Ezekiel 39:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಜನರಾದ ಇಸ್ರೇಲರಲ್ಲಿ ನನ್ನ ಪವಿತ್ರನಾಮವನ್ನು ಪ್ರಸಿದ್ಧಿಪಡಿಸುವೆನು. ಅವರು ನನ್ನ ಪವಿತ್ರ ನಾಮವನ್ನು ಇನ್ನು ಮುಂದೆ ಅವಮಾನಕ್ಕೆ ಗುರಿಪಡಿಸುವದಿಲ್ಲ. ರಾಜ್ಯಗಳೆಲ್ಲಾ ನಾನು ಯೆಹೋವನೆಂದು ಅರಿತುಕೊಳ್ಳುವರು. ನಾನೇ ಇಸ್ರೇಲಿನ ಪವಿತ್ರನಾದ ದೇವರು ಎಂದು ತಿಳಿಯುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಾನು ನನ್ನ ಪವಿತ್ರ ನಾಮವನ್ನು ನನ್ನ ಜನರಾದ ಇಸ್ರಾಯೇಲರ ಮಧ್ಯದಲ್ಲಿ ವ್ಯಕ್ತಗೊಳಿಸುವೆನು. ಅದನ್ನು ಇನ್ನು ಮುಂದೆ ಅಪಕೀರ್ತಿಗೆ ಗುರಿಯಾಗದ ಹಾಗೆ ಮಾಡುತ್ತೇನೆ. ನಾನೇ ಯೆಹೋವ, ಇಸ್ರಾಯೇಲಿನ ಸದಮಲಸ್ವಾಮಿ ಎಂದು ಅನ್ಯ ಜನಾಂಗಗಳಿಗೆ ಗೊತ್ತಾಗುವುದು.”
Kannada BSI Bible 2016
ಹೀಗೆ ನನ್ನ ಜನರಾದ ಇಸ್ರಾಯೇಲಿನ ಮಧ್ಯದಲ್ಲಿ ನಾನು ನನ್ನ ಪರಿಶುದ್ಧವಾದ ಹೆಸರನ್ನು ವ್ಯಕ್ತಪಡಿಸುತ್ತೇನೆ; ಅವರು ಇನ್ನೆಂದಿಗೂ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರವಾಗದ ಹಾಗೆ ನಾನು ಮಾಡುತ್ತೇನೆ. ಅನ್ಯಜನರು ಇಸ್ರಾಯೇಲ್ಯರಲ್ಲಿ ಒಬ್ಬ ಪರಿಶುದ್ಧನಾದ ಕರ್ತನು ನಾನೇ ಎಂದು ತಿಳಿಯುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನನ್ನ ಪವಿತ್ರನಾಮವನ್ನು ನನ್ನ ಜನರಾದ ಇಸ್ರಾಯೇಲ್ಯರ ನಡುವೆ ವ್ಯಕ್ತಗೊಳಿಸುವೆನು, ಅದನ್ನು ಇನ್ನು ಮುಂದೆ ಅಪಕೀರ್ತಿಗೆ ಗುರಿಯಾಗಲೀಸೆನು; ನಾನೇ ಯೆಹೋವ, ಇಸ್ರಾಯೇಲಿನ ಸದಮಲಸ್ವಾವಿು ಎಂದು ಜನಾಂಗಗಳಿಗೆ ಗೊತ್ತಾಗುವದು.
Kannada Bible (KNCL) BSI 2016
ನಾನು ನನ್ನ ಪವಿತ್ರನಾಮವನ್ನು ನನ್ನ ಜನರಾದ ಇಸ್ರಯೇಲರ ನಡುವೆ ವ್ಯಕ್ತಗೊಳಿಸುವೆನು, ಅದನ್ನು ಇನ್ನು ಮುಂದೆ ಅಪಕೀರ್ತಿಗೆ ಗುರಿಯಾಗಲುಬಿಡೆನು; ನಾನೇ ಸರ್ವೇಶ್ವರ, ಇಸ್ರಯೇಲಿನ ಪರಮಪಾವನಸ್ವಾಮಿ ಎಂದು ಜನಾಂಗಗಳಿಗೆ ಗೊತ್ತಾಗುವುದು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಹೀಗೆ ನನ್ನ ಜನರಾದ ಇಸ್ರಾಯೇಲ್ ಮಧ್ಯದಲ್ಲಿ ನಾನು ನನ್ನ ಪರಿಶುದ್ಧವಾದ ಹೆಸರನ್ನು ವ್ಯಕ್ತಗೊಳಿಸುವೆನು. ಅವರು ಇನ್ನೆಂದಿಗೂ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರವಾಗದಂತೆ ಮಾಡುವೆನು. ಇಸ್ರಾಯೇಲಿನಲ್ಲಿ ಪರಿಶುದ್ಧನಾದ ಯೆಹೋವ ದೇವರು ನಾನೇ ಎಂದು ಇತರ ದೇಶದವರಿಗೆ ಗೊತ್ತಾಗುವುದು.