Ezekiel 4:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ದೇವರು ನನಗೆ, “ನರಪುತ್ರನೇ, ನಾನು ಜೆರುಸಲೇಮಿಗೆ ರೊಟ್ಟಿಯ ಸರಬರಾಜನ್ನು ನಿಲ್ಲಿಸುವೆನು. ಜನರಿಗೆ ತಿನ್ನಲು ಕೊಂಚ ರೊಟ್ಟಿ ಸಿಗುವುದು. ಆಹಾರವು ಮುಗಿದು ಹೋಗುತ್ತಿರುವದರಿಂದ ಅವರು ಘಹಳವಾಗಿ ಚಿಂತಿಸುವರು. ಅವರಿಗೆ ಸಬಲ್ಪವೇ ಕುಡಿಯುವ ನೀರು ಇರುವುದು. ಆ ನೀರನ್ನು ಕುಡಿಯುವಾಗ ಅವರಿಗೆ ಭಯಹಿಡಿಯುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಆತನು ನನಗೆ ಹೀಗೆ ಹೇಳಿದನು, “ನರಪುತ್ರನೇ, ನಾನು ಯೆರೂಸಲೇಮಿನಲ್ಲಿ ಆಹಾರ ಸರಬರಾಜನ್ನು ನಿಲ್ಲಿಸಿಬಿಡುವೆನು. ನಿವಾಸಿಗಳು ಅನ್ನವನ್ನು ತೂಕದ ಪ್ರಕಾರ ಕಳವಳದಿಂದ ತಿನ್ನುವರು, ನೀರನ್ನು ಅಳತೆಯ ಪ್ರಕಾರ ನಡುಗುತ್ತಾ ಕುಡಿಯುವರು.
Kannada BSI Bible 2016
ಇದಾದ ಮೇಲೆ ಆತನು ನನಗೆ ಮನುಷ್ಯ ಪುತ್ರನೇ, ಇಗೋ, ನಾನು ಯೆರೂಸಲೇಮಿನಲ್ಲಿ ಅನ್ನದಾನವನ್ನು ಮುರಿಯುವೆನು. ಅವರು ತೂಕದ ಪ್ರಕಾರ ಜಾಗರೂಕತೆಯಿಂದ ರೊಟ್ಟಿಯನ್ನು ತಿನ್ನುವರು. ನೀರನ್ನು ಅಳತೆಯ ಪ್ರಕಾರ ಆಶ್ಚರ್ಯದಿಂದ ಕುಡಿಯುವರು.ಅವರಿಗೆ ರೊಟ್ಟಿ ಮತ್ತು ನೀರಿನ ಕೊರತೆಯಿಂದ ಆಶ್ಚರ್ಯಪಟ್ಟು ಒಬ್ಬರ ಸಂಗಡ ಒಬ್ಬರು ತಮ್ಮ ಅಕ್ರಮಗಳಿಗಾಗಿ ಕ್ಷಯಿಸಿ ಹೋಗುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಆತನು ನನಗೆ ಹೀಗೆ ಹೇಳಿದನು - ನರಪುತ್ರನೇ, ನಾನು ಯೆರೂಸಲೇವಿುನಲ್ಲಿ ಜೀವನಾಧಾರವನ್ನು ಮುರಿದುಬಿಡುವೆನು, ನಿವಾಸಿಗಳು ಅನ್ನವನ್ನು ತೂಕದ ಪ್ರಕಾರ ಬೆದರಿನಿಂದ ತಿನ್ನುವರು, ನೀರನ್ನು ಅಳತೆಯ ಪ್ರಕಾರ ಬೆರಗಾಗಿ ಕುಡಿಯುವರು;
Kannada Bible (KNCL) BSI 2016
ಇದಲ್ಲದೆ ಅವರು ನನಗೆ ಹೀಗೆ ಹೇಳಿದರು: “ನರಪುತ್ರನೇ, ನಾನು ಜೆರುಸಲೇಮಿನಲ್ಲಿ ಆಹಾರ ಸರಬರಾಜನ್ನು ನಿಲ್ಲಿಸಿಬಿಡುವೆನು. ನಿವಾಸಿಗಳು ಅನ್ನವನ್ನು ತೂಕಮಾಡಿ ಅಂಜಿಕೆಯಿಂದ ತಿನ್ನುವರು, ನೀರನ್ನು ಅಳತೆಮಾಡಿ ಕಳವಳದಿಂದ ಕುಡಿಯುವರು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಾದ ಮೇಲೆ ಅವರು ನನಗೆ, “ಮನುಷ್ಯಪುತ್ರನೇ, ಇಗೋ, ನಾನು ಯೆರೂಸಲೇಮಿನಲ್ಲಿ ಆಹಾರ ಸರಬರಾಜನ್ನು ಮುರಿಯುವೆನು. ಅವರು ತೂಕದ ಪ್ರಕಾರ ಚಿಂತೆಯಿಂದ ರೊಟ್ಟಿಯನ್ನು ತಿನ್ನುವರು. ನೀರನ್ನು ಅಳತೆಯ ಪ್ರಕಾರ ನಿರಾಶೆಯಿಂದ ಕುಡಿಯುವರು.