Ezekiel 39:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಅವರ ಒಡೆಯನಾದ ಯೆಹೋವನೆಂದು ತಿಳಿಯುವರು. ಯಾಕೆಂದರೆ ನಾನು, ಅವರನ್ನು ಅವರ ಸಬದೇಶವನ್ನು ಬಿಟ್ಟು ಸೆರೆಹಿಡಿಯಲ್ಪಟ್ಟವರಾಗಿ ಬೇರೆ ದೇಶಗಳಿಗೆ ಹೋಗುವಂತೆ ಮಾಡಿದೆನು. ಆಮೇಲೆ ತಿರುಗಿ ಅವರನ್ನು ಒಟ್ಟುಗೂಡಿಸಿ ಅವರ ದೇಶಕ್ಕೆ ಹಿಂದಕ್ಕೆ ಕರೆಸಿದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಾನು ಅವರನ್ನು ಅನ್ಯಜನಾಂಗಗಳೊಳಗೆ ಸೆರೆಹೋಗುವಂತೆ ಮಾಡಿದ ಮೇಲೆ ಅವರನ್ನು ಒಟ್ಟುಗೂಡಿಸಿ, ಸ್ವದೇಶಕ್ಕೆ ಬರಮಾಡಿದುದರಿಂದ ನಾನೇ ಅವರ ದೇವರಾದ ಯೆಹೋವನು ಎಂದು ದೃಢಮಾಡಿಕೊಳ್ಳುವರು. ಅವರಲ್ಲಿ ಯಾರನ್ನೂ ದೇಶದಲ್ಲಿ ವಾಸಿಸುವುದಕ್ಕೆ ಬಿಡುವುದಿಲ್ಲ.
Kannada BSI Bible 2016
ಆಮೇಲೆ ಅವರನ್ನು ಅನ್ಯಜನಾಂಗಗಳೊಳಗಿಂದ ಸೆರೆಗೈದವನೂ ಇನ್ನು ಮೇಲೆ ಅವರಲ್ಲಿ ಒಬ್ಬನನ್ನಾದರೂ ಉಳಿಸದೆ ದೇಶಕ್ಕೆ ಕೂಡಿಸಿದವನು ನಾನೇ ಅವರ ದೇವರಾದ ಕರ್ತನೆಂದು ಅವರು ತಿಳಿಯುವರು.ಇಲ್ಲವೇ ನಾನು ನನ್ನ ಮುಖವನ್ನು ಎಂದಿಗೂ ಮರೆಮಾಡುವದಿಲ್ಲ; ನಾನು ನನ್ನ ಆತ್ಮವನ್ನು ಇಸ್ರಾ ಯೇಲಿನ ಮನೆತನದವರ ಮೇಲೆ ಸುರಿದಿರುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಅವರನ್ನು ಜನಾಂಗಗಳೊಳಗೆ ಸೆರೆಹೋಗುವಂತೆ ಮಾಡಿ ಆಮೇಲೆ ಒಟ್ಟುಗೂಡಿಸಿ ಸ್ವದೇಶಕ್ಕೆ ತಂದದರಿಂದ ನಾನೇ ತಮ್ಮ ದೇವರಾದ ಯೆಹೋವನು ಎಂದು ದೃಢಮಾಡಿಕೊಳ್ಳುವರು. ಅವರಲ್ಲಿ ಯಾರನ್ನೂ ಸೆರೆಯಲ್ಲಿ ಬಿಟ್ಟುಬಿಡೆನು.
Kannada Bible (KNCL) BSI 2016
ನಾನು ಅವರನ್ನು ಜನಾಂಗಗಳೊಳಗೆ ಸೆರೆಹೋಗುವಂತೆ ಮಾಡಿ, ಆಮೇಲೆ ಒಟ್ಟುಗೂಡಿಸಿ, ಸ್ವದೇಶಕ್ಕೆ ತಂದದ್ದರಿಂದ ನಾನೇ ತಮ್ಮ ದೇವರಾದ ಸರ್ವೇಶ್ವರ ಎಂದು ದೃಢಮಾಡಿಕೊಳ್ಳುವರು. ಅವರಲ್ಲಿ ಯಾರನ್ನೂ ಸೆರೆಯಲ್ಲಿ ಬಿಟ್ಟುಬಿಡೆನು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಅವರನ್ನು ಜನಾಂಗಗಳೊಳಗಿಂದ ಸೆರೆಹೋಗುವಂತೆ ಮಾಡಿ, ಆಮೇಲೆ ಅವರಲ್ಲಿ ಒಬ್ಬರನ್ನಾದರೂ ಉಳಿಸದೆ ಒಟ್ಟುಗೂಡಿಸಿ ಸ್ವದೇಶಕ್ಕೆ ಬರಮಾಡಿದುದರಿಂದ ನಾನೇ ಅವರ ಯೆಹೋವ ದೇವರೆಂದು ಅವರು ತಿಳಿಯುವರು.