Ezekiel 40:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದರ ಕೋಣೆಗಳು, ಗೋಡೆ, ಕೈಸಾಲೆ ಎಲ್ಲವೂ ಬೇರೆ ಪ್ರವೇಶದ್ವಾರದ ಅಳತೆಯಂತೆ ಇದ್ದವು. ದ್ವಾರದ ಸುತ್ತಲೂ ಕೈಸಾಲೆಯ ಮೇಲೂ ಕಿಟಕಿಗಳಿದ್ದವು. ಆ ಪ್ರವೇಶ ದ್ವಾರವು ಐವತ್ತು ಮೊಳ ಉದ್ದ ಇಪ್ಪತ್ತೈದು ಮೊಳ ಅಗಲವಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದರಲ್ಲಿಯೂ ಮತ್ತು ಅದರ ಕೈಸಾಲೆಯಲ್ಲಿಯೂ ಎಲ್ಲಾ ಕಡೆ ಕಿಟಕಿಗಳಿದ್ದವು; ಆ ಹೆಬ್ಬಾಗಿಲಿನ ಉದ್ದ ಐವತ್ತು ಮೊಳ ಮತ್ತು ಅಗಲ ಇಪ್ಪತ್ತೈದು ಮೊಳವಾಗಿತ್ತು.
Kannada BSI Bible 2016
ಅಲ್ಲಿನ ಚಿಕ್ಕ ಕೊಠಡಿಗಳನ್ನೂ ಕಂಬಗಳನ್ನೂ ಕಮಾನುಗಳನ್ನೂ ಈ ಅಳತೆಗಳ ಪ್ರಕಾರವೇ ಅವನು ಅಳೆದನು; ಅದರಲ್ಲಿ ಸಹ ಸುತ್ತಲೂ ಇರುವ ಅದರ ಕಮಾನುಗಳಲ್ಲಿಯೂ ಕಿಟಕಿಗಳು ಇದ್ದವು. ಅದರ ಉದ್ದವು ಐವತ್ತು ಮೊಳ ಅಗಲವು ಇಪ್ಪತ್ತೈದು ಮೊಳ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರಲ್ಲಿಯೂ ಅದರ ಕೈಸಾಲೆಯಲ್ಲಿಯೂ ಎಲ್ಲಾ ಕಡೆ ಕಿಟಕಿಗಳಿದ್ದವು; ಆ ಹೆಬ್ಬಾಗಿಲಿನ ಉದ್ದ ಐವತ್ತು ಮೊಳ, ಅಗಲ ಇಪ್ಪತ್ತೈದು ಮೊಳ.
Kannada Bible (KNCL) BSI 2016
ಅದರಲ್ಲಿಯೂ ಅದರ ಕೈಸಾಲೆಯಲ್ಲಿಯೂ ಎಲ್ಲಾ ಕಡೆ ಕಿಟಕಿಗಳಿದ್ದವು. ಆ ಹೆಬ್ಬಾಗಿಲಿನ ಉದ್ದ ಇಪ್ಪತ್ತೈದು ಮೀಟರ್, ಅಗಲ ಹನ್ನೆರಡುವರೆ ಮೀಟರ್.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲಿನ ಕೋಣೆಯ ಉಪವಿಭಾಗಗಳನ್ನೂ ಅದರ ಕಂಬಗಳನ್ನೂ ಅದರ ಪಡಸಾಲೆಗಳನ್ನೂ ಈ ಅಳತೆಯ ಪ್ರಕಾರ ಅಳೆದನು. ಅದರಲ್ಲಿಯೂ ಸುತ್ತಲೂ ಇರುವ ಅದರ ಪಡಸಾಲೆಗಳಲ್ಲಿಯೂ ಕಿಟಕಿಗಳಿದ್ದವು. ಅದರ ಉದ್ದವು ಸುಮಾರು ಇಪ್ಪತ್ತೈದು ಮೀಟರ್ ಮತ್ತು ಅದರ ಅಗಲವು ಸುಮಾರು ಹದಿಮೂರು ಮೀಟರ್ ಇತ್ತು.