Ezekiel 40:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಪ್ರವೇಶದ್ವಾರ, ಅಕ್ಕಪಕ್ಕದಲ್ಲಿದ್ದ ಮೂರು ಕೋಣೆಗಳು ಮತ್ತು ಅದರ ಕೈಸಾಲೆಗಳೆಲ್ಲವೂ ಮೊದಲಿನ ಪ್ರವೇಶದ್ವಾರದಂತೆಯೇ ಅಳತೆಯುಳ್ಳವುಗಳಾಗಿತ್ತು. ಪ್ರವೇಶ ದ್ವಾರವು ಐವತ್ತು ಮೊಳ ಉದ್ದ, ಇಪ್ಪತ್ತೈದು ಮೊಳ ಅಗಲವಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದರೊಳಗೆ ಎರಡು ಕಡೆ ಮೂರು ಗೋಡೆಕೋಣೆಗಳಿದ್ದವು; ಅಲ್ಲಿನ ಕಂಬಗಳೂ ಕೈಸಾಲೆಯೂ ಮೊದಲನೆಯ ಹೆಬ್ಬಾಗಿಲಿನ ಅಳತೆಯಂತಿದ್ದವು. ಆ ಹೆಬ್ಬಾಗಿಲಿನ ಉದ್ದವೂ ಐವತ್ತು ಮೊಳ, ಅಗಲವೂ ಇಪ್ಪತ್ತೈದು ಮೊಳವಾಗಿತ್ತು.
Kannada BSI Bible 2016
ಅದರ ಚಿಕ್ಕ ಕೊಠಡಿಗಳು ಈ ಕಡೆಗೂ ಆ ಕಡೆಗೂ ಮೂರು ಮೂರು ಇದ್ದವು; ಅದರ ಕಂಬಗಳು ಕೈಸಾಲೆ ಗಳು ಮೊದಲನೇ ಭಾಗಲಿನ ಅಳತೆಯ ಹಾಗಿದ್ದವು; ಅದರ ಉದ್ದ ಐವತ್ತು ಮೊಳ ಅಗಲ ಇಪ್ಪತ್ತೈದು ಮೊಳ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರೊಳಗೆ ಎರಡು ಕಡೆ ಗೋಡೇಕೋಣೆಗಳು ಮೂರುಮೂರಿದ್ದವು; ಅಲ್ಲಿನ ನಿಲವುಕಂಬಗಳೂ ಕೈಸಾಲೆಯೂ ಮೊದಲನೆಯ ಹೆಬ್ಬಾಗಿಲಿನ ಅಳತೆಯಂತಿದ್ದವು; ಆ ಹೆಬ್ಬಾಗಿಲಿನ ಉದ್ದ ಐವತ್ತು ಮೊಳ, ಅಗಲ ಇಪ್ಪತ್ತೈದು ಮೊಳ.
Kannada Bible (KNCL) BSI 2016
ಅದರೊಳಗೆ ಎರಡು ಕಡೆ ಗೋಡೇ ಕೋಣೆಗಳು ಮೂರು ಮೂರಿದ್ದವು; ಅಲ್ಲಿನ ನಿಲವುಕಂಬಗಳೂ ಕೈಸಾಲೆಯೂ ಮೊದಲನೆಯ ಹೆಬ್ಬಾಗಿಲಿನ ಅಳತೆಯಂತಿದ್ದವು. ಆ ಹೆಬ್ಬಾಗಿಲಿನ ಉದ್ದ ಇಪ್ಪತ್ತೈದು ಮೀಟರ್, ಅಗಲ ಹನ್ನೆರಡುವರೆ ಮೀಟರ್.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದರ ಕೋಣೆಯ ಉಪವಿಭಾಗಗಳು ಈ ಕಡೆಗೂ ಆ ಕಡೆಗೂ ಮೂರು ಇದ್ದವು. ಅದರ ಕಂಬಗಳು ಮತ್ತು ಅದರ ಕೈಸಾಲೆಗಳು ಮೊದಲನೆಯ ಬಾಗಿಲಿನ ಅಳತೆಯಂತೆ ಇದ್ದವು. ಅದರ ಉದ್ದವು ಸುಮಾರು ಇಪ್ಪತ್ತೈದು ಮೀಟರ್ ಮತ್ತು ಅದರ ಅಗಲವು ಸುಮಾರು ಹದಿಮೂರು ಮೀಟರ್ ಇತ್ತು.