Ezekiel 40:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಮೇಲೆ ಅವನು ದಕ್ಷಿಣದ ದ್ವಾರದಿಂದ ಒಳಗಿನ ಪ್ರಾಕಾರಕ್ಕೆ ಕರೆದುಕೊಂಡು ಹೋದನು. ಈ ಪ್ರವೇಶದ್ವಾರವನ್ನು ಅಳತೆ ಮಾಡಿದನು. ಇದು ಕೂಡಾ ಒಳಗಿನ ಪ್ರಾಕಾರದ ಬೇರೆ ದ್ವಾರಗಳಂತೆಯೇ ಉದ್ದಗಲವಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಮೇಲೆ ಅವನು ನನ್ನನ್ನು ದಕ್ಷಿಣ ಬಾಗಿಲಿನ ಮಾರ್ಗವಾಗಿ ಒಳಗಣ ಅಂಗಳಕ್ಕೆ ಕರೆದು ತಂದನು. ಅವನು ಆ ದಕ್ಷಿಣ ಹೆಬ್ಬಾಗಿಲನ್ನೂ, ಅಲ್ಲಿನ ಗೋಡೆಕೋಣೆ, ಕಂಬ, ಕೈಸಾಲೆ ಇವುಗಳನ್ನೂ ಅಳೆಯಲು, ಅದರ ಅಳತೆಗಳೆಲ್ಲ ಸಮನಾಗಿದ್ದವು.
Kannada BSI Bible 2016
ಆಮೇಲೆ ಅವನು ನನ್ನನ್ನು ದಕ್ಷಿಣ ಬಾಗಲಿನಿಂದ ಒಳಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ ಅವನು ಈ ಅಳತೆಗಳ ಪ್ರಕಾರ ದಕ್ಷಿಣದ ಬಾಗಲನ್ನು ಅಳೆದನು;
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಅವನು ನನ್ನನ್ನು ತೆಂಕಣ ಬಾಗಿಲ ಮಾರ್ಗವಾಗಿ ಒಳಗಣ ಪ್ರಾಕಾರಕ್ಕೆ ಕರತಂದನು; ಅವನು ಆ ತೆಂಕಣ ಹೆಬ್ಬಾಗಿಲನ್ನೂ ಅಲ್ಲಿನ ಗೊಡೇಕೋಣೆ, ನಿಲವುಕಂಬ, ಕೈಸಾಲೆ ಇವುಗಳನ್ನೂ ಅಳೆಯಲು ಅಷ್ಟೇ ಅಳತೆಗಳಿದ್ದವು;
Kannada Bible (KNCL) BSI 2016
ಆಮೇಲೆ ಅವನು ನನ್ನನ್ನು ದಕ್ಷಿಣ ಬಾಗಿಲ ಮಾರ್ಗವಾಗಿ ಒಳಗಣ ಪ್ರಾಕಾರಕ್ಕೆ ಕರೆದುತಂದನು. ಅವನು ಆ ದಕ್ಷಿಣ ಹೆಬ್ಬಾಗಿಲನ್ನೂ ಅಲ್ಲಿನ ಗೋಡೇಕೋಣೆ, ನಿಲವುಕಂಬ, ಕೈಸಾಲೆ ಇವುಗಳನ್ನೂ ಅಳೆಯಲು ಅಷ್ಟೇ ಅಳತೆಗಳಿದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಮೇಲೆ ಅವನು ನನ್ನನ್ನು ದಕ್ಷಿಣ ಬಾಗಿಲಿನಿಂದ ಒಳಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ ಅವನು ಈ ಅಳತೆಗಳ ಪ್ರಕಾರ ದಕ್ಷಿಣದ ಬಾಗಿಲನ್ನು ಅಳೆದನು.