Ezekiel 4:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಬಳಿಕ ಒಂದು ಕಬ್ಬಿಣದ ರೊಟ್ಟಿ ಕಲ್ಲನ್ನು ನಿನಗೂ ನಗರಕ್ಕೂ ಮಧ್ಯೆ ಇಡು. ಅದು ನಿನಗೂ ನಗರಕ್ಕೂ ನಡುವೆ ಇರುವ ಕಬ್ಬಿಣದ ಗೋಡೆಯಂತಿರುವುದು. ಈ ರೀತಿಯಾಗಿ ನೀನು ಆ ನಗರಕ್ಕೆ ವಿರುದ್ಧವಾಗಿರುವಂತೆ ಕಂಡು ಬರುವಿ. ನೀನು ಆ ನಗರಕ್ಕೆ ಮುತ್ತಿಗೆ ಹಾಕಿ ಅದರ ಮೇಲೆ ಯುದ್ಧ ಮಾಡುವಿ. ಯಾಕೆಂದರೆ, ಶೀಘ್ರದಲ್ಲೇ ಏನು ಸಂಭವಿಸುತ್ತದೆ ಎಂಬುದಕ್ಕೆ ಇಸ್ರೇಲ್ ಜನರಿಗೆ ಇದು ಸೂಚನೆಯಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಮೇಲೆ ಕಬ್ಬಿಣದ ಹಂಚನ್ನು ತೆಗೆದುಕೊಂಡು ಅದನ್ನು ನಿನಗೂ ಮತ್ತು ಆ ಪಟ್ಟಣಕ್ಕೂ ಮಧ್ಯೆ ಕಬ್ಬಿಣದ ಗೋಡೆಯನ್ನಾಗಿ ನಿಲ್ಲಿಸಿ ಆ ಪಟ್ಟಣದ ಮೇಲೆ ದೃಷ್ಟಿಯಿಡು; ಅದು ಮುತ್ತಿಗೆ ಹಾಕಲ್ಪಡುವುದು, ನೀನು ಅದನ್ನು ಮುತ್ತಿಗೆ ಹಾಕಿದಂತಾಗುವುದು. ಇದು ಇಸ್ರಾಯೇಲ್ ವಂಶದವರಿಗೆ ಒಂದು ಗುರುತು.
Kannada BSI Bible 2016
ಇದಾದ ಮೇಲೆ ನೀನು ಒಂದು ಕಬ್ಬಿಣದ ತಟ್ಟೆಯನ್ನು ತೆಗೆದುಕೊಂಡು ಅದನ್ನು ಕಬ್ಬಿಣದ ಗೋಡೆಯೆಂದು ತಿಳಿದು ನಿನಗೂ ನಗರಕ್ಕೂ ಮಧ್ಯದಲ್ಲಿ ಇರಿಸು. ಆಮೇಲೆ ಅದಕ್ಕೆ ಎದುರಾಗಿ ನಿನ್ನ ಮುಖವನ್ನು ಇಡು. ಆಗ ಅದು ಮುತ್ತಲ್ಪಡುವದು; ನೀನು ಅದಕ್ಕೆ ಎದುರಾಗಿ ಮುತ್ತಿ ದಂತಾಗುವದು. ಇದು ಇಸ್ರಾಯೇಲ್‌ ಮನೆತನದ ಗುರುತಾಗಿರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಕಬ್ಬಿಣದ ಹಂಚನ್ನು ತೆಗೆದುಕೊಂಡು ಅದನ್ನು ನಿನಗೂ ಆ ಪಟ್ಟಣಕ್ಕೂ ಮಧ್ಯೆ ಕಬ್ಬಿಣದ ಗೋಡೆಯನ್ನಾಗಿ ನಿಲ್ಲಿಸಿ ಆ ಪಟ್ಟಣದ ಮೇಲೆ ದೃಷ್ಟಿಯಿಡು; ಅದು ಮುತ್ತಲ್ಪಡುವದು, ನೀನು ಅದನ್ನು ಮುತ್ತಿದಂತಾಗುವದು. ಇದು ಇಸ್ರಾಯೇಲ್ ವಂಶದವರಿಗೆ ಗುರುತು.
Kannada Bible (KNCL) BSI 2016
ಆಮೇಲೆ ಕಬ್ಬಿಣದ ಹೆಂಚನ್ನು ತೆಗೆದುಕೊಂಡು ಅದನ್ನು ನಿನಗೂ ಆ ಪಟ್ಟಣಕ್ಕೂ ಮಧ್ಯೆ ಕಬ್ಬಿಣದ ಗೋಡೆಯನ್ನಾಗಿ ನಿಲ್ಲಿಸಿ ಆ ಪಟ್ಟಣದ ಮೇಲೆ ದೃಷ್ಟಿಯಿಡು; ಅದು ಮುತ್ತಲ್ಪಡುವುದು. ನೀನು ಅದನ್ನು ಮುತ್ತಿದಂತಾಗುವುದು. ಇದು ಇಸ್ರಯೇಲ್ ವಂಶದವರಿಗೆ ಒಂದು ಸಂಕೇತ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಮೇಲೆ ಕಬ್ಬಿಣದ ಹಂಚನ್ನು ತೆಗೆದುಕೊಂಡು, ಅದನ್ನು ನಿನಗೂ, ಆ ಪಟ್ಟಣಕ್ಕೂ ಮಧ್ಯೆ ಕಬ್ಬಿಣದ ಗೋಡೆಯನ್ನಾಗಿ ನಿಲ್ಲಿಸಿ, ಆ ಪಟ್ಟಣದ ಮೇಲೆ ದೃಷ್ಟಿಯಿಡು, ಅದು ಮುತ್ತಲಾಗುವುದು. ನೀನು ಅದನ್ನು ಮುತ್ತಿದಂತಾಗುವುದು. ಇದು ಇಸ್ರಾಯೇಲಿನ ಜನರಿಗೆ ಒಂದು ಸಂಕೇತ.