Ezekiel 39:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ಈಗ ನಾನು ಯಾಕೋಘನ ವಂಶದವರನ್ನು ಸೆರೆಯಿಂದ ಬಿಡಿಸಿ ಹಿಂದಕ್ಕೆ ತರುವೆನು. ಇಸ್ರೇಲಿನ ಜನಾಂಗದವರ ಮೇಲೆಲ್ಲಾ ನನ್ನ ದಯೆ ಇರುವದು. ನನ್ನ ಪವಿತ್ರನಾಮದ ಸಲುವಾಗಿ ಅವರನ್ನು ಉದ್ಧರಿಸುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಪವಿತ್ರನಾಮಕ್ಕೆ ಇನ್ನು ಅಪಕೀರ್ತಿ ಬಾರದಂತೆ ನಾನು ಈಗ ಅನುಕಂಪವುಳ್ಳವನಾಗಿ ಯಾಕೋಬ್ಯರ ದುರಾವಸ್ಥೆಯನ್ನು ತಪ್ಪಿಸಿ, ಇಸ್ರಾಯೇಲ್ ವಂಶದವರಿಗೆಲ್ಲಾ ಕೃಪೆ ತೋರಿಸುವೆನು.
Kannada BSI Bible 2016
ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈಗ ನಾನು ಯಾಕೋಬಿನ ಸೆರೆಯನ್ನು ತಿರಿಗಿ ತರುತ್ತೇನೆ, ಸಂಪೂರ್ಣ ಇಸ್ರಾಯೇಲಿನ ಮನೆತನದ ವರ ಮೇಲೆ ಕರುಣೆಯಿಡುತ್ತೆನೆ; ನನ್ನ ಪರಿಶುದ್ಧ ಹೆಸರಿಗಾಗಿ ಸ್ವಗೌರವುಳ್ಳವನಾಗಿರುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಪವಿತ್ರನಾಮಕ್ಕೆ ಇನ್ನು ಅಪಕೀರ್ತಿ ಬಾರದಂತೆ ನಾನು ಈಗ ಆಗ್ರಹವುಳ್ಳವನಾಗಿ ಯಾಕೋಬ್ಯರ ದುರವಸ್ಥೆಯನ್ನು ತಪ್ಪಿಸಿ ಇಸ್ರಾಯೇಲ್ ವಂಶದವರಿಗೆಲ್ಲಾ ಕೃಪೆತೋರಿಸುವೆನು;
Kannada Bible (KNCL) BSI 2016
ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನನ್ನ ಪವಿತ್ರನಾಮಕ್ಕೆ ಇನ್ನು ಅಪಕೀರ್ತಿಬಾರದಂತೆ ನಾನು ಈಗ ಆಗ್ರಹವುಳ್ಳವನಾಗಿ ಯಕೋಬ್ಯರ ದುರವಸ್ಥೆಯನ್ನು ತಪ್ಪಿಸಿ ಇಸ್ರಯೇಲ್ ವಂಶದವರಿಗೆಲ್ಲ ಕೃಪೆತೋರುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಪವಿತ್ರ ನಾಮಕ್ಕೆ ಇನ್ನು ಅಪಕೀರ್ತಿ ಬಾರದಂತೆ ನಾನು ಈಗ ಆಸಕ್ತನಾಗಿ ಯಾಕೋಬ್ಯರ ದುರಾವಸ್ಥೆಯನ್ನು ತಪ್ಪಿಸಿ, ಇಸ್ರಾಯೇಲ್ ವಂಶದವರಿಗೆಲ್ಲಾ ಕೃಪೆ ತೋರುವೆನು.