Ezekiel 4:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನು ದಿನವೊಂದಕ್ಕೆ ಎಂಟು ರೊಟ್ಟಿಗಳನ್ನು ತಿನ್ನುವೆ. ನೀನು ಅವುಗಳನ್ನು ಪ್ರತಿದಿನ ಒಂದೇ ಸಮಯದಲ್ಲಿ ತಿನ್ನಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಆಹಾರವನ್ನು ತೂಕದ ಪ್ರಕಾರ ದಿನವೊಂದಕ್ಕೆ ಇಪ್ಪತ್ತು ತೊಲಾದಂತೆ (230 ಗ್ರಾಂ) ತಿನ್ನು; ಆಗಾಗ್ಗೆ ಸ್ವಲ್ಪ ಸ್ವಲ್ಪ ತಿನ್ನಬೇಕು.
Kannada BSI Bible 2016
ನೀನು ತಿನ್ನುವ ಆಹಾರದ ತೂಕದ ಪ್ರಕಾರ ಅದು ಒಂದು ದಿನಕ್ಕೆ ಇಪ್ಪತ್ತು ಶೇಕೆಲುಗಳಾಗಿರಬೇಕು. ಕಾಲಕಾಲಕ್ಕೆ ಸರಿಯಾಗಿ ಅದನ್ನು ತಿನ್ನಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಆಹಾರವನ್ನು ತೂಕದ ಪ್ರಕಾರ ದಿನವೊಂದಕ್ಕೆ ಇಪ್ಪತ್ತು ತೊಲೆಯಂತೆ ತಿನ್ನು; ಆಗಾಗ್ಗೆ ಸ್ವಲ್ಪ ಸ್ವಲ್ಪ ತಿನ್ನಬೇಕು.
Kannada Bible (KNCL) BSI 2016
ನಿನ್ನ ಆಹಾರದ ತೂಕ ದಿನವೊಂದಕ್ಕೆ 230 ಗ್ರಾಂ ಇರಲಿ; ಆಗಾಗ್ಗೆ ಸ್ವಲ್ಪ ಸ್ವಲ್ಪ ತಿನ್ನಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ತಿನ್ನುವ ಆಹಾರದ ತೂಕದ ಪ್ರಕಾರ ಅದು ಒಂದು ದಿನಕ್ಕೆ 230 ಗ್ರಾಂ ಇರಲಿ, ನೀನು ಅದನ್ನು ಆಗಾಗ್ಗೆ ತಿನ್ನಬೇಕು.