತರಾಗುವಂತೆ ಅವರನ್ನು ಶತ್ರುಗಳ ವಶ ಮಾಡಿದೆನೆಂತಲೂ ಜನಾಂಗಗಳಿಗೆ ಗೊತ್ತಾಗುವುದು.
Kannada BSI Bible 2016
ಇಸ್ರಾಯೇಲನ ಮನೆತನದವರು ತಮ್ಮ ಅಕ್ರಮಗಳ ನಿಮಿತ್ತವಾಗಿ ಸೆರೆಗೆ ಹೋದರೆಂದು ಅನ್ಯಜನಾಂಗಗಳು ತಿಳಿಯುವವು; ಅವರು ನನಗೆ ವಿರೋಧವಾಗಿ ದ್ರೋಹ ಮಾಡಿದ್ದರಿಂದ ನಾನು ಅವರಿಗೆ ನನ್ನ ಮುಖವನ್ನು ಮರೆಮಾಡಿಕೊಂಡು ಅವರನ್ನು ಅವರ ವೈರಿಗಳ ಕೈಗೆ ಒಪ್ಪಿಸಿದೆನು. ಹೀಗೆ ಅವರೆಲ್ಲರೂ ಕತ್ತಿಯಿಂದ ಹತರಾದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಇಸ್ರಾಯೇಲ್ಯರು ತಮ್ಮ ಅಧರ್ಮದ ನಿವಿುತ್ತವೇ ಸೆರೆಯಾಗಿ ಹೋದರೆಂತಲೂ ಅವರು ನನಗೆ ದ್ರೋಹಮಾಡಿದ್ದರಿಂದ ನಾನು ಅವರಿಗೆ ವಿಮುಖನಾಗಿ ಅವರೆಲ್ಲರೂ ಖಡ್ಗಹತರಾಗುವಂತೆ ಅವರನ್ನು ಶತ್ರುವಶಮಾಡಿದೆನೆಂತಲೂ ಜನಾಂಗಗಳಿಗೆ ಗೊತ್ತಾಗುವದು;
Kannada Bible (KNCL) BSI 2016
ಇದಲ್ಲದೆ, ಇಸ್ರಯೇಲರು ತಮ್ಮ ಅಧರ್ಮದ ನಿಮಿತ್ತವೇ ಸೆರೆಯಾಗಿಹೋದರೆಂದು ಮತ್ತು ಅವರು ನನಗೆ ದ್ರೋಹ ಮಾಡಿದ್ದರಿಂದಲೆ ನಾನು ಅವರಿಗೆ ವಿಮುಖನಾಗಿ ಅವರೆಲ್ಲರು ಖಡ್ಗಹತರಾಗುವಂತೆ ಅವರನ್ನು ಶತ್ರುವಶಮಾಡಿದೆನೆಂದು ಜನಾಂಗಗಳಿಗೆ ಗೊತ್ತಾಗುವುದು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲನ ಮನೆತನದವರು ತಮ್ಮ ಅಕ್ರಮಗಳ ನಿಮಿತ್ತವಾಗಿ ಸೆರೆಗೆ ಹೋದರೆಂದು ಇತರ ಜನಾಂಗಗಳು ತಿಳಿಯುವುವು. ಅವರು ನನಗೆ ವಿರೋಧವಾಗಿ ವಿಶ್ವಾಸದ್ರೋಹಮಾಡಿದ್ದರಿಂದ ನಾನು ಅವರಿಗೆ ನನ್ನ ಮುಖವನ್ನು ಮರೆಮಾಡಿಕೊಂಡು ಅವರನ್ನು ಅವರ ವೈರಿಗಳ ಕೈಗೆ ಒಪ್ಪಿಸಿದೆನು. ಹೀಗೆ ಅವರೆಲ್ಲರೂ ಖಡ್ಗದಿಂದ ಹತರಾದರು.