Ezekiel 40:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಳಗಿನ ಪ್ರಾಕಾರದ ದಕ್ಷಿಣದಲ್ಲಿ ಒಂದು ದ್ವಾರವಿತ್ತು. ಅವನು ಒಳಗಿನ ಪ್ರಾಕಾರದ ದ್ವಾರದಿಂದ ಹೊರಗಿನ ಪ್ರಾಕಾರದ ದ್ವಾರದ ತನಕ ಅಳತೆ ಮಾಡಿದನು. ದ್ವಾರದಿಂದ ದ್ವಾರಕ್ಕೆ ನೂರು ಮೊಳವಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಳಗಿನ ಅಂಗಳದಲ್ಲಿ ದಕ್ಷಿಣದ ಕಡೆಗೆ ಹೆಬ್ಬಾಗಿಲಿತ್ತು; ದಕ್ಷಿಣದ ಒಂದು ಬಾಗಿಲಿಂದ ಮತ್ತೊಂದು ಬಾಗಿಲಿಗೆ ನೂರು ಮೊಳ ಅಳೆದನು.
Kannada BSI Bible 2016
ಒಳಗಿನ ಅಂಗಳದಲ್ಲಿ ದಕ್ಷಿಣದ ಕಡೆಗೆ ಬಾಗಲಿತ್ತು; ಅವನು ಒಂದು ಬಾಗಲಿನಿಂದ ಮತ್ತೊಂದು ಬಾಗಲಿಗೆ ದಕ್ಷಿಣವಾಗಿ ನೂರು ಮೊಳ ಅಳೆದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಳಗಣ ಪ್ರಾಕಾರದಲ್ಲಿಯೂ ತೆಂಕಲಿಗೆ ಹೆಬ್ಬಾಗಿಲಿತ್ತು; ತೆಂಕಲಲ್ಲಿ ಒಂದು ಬಾಗಿಲಿಂದ ಎದುರುಬಾಗಿಲಿಗೆ ನೂರುಮೊಳ ಅಳೆದನು.
Kannada Bible (KNCL) BSI 2016
ಒಳಗಿನ ಪ್ರಾಕಾರದಲ್ಲೂ ದಕ್ಷಿಣಕ್ಕೆ ಹೆಬ್ಬಾಗಿಲಿತ್ತು. ದಕ್ಷಿಣದಲ್ಲಿ ಒಂದು ಬಾಗಿಲಿನಿಂದ ಎದುರುಬಾಗಿಲಿಗೆ ಅಳೆದಾಗ ಐವತ್ತು ಮೀಟರ್ ಇತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಳಗಿನ ಅಂಗಳದಲ್ಲಿ ದಕ್ಷಿಣದ ಕಡೆಗೆ ಬಾಗಿಲಿತ್ತು. ಅವನು ಒಂದು ಬಾಗಿಲಿನಿಂದ ಮತ್ತೊಂದು ಬಾಗಿಲಿಗೆ ದಕ್ಷಿಣವಾಗಿ ಸುಮಾರು ಐವತ್ತಮೂರು ಮೀಟರ್ ಎಂದು ಅಳೆದನು.