Ezekiel 40:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಮೇಲೆ ಅವನು ನನ್ನನ್ನು ಹೊರಗಿನ ಪ್ರಾಕಾರಕ್ಕೆ ಕರೆದುಕೊಂಡು ಹೋದನು. ಆ ಪ್ರಾಕಾರದ ಸುತ್ತಲೂ ಮೂವತ್ತು ಕೋಣೆಗಳೂ ನೆಲಗಟ್ಟೂ ಇದ್ದವು. ಆ ಕೋಣೆಗಳು ಗೋಡೆಗೆ ತಾಗಿ ನೆಲಗಟ್ಟಿಗೆ ಮುಖ ಮಾಡಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮೇಲೆ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ಕರೆದು ತಂದನು; ಇಗೋ, ಕೋಣೆಗಳೂ ಅಂಗಳದ ಸುತ್ತಲೂ ಕಲ್ಲುಹಾಸಿದ ನೆಲವೂ ಕಾಣಿಸಿದವು; ಕಲ್ಲುಹಾಸಿದ ನೆಲದ ಮೇಲೆ ಒಟ್ಟಾಗಿ ಮೂವತ್ತು ಕೊಠಡಿಗಳಿದ್ದವು.
Kannada BSI Bible 2016
ಆಗ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ತಂದನು; ಇಗೋ, ಕೊಠಡಿಗಳೂ ಕಲ್ಲು ಹಾಸಿದ ನೆಲವೂ ಅಂಗಳದ ಸುತ್ತಲೂ ಮಾಡಲ್ಪಟ್ಟಿದ್ದವು; ಕಲ್ಲು ಹಾಸಿದ ನೆಲದ ಬದಿಯಲ್ಲಿ ಮೂವತ್ತು ಕೊಠಡಿ ಗಳಿದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಅವನು ನನ್ನನ್ನು ಹೊರಗಣ ಪ್ರಾಕಾರಕ್ಕೆ ಕರತಂದನು; ಇಗೋ, ಕೋಣೆಗಳೂ ಪ್ರಾಕಾರದ ಸುತ್ತಲು ಹಾಕಿದ ನೆಲಗಟ್ಟೂ ಕಾಣಿಸಿದವು; ಒಟ್ಟಾಗಿ ನೆಲಗಟ್ಟಿನ ಮೇಲೆ ಮೂವತ್ತು ಕೋಣೆಗಳಿದ್ದವು.
Kannada Bible (KNCL) BSI 2016
ಅನಂತರ ಆ ಪುರುಷ ನನ್ನನ್ನು ಹೊರಗಣ ಪ್ರಾಕಾರಕ್ಕೆ ಕರೆದುತಂದನು; ಇಗೋ, ಕೋಣೆಗಳೂ ಪ್ರಾಕಾರದ ಸುತ್ತಲು ಹಾಕಿದ ನೆಲಗಟ್ಟೂ ಕಾಣಿಸಿದವು. ಒಟ್ಟಾಗಿ ನೆಲೆಗಟ್ಟಿನ ಮೇಲೆ ಮೂವತ್ತು ಕೋಣೆಗಳಿದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ಕರೆತಂದನು. ಅಲ್ಲಿ ನಾನು ಕೆಲವು ಕೋಣೆಗಳನ್ನು ಮತ್ತು ಅಂಗಳದ ಸುತ್ತಲೂ ನಿರ್ಮಿಸಲಾದ ಒಂದು ಕಾಲುದಾರಿಯನ್ನು ಕಂಡೆನು. ಕಾಲುದಾರಿ ಉದ್ದಕ್ಕೂ ಮೂವತ್ತು ಕೋಣೆಗಳಿದ್ದವು.