Ezekiel 4:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರು ಮತ್ತೆ ಹೇಳಿದ್ದೇನೆಂದರೆ: “ನೀನು ರೊಟ್ಟಿಯನ್ನು ಮಾಡಲು ಕಾಳುಗಳನ್ನು ತರಙೇಕು. ಸಬಲ್ಪ ಗೋಊ, ಬಾರ್ಲಿ, ಅಲಸಂದೆ, ಸಾವೆ, ಕಡಲೆ ಇವುಗಳನೆಐಲ್ಲಾ ಒಂದು ಬೋಗುಣಿಯಲ್ಲಿ ಹಾಕಿ ಬೀಸಿ ಹಿಟ್ಟು ಮಾಡು. ಈ ಹಿಟ್ಟನ್ನು ನಾದಿ ರೊಟ್ಟಿ ಮಾಡು. ನೀನು ಮುನ್ನೂರತೊಂಭತ್ತು ದಿವಸಗಳ ಕಾಲ ನಿನ್ನ ಎಡಮಗ್ಗುಲಲ್ಲಿ ಮಲಗಿರುವಾಗ ಅದನ್ನು ಮಾತ್ರ ತಿನ್ನುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಇದಲ್ಲದೆ ನೀನು ಗೋದಿ, ಜವೆಗೋದಿ, ಅವರೆ, ಅಲಸಂದಿ, ನವಣೆ, ಕಡಲೆ, ಇವುಗಳನ್ನು ತೆಗೆದುಕೊಂಡು ಒಂದೇ ಪಾತ್ರೆಯಲ್ಲಿ ಹಾಕಿ ಅವುಗಳಿಂದ ರೊಟ್ಟಿಯನ್ನು ಮಾಡಿಕೋ; ಮಗ್ಗುಲಲ್ಲಿ ಮಲಗಿಕೊಳ್ಳುವಷ್ಟು ದಿನ, ಅಂದರೆ ಮುನ್ನೂರತೊಂಬತ್ತು ದಿನ ಅದನ್ನು ತಿನ್ನು.
Kannada BSI Bible 2016
ಇದಲ್ಲದೆ ನೀನು ಗೋಧಿ, ಬಾರ್ಲಿ, ಅವರೆ, ಅಲ ಸಂದಿ, ನವಣೆ, ಸಜ್ಜೆಗಳನ್ನು ತೆಗೆದುಕೊಂಡು ಅವುಗಳನ್ನು ಒಂದು ಮಡಿಕೆಯಲ್ಲಿಟ್ಟು ನೀನು ನಿನ್ನ ಪಾರ್ಶ್ವದಲ್ಲಿ ಮಲಗುವ ದಿವಸಗಳ ಲೆಕ್ಕದ ಪ್ರಕಾರ ನಿನಗಾಗಿ ರೊಟ್ಟಿಯನ್ನು ಮಾಡಿಕೊಂಡು ಮುನ್ನೂರ ತೊಂಭತ್ತು ದಿನಗಳು ಅದರಿಂದಲೇ ತಿನ್ನಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ನೀನು ಗೋದಿ, ಜವೆಗೋದಿ, ಅವರೆ, ಅಲಸಂದೆ, ಸಾವೆ, ಕಡಲೆ, ಇವುಗಳನ್ನು ತೆಗೆದುಕೊಂಡು ಒಂದೇ ಪಾತ್ರೆಯಲ್ಲಿ ಹಾಕಿ ಅವುಗಳಿಂದ ರೊಟ್ಟಿಯನ್ನು ಮಾಡಿಕೋ; ಮಗ್ಗುಲಲ್ಲಿ ಮಲಗಿಕೊಳ್ಳುವಷ್ಟು ದಿನ, ಅಂದರೆ ಮುನ್ನೂರತೊಂಭತ್ತು ದಿನ ಅದನ್ನು ತಿನ್ನು.
Kannada Bible (KNCL) BSI 2016
“ಇದಲ್ಲದೆ ನೀನು ಗೋದಿ, ಜವೆಗೋದಿ, ಅವರೆ, ಅಲಸಂದೆ, ಸಾವೆ, ಕಡಲೆ ಇವುಗಳನ್ನು ತೆಗೆದುಕೊಂಡು ಒಂದೇ ಪಾತ್ರೆಯಲ್ಲಿ ಹಾಕಿ ಅವುಗಳಿಂದ ರೊಟ್ಟಿಯನ್ನು ಮಾಡಿಕೋ; ಮಗ್ಗುಲಲ್ಲಿ ಮಲಗಿಕೊಳ್ಳುವಷ್ಟು ದಿನ, ಅಂದರೆ ಮುನ್ನೂರ ತೊಂಬತ್ತು ದಿನ ಅದನ್ನು ತಿನ್ನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀನು ಗೋಧಿ, ಜವೆಗೋಧಿ, ಅವರೆ, ಅಲಸಂದಿ, ನವಣೆ, ಸಜ್ಜೆಗಳನ್ನು ತೆಗೆದುಕೊಂಡು, ಅವುಗಳನ್ನು ಒಂದು ಮಡಿಕೆಯಲ್ಲಿಟ್ಟು, ನೀನು ಒಂದು ಕಡೆಯಲ್ಲಿ ಮಲಗುವ ದಿವಸಗಳ ಲೆಕ್ಕದ ಪ್ರಕಾರ ನಿನಗಾಗಿ ರೊಟ್ಟಿಯನ್ನು ಮಾಡಿಕೊಂಡು, ಮುನ್ನೂರ ತೊಂಬತ್ತು ದಿನಗಳು ಅವರಿಂದಲೇ ತಿನ್ನಬೇಕು.