Ezekiel 4:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಯೆಹೋವನು, “ನಾನು ಇಸ್ರೇಲ್ ಜನರನ್ನು ಘಲವಂತವಾಗಿ ಕಳುಹಿಸುವ ಪರದೇಶಗಳಲ್ಲಿ ಅವರು ಅಶುದ್ಧವಾದ ರೊಟ್ಟಿಗಳನ್ನು ತಿನ್ನುತ್ತಾರೆಂದು ಇದು ಸೂಚಿಸುತ್ತದೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾಗೆಯೇ ಇಸ್ರಾಯೇಲ್ ವಂಶದವರು ನನ್ನಿಂದ ಅನ್ಯದೇಶಗಳಿಗೆ ಅಟ್ಟಲ್ಪಟ್ಟು ಆ ದೇಶೀಯರ ನಡುವೆ ವಾಸಿಸುತ್ತಾ ತಮ್ಮ ಆಹಾರವನ್ನು ಹೊಲಸಾಗಿ ತಿನ್ನುವರು” ಇದು ಯೆಹೋವನ ನುಡಿ.
Kannada BSI Bible 2016
ಕರ್ತನು ಹೇಳಿದ್ದೇನಂದರೆ -- ಹೀಗೆಯೇ ಇಸ್ರಾಯೇಲ್ಯರ ಮಕ್ಕಳು ತಮ್ಮ ಅಶುದ್ಧವಾದ ರೊಟ್ಟಿಯನ್ನು ಅನ್ಯ ಜನಾಂಗಗಳೊಳಗೆ ತಿನ್ನುವರು. ಆಗ ನಾನು ಅವರನ್ನು ಓಡಿಸಿ ಬಿಡುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಾಗೆಯೇ ಇಸ್ರಾಯೇಲ್ ವಂಶದವರು ನನ್ನಿಂದ ಅನ್ಯದೇಶಗಳಿಗೆ ಅಟ್ಟಲ್ಪಟ್ಟು ಆ ದೇಶೀಯರ ನಡುವೆ ವಾಸಿಸುತ್ತಾ ತಮ್ಮ ಆಹಾರವನ್ನು ಹೊಲಸಾಗಿ ತಿನ್ನುವರು; ಇದು ಯೆಹೋವನ ನುಡಿ.
Kannada Bible (KNCL) BSI 2016
“ಹಾಗೆಯೇ ಇಸ್ರಯೇಲ್ ವಂಶದವರು ನನ್ನಿಂದ ಅನ್ಯದೇಶಗಳಿಗೆ ಅಟ್ಟಲ್ಪಟ್ಟು ಆ ದೇಶೀಯರ ನಡುವೆ ವಾಸಿಸುತ್ತಾ ತಮ್ಮ ಆಹಾರವನ್ನು ಹೊಲಸಾಗಿ ತಿನ್ನುವರು; ಇದು ಸರ್ವೇಶ್ವರನಾದ ನನ್ನ ನುಡಿ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಹೇಳಿದ್ದೇನೆಂದರೆ, “ಈ ರೀತಿಯಾಗಿ ಇಸ್ರಾಯೇಲಿನ ಜನರು ನಾನು ಅವರನ್ನು ಓಡಿಸುವ ಜನಾಂಗಗಳ ನಡುವೆ ಅಶುದ್ಧ ಆಹಾರವನ್ನು ತಿನ್ನುವರು.”