Ezekiel 4:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರು ಮತ್ತೆ ಹೇಳಿದ್ದೇನೆಂದರೆ: “ಈಗ ನೀನು ನಿನ್ನ ಬಟ್ಟೆಯ ತೋಳನ್ನು ಮೇಲಕ್ಕೆ ಮಡಿಚಿ ನಿನ್ನ ಕೈಯನ್ನು ಇಟ್ಟಿಗೆಯ ಮೇಲೆ ಚಾಚು. ಜೆರುಸಲೇಮ್ ನಗರದ ಮೇಲೆ ಯುದ್ಧ ಮಾಡುವವನಂತೆ ನಟಿಸು. ಪಟ್ಟಣದ ವಿರುದ್ಧವಾಗಿ ಪ್ರವಾದಿಸು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ತೋಳಿಗೆ ಹೊದಿಕೆಯಿಲ್ಲದೆ, ಮುತ್ತಿಗೆಯಾದ ಯೆರೂಸಲೇಮಿನ ಕಡೆಗೆ ಮುಖವನ್ನು ತಿರುಗಿಸಿ, ಅದರ ವಿಷಯವಾಗಿ ಅಶುಭವನ್ನು ಪ್ರವಾದಿಸು.
Kannada BSI Bible 2016
ಆದದರಿಂದ ಯೆರೂಸಲೇಮಿನ ಮುತ್ತಿಗೆಯ ಕಡೆಗೆ ನಿನ್ನ ಮುಖವನ್ನು ಇಡಬೇಕು; ನಿನ್ನ ಭುಜವನ್ನು ನೀನು ಬರಿದುಮಾಡಿ ಕೊಂಡು ಅದಕ್ಕೆ ವಿರೋಧವಾಗಿ ಪ್ರವಾದಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ತೋಳಿಗೆ ಹೊದಿಕೆಯಿಲ್ಲದೆ ಮುತ್ತಿಗೆಯಾದ ಯೆರೂಸಲೇವಿುನ ಕಡೆಗೆ ಮೋರೆ ತಿರುಗಿಸಿ ಅದರ ವಿಷಯವಾಗಿ ಅಶುಭವನ್ನು ಪ್ರಕಟಿಸು.
Kannada Bible (KNCL) BSI 2016
“ನಿನ್ನ ತೋಳಿಗೆ ಹೊದಿಕೆಯಿಲ್ಲದೆ, ಮುತ್ತಿಗೆಯಾದ ಜೆರುಸಲೇಮಿನ ಕಡೆಗೆ ಮೋರೆ ತಿರುಗಿಸಿ, ಅದರ ವಿರುದ್ಧ ಅಶುಭವನ್ನು ಪ್ರವಾದಿಸು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ಯೆರೂಸಲೇಮಿನ ಮುತ್ತಿಗೆಯ ಕಡೆಗೆ ನಿನ್ನ ಮುಖವನ್ನು ಇಡಬೇಕು. ನಿನ್ನ ಭುಜವನ್ನು ನೀನು ಬರಿದುಮಾಡಿಕೊಂಡು, ಅದಕ್ಕೆ ವಿರೋಧವಾಗಿ ಪ್ರವಾದಿಸಬೇಕು.