Ezekiel 4:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ನಾನು ಹೇಳಿದ್ದೇನೆಂದರೆ, “ಅಯ್ಯೋ, ನನ್ನ ಒಡೆಯನಾದ ಯೆಹೋವನೇ, ನಾನು ಎಂದೂ ಅಶುದ್ಧ ಆಹಾರವನ್ನು ತಿನ್ನಲಿಲ್ಲ. ತಾನಾಗಿಯೇ ಸತ್ತ ಪ್ರಾಣಿಯ ಮಾಂಸವನ್ನಾಗಲಿ ಕಾಡುಪ್ರಾಣಿಯು ಕೊಂದ ಪ್ರಾಣಿಯ ಮಾಂಸವನ್ನಾಗಲಿ ಎಂದೂ ತಿಂದದ್ದಿಲ್ಲ. ಬಾಲ್ಯ ಪ್ರಾಯದಿಂದ ಈ ದಿವಸ ಪರ್ಯಂತ ಅಶುದ್ಧ ಆಹಾರ ತಿಂದಿಲ್ಲ; ಅಂತಹ ಮಾಂಸವೂ ನನ್ನ ಬಾಯೊಳಕ್ಕೆ ಹೋಗಲಿಲ್ಲ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ನಾನು ಹೊಲಸನ್ನು ಮುಟ್ಟಿದವನಲ್ಲ, ನಾನು ಹುಟ್ಟಿದಂದಿನಿಂದ ಇಂದಿನವರೆಗೂ ಸತ್ತ ಪಶುವಿನ ಮಾಂಸವನ್ನಾಗಲಿ, ಕಾಡುಮೃಗವು ಕೊಂದ ಪಶುವಿನ ಮಾಂಸವನ್ನಾಗಲಿ ತಿಂದವನೇ ಅಲ್ಲ; ಯಾವ ಅಸಹ್ಯಪದಾರ್ಥವೂ ನನ್ನ ಬಾಯೊಳಗೆ ಸೇರಲಿಲ್ಲ” ಎಂದು ಅರಿಕೆಮಾಡಲು,
Kannada BSI Bible 2016
ಆಮೇಲೆ ನಾನು--ಹಾ! ದೇವ ರಾದ ಕರ್ತನೇ, ಇಗೋ, ನನ್ನ ಪ್ರಾಣವು ಅಶುದ್ಧವಾಗ ಲಿಲ್ಲ, ಯಾಕಂದರೆ ನಾನು ಚಿಕ್ಕಂದಿನಿಂದ ಇಷ್ಟರವರೆಗೂ ತನ್ನಷ್ಟಕ್ಕೆ ತಾನೇ ಸತ್ತಿರುವದನ್ನು ಅಥವಾ ಹರಿದು ಚೂರು ಚೂರಾಗಿರುವದನ್ನು ತಿನ್ನಲಿಲ್ಲ; ಇಲ್ಲವೆ ಅಸಹ್ಯ ವಾದ ಮಾಂಸವನ್ನಾದರೂ ನನ್ನ ಬಾಯಿಯ ಹತ್ತಿರ ತಂದಿಲ್ಲ ಎಂದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ನಾನು - ಅಯ್ಯೋ, ಕರ್ತನಾದ ಯೆಹೋವನೇ, ನಾನು ಹೊಲಸನ್ನು ಮುಟ್ಟಿದವನಲ್ಲ. ನಾನು ಹುಟ್ಟಿದಂದಿನಿಂದ ಇಂದಿನವರೆಗೂ ಸತ್ತ ಪಶುವಿನ ಮಾಂಸವನ್ನಾಗಲಿ ಕಾಡುಮೃಗವು ಕೊಂದ ಪಶುವಿನ ಮಾಂಸವನ್ನಾಗಲಿ ತಿಂದವನೇ ಅಲ್ಲ; ಯಾವ ಅಸಹ್ಯಪದಾರ್ಥವೂ ನನ್ನ ಬಾಯೊಳಗೆ ಸೇರಲಿಲ್ಲ ಎಂದು ಅರಿಕೆಮಾಡಲು
Kannada Bible (KNCL) BSI 2016
ಅದಕ್ಕೆ ನಾನು, “ಅಯ್ಯೋ, ದೇವರಾದ ಸರ್ವೇಶ್ವರ ನಾನು ಹೊಲಸನ್ನು ಮುಟ್ಟಿದವನಲ್ಲ, ನಾನು ಹುಟ್ಟಿದಂದಿನಿಂದ ಇಂದಿನವರೆಗೂ ಸತ್ತ ಪಶುವಿನ ಮಾಂಸವನ್ನಾಗಲಿ, ಕಾಡುಮೃಗ ಕೊಂದ ಪಶುವಿನ ಮಾಂಸವನ್ನಾಗಲಿ ತಿಂದವನೇ ಅಲ್ಲ; ಯಾವ ಅಸಹ್ಯಪದಾರ್ಥವೂ ನನ್ನ ಬಾಯೊಳಗೆ ಸೇರಲಿಲ್ಲ,” ಎಂದು ಅರಿಕೆಮಾಡಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ನಾನು, “ಅಯ್ಯೋ, ಸಾರ್ವಭೌಮ ಯೆಹೋವ ದೇವರೇ, ನಾನು ಹೊಲಸನ್ನು ಮುಟ್ಟಿದವನಲ್ಲ, ನಾನು ಹುಟ್ಟಿದ ದಿನದಿಂದ ಇಂದಿನವರೆಗೂ ಸತ್ತ ಪಶುವಿನ ಮಾಂಸವನ್ನಾಗಲಿ, ಕಾಡುಮೃಗ ಕೊಂದ ಪಶುವಿನ ಮಾಂಸವನ್ನಾಗಲಿ ತಿಂದವನೇ ಅಲ್ಲ. ಯಾವ ಅಸಹ್ಯ ಪದಾರ್ಥವೂ ನನ್ನ ಬಾಯೊಳಗೆ ಸೇರಲಿಲ್ಲ,” ಎಂದು ಅರಿಕೆಮಾಡಿದೆ.