Ezekiel 40:31 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೊರಗಿನ ಪ್ರಾಕಾರದ ಪಕ್ಕದಲ್ಲಿರುವ ಪ್ರವೇಶ ದ್ವಾರದ ಕೊನೆಯಲ್ಲಿ ಕೈಸಾಲೆಯಿತ್ತು. ಖರ್ಜೂರ ವೃಕ್ಷದ ಕೆತ್ತನೆ ಕೆಲಸವು ಅದರ ಗೋಡೆಯ ಮೇಲಿತ್ತು. ಆ ಪ್ರವೇಶ ದ್ವಾರವನ್ನು ಹತ್ತಲು ಎಂಟು ಮೆಟ್ಟಿಲುಗಳಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಹೆಬ್ಬಾಗಿಲ ಕೈಸಾಲೆಯು ಹೊರಗಣ ಅಂಗಳಕ್ಕೆ ಅಭಿಮುಖವಾಗಿತ್ತು. ಅದರ ಕಂಬಗಳಲ್ಲಿ ಖರ್ಜೂರ ಮರಗಳು ಚಿತ್ರಿತವಾಗಿದ್ದವು. ಅಲ್ಲಿ ಹತ್ತುವುದಕ್ಕೆ ಎಂಟು ಮೆಟ್ಟಿಲುಗಳಿದ್ದವು.
Kannada BSI Bible 2016
ಅದರ ಕಮಾ ನುಗಳು ಹೊರಗಿನ ಅಂಗಳದ ಕಡೆಗಿದ್ದವು; ಅದರ ಕಂಬಗಳಲ್ಲಿ ಖರ್ಜೂರದ ಮರಗಳಿದ್ದವು. ಅದಕ್ಕೆ ಏರುವದಕ್ಕೆ ಎಂಟು ಮೆಟ್ಟಲುಗಳು ಇದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಹೆಬ್ಬಾಗಿಲ ಕೈಸಾಲೆಯು ಹೊರಗಣ ಪ್ರಾಕಾರಕ್ಕೆ ಅಭಿಮುಖವಾಗಿತ್ತು; ಅದರ ನಿಲವುಕಂಬಗಳಲ್ಲಿ ಖರ್ಜೂರ ವೃಕ್ಷಗಳು ಚಿತ್ರಿತವಾಗಿದ್ದವು; ಅಲ್ಲಿ ಹತ್ತುವದಕ್ಕೆ ಎಂಟು ಮೆಟ್ಲುಗಳಿದ್ದವು.
Kannada Bible (KNCL) BSI 2016
ಆ ಹೆಬ್ಬಾಗಿಲ ಕೈಸಾಲೆ ಹೊರಗಣ ಪ್ರಾಕಾರಕ್ಕೆ ಅಭಿಮುಖವಾಗಿತ್ತು; ಅದರ ನಿಲವುಕಂಬಗಳಲ್ಲಿ ಖರ್ಜೂರ ವೃಕ್ಷಗಳು ಚಿತ್ರಿತವಾಗಿದ್ದವು; ಅಲ್ಲಿ ಹತ್ತುವುದಕ್ಕೆ ಎಂಟು ಮೆಟ್ಟಲುಗಳಿದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದರ ಪಡಸಾಲೆಗಳು ಹೊರಗಿನ ಅಂಗಳದ ಕಡೆಗಿದ್ದವು. ಅದರ ಕಂಬಗಳಲ್ಲಿ ಖರ್ಜೂರದ ಮರಗಳಿಂದ ಅಲಂಕರಿಸಲಾಗಿದ್ದವು. ಅದಕ್ಕೆ ಏರುವುದಕ್ಕೆ ಎಂಟು ಮೆಟ್ಟಲುಗಳು ಇದ್ದವು.