Ezekiel 4:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ದೇವರು ನನಗೆ, “ಸರಿ! ಹಾಗಾದರೆ, ರೊಟ್ಟಿಯನ್ನು ಮಾಡುವದಕ್ಕಾಗಿ ಮನುಷ್ಯನ ಮಲದ ಘದಲಾಗಿ ದನದ ಒಣಗಿದ ಸಗಣಿಯನ್ನು ಉಪಯೋಗಿಸು” ಎಂದು ಉತ್ತರಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ನನಗೆ, “ನೋಡು, ಮನುಷ್ಯರ ಮಲಕ್ಕೆ ಬದಲಾಗಿ ದನಗಳ ಸಗಣಿಯನ್ನು ನಿನಗೆ ಗೊತ್ತುಮಾಡಿದ್ದೇನೆ, ಇದನ್ನು ಉರಿಸಿ ನಿನ್ನ ರೊಟ್ಟಿಯನ್ನು ಸುಟ್ಟುಕೋ” ಎಂದು ಉತ್ತರಕೊಟ್ಟನು.
Kannada BSI Bible 2016
ಆಗ ಆತನು ನನಗೆ--ಇಗೋ, ಮನುಷ್ಯನ ಮಲಕ್ಕೆ ಬದಲಾಗಿ ಹಸುವಿನ ಸಗಣಿಯನ್ನು ನಿನಗೆ ಕೊಟ್ಟಿದ್ದೇನೆ; ಅದರಿಂದ ನೀನು ರೊಟ್ಟಿಯನ್ನು ತಯಾರಿಸಬಹುದು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ನನಗೆ - ನೋಡು, ಮನುಷ್ಯರ ಮಲಕ್ಕೆ ಬದಲಾಗಿ ದನಗಳ ಸಗಣಿಯನ್ನು ನಿನಗೆ ಗೊತ್ತುಮಾಡಿದ್ದೇನೆ, ಇದನ್ನು ಉಪಯೋಗಿಸಿ ನಿನ್ನ ರೊಟ್ಟಿಯನ್ನು ಸುಟ್ಟುಕೊ ಎಂದು ಉತ್ತರಕೊಟ್ಟನು.
Kannada Bible (KNCL) BSI 2016
ಅದಕ್ಕೆ ಅವರು, “ನೋಡು, ಮನುಷ್ಯರ ಮಲಕ್ಕೆ ಬದಲಾಗಿ ದನಗಳ ಸಗಣಿಯನ್ನು ನಿನಗೆ ಗೊತ್ತುಮಾಡಿದ್ದೇನೆ. ಇದನ್ನು ಉರಿಸಿ ನಿನ್ನ ರೊಟ್ಟಿಯನ್ನು ಸುಟ್ಟುಕೋ,” ಎಂದು ಉತ್ತರಕೊಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವರು ನನಗೆ, “ಇಗೋ, ಮನುಷ್ಯನ ಮಲಕ್ಕೆ ಬದಲಾಗಿ ಹಸುವಿನ ಸಗಣಿಯನ್ನು ಬಳಸಲು ನಿನಗೆ ಅನುಮತಿಸಿದ್ದೇನೆ. ಅದರಿಂದ ನೀನು ರೊಟ್ಟಿಯನ್ನು ತಯಾರಿಸಬಹುದು,” ಎಂದನು.