Ezekiel 40:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನು ಆ ಕೋಣೆಯ ಹೊರಭಾಗದ ತುದಿಯಿಂದ ಇನ್ನೊಂದು ಎದುರಿಗಿದ್ದ ಕೋಣೆಯ ಹೊರಭಾಗದ ತುದಿಯ ತನಕ ಅಳತೆ ಮಾಡಿದಾಗ ಅದು ಇಪ್ಪತ್ತೈದು ಮೊಳವಿತ್ತು. ಅದರ ಬಾಗಿಲುಗಳು ಎದುರು ಬಂದುರಾಗಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಒಂದು ಕಡೆಯ ಗೋಡೆಕೋಣೆಗಳ ಮಾಳಿಗೆಯ ಹೊರಗಡೆಯಿಂದ ಇನ್ನೊಂದು ಕಡೆಯ ಗೋಡೆಕೋಣೆಗಳ ಮಾಳಿಗೆಯ ಹೊರಗಡೆ ಅಂದರೆ ಒಂದು ಕೋಣೆಯ ಬಾಗಿಲಿಂದ ಇನ್ನೊಂದು ಕೋಣೆಯ ಬಾಗಿಲಿಗೆ ಹೆಬ್ಬಾಗಿಲಿನ ಅಗಲವನ್ನು ಅಳೆಯಲು ಇಪ್ಪತ್ತೈದು ಮೊಳವಾಗಿತ್ತು.
Kannada BSI Bible 2016
ಆಗ ಅವನು ಬಾಗಲನ್ನು ಒಂದು ಕೊಠಡಿಯ ಮಾಳಿಗೆಯಿಂದ ಇನ್ನೊಂದು ಕೊಠಡಿಯ ಮಾಳಿಗೆಗೆ ಅಳೆದನು. ಆ ದ್ವಾರದಿಂದ ಈ ದ್ವಾರಕ್ಕೇರುವ ಅಗಲವು ಇಪ್ಪತ್ತೈದು ಮೊಳಗಳಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಒಂದು ಕಡೆಯ ಗೋಡೇಕೋಣೆಗಳ ಮಾಳಿಗೆಯ ಹೊರಕೊನೆಯಿಂದ ಇನ್ನೊಂದು ಕಡೆಯ ಗೋಡೇಕೋಣೆಗಳ ಮಾಳಿಗೆಯ ಹೊರಕೊನೆಗೆ ಅಂದರೆ [ಒಂದು ಕೋಣೆಯ] ಬಾಗಿಲಿನಿಂದ [ಇನ್ನೊಂದು ಕೋಣೆಯ] ಬಾಗಿಲಿಗೆ ಹೆಬ್ಬಾಗಿಲಿನ ಅಗಲವನ್ನು ಅಳೆಯಲು ಇಪ್ಪತೈದು ಮೊಳವಿತ್ತು.
Kannada Bible (KNCL) BSI 2016
ಅವನು ಒಂದು ಕಡೆಯ ಗೋಡೆಕೋಣೆಗಳ ಮಾಳಿಗೆಯ ಹೊರಕೊನೆಯಿಂದ ಇನ್ನೊಂದು ಕಡೆಯ ಗೋಡೇಕೋಣೆಗಳ ಮಾಳಿಗೆಯ ಹೊರ ಕೊನೆಗೆ, ಅಂದರೆ ಒಂದು ಕೋಣೆಯ ಬಾಗಿಲಿನಿಂದ ಇನ್ನೊಂದು ಕೋಣೆಯ ಬಾಗಿಲಿಗೆ ಹೆಬ್ಬಾಗಿಲಿನ ಅಗಲವನ್ನು ಅಳೆಯಲು ಹನ್ನೆರಡುವರೆ ಮೀಟರಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವನು, ಒಂದು ಕೋಣೆಯ ಉಪವಿಭಾಗದ ಮಾಳಿಗೆಯಿಂದ ಇನ್ನೊಂದು ಕೋಣೆಯ ಉಪವಿಭಾಗದ ಮಾಳಿಗೆಯವರೆಗೆ ಅಳೆದನು. ಆ ದ್ವಾರದಿಂದ ಈ ದ್ವಾರಕ್ಕೇರುವ ಅಗಲವು ಸುಮಾರು ಹದಿಮೂರು ಮೀಟರಿತ್ತು.