Ezekiel 40:34 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದರ ಕೈಸಾಲೆ ಹೊರ ಪ್ರಾಕಾರದ ಪಕ್ಕದಲ್ಲಿ ಪ್ರವೇಶ ದ್ವಾರದ ಕೊನೆಯಲ್ಲಿತ್ತು. ದ್ವಾರದ ಎರಡು ಪಕ್ಕಗಳ ಗೋಡೆಗಳಲ್ಲಿ ಖರ್ಜೂರ ವೃಕ್ಷದ ಕೆತ್ತನೆ ಕೆಲಸವಿತ್ತು. ಆ ದ್ವಾರಕ್ಕೇರಲು ಎಂಟು ಮೆಟ್ಟಿಲುಗಳಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದರ ಕೈಸಾಲೆಯು ಹೊರಗಿನ ಅಂಗಳಕ್ಕೆ ಅಭಿಮುಖವಾಗಿತ್ತು; ಕೈಸಾಲೆಯ ಎದುರುಬದುರಿನ ಕಂಬಗಳಲ್ಲಿ ಖರ್ಜೂರ ಮರಗಳು ಚಿತ್ರಿತವಾಗಿದ್ದವು; ಅಲ್ಲಿ ಹತ್ತುವುದಕ್ಕೆ ಎಂಟು ಮೆಟ್ಟಿಲುಗಳಿದ್ದವು.
Kannada BSI Bible 2016
ಅದರ ಕಮಾನುಗಳು ಹೊರಗಿನ ಅಂಗಳದ ಕಡೆಗೆ ಇದ್ದವು; ಖರ್ಜೂರದ ಮರಗಳು ಆ ಕಡೆ ಈ ಕಡೆ ಅಲ್ಲಿನ ಕಂಬಗಳ ಮೇಲೆ ಇದ್ದವು; ಮೇಲೆ ಹೋಗುವದಕ್ಕೆ ಅದಕ್ಕೆ ಎಂಟು ಮೆಟ್ಟಲುಗಳು ಇದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರ ಕೈಸಾಲೆಯು ಹೊರಗಣ ಪ್ರಾಕಾರಕ್ಕೆ ಅಭಿಮುಖವಾಗಿತ್ತು; ಕೈಸಾಲೆಯ ಎದುರುಬದುರಿನ ನಿಲವುಕಂಬಗಳಲ್ಲಿ ಖರ್ಜೂರ ವೃಕ್ಷಗಳು ಚಿತ್ರಿತವಾಗಿದ್ದವು; ಅಲ್ಲಿ ಹತ್ತುವದಕ್ಕೆ ಎಂಟು ಮೆಟ್ಲುಗಳಿದ್ದವು.
Kannada Bible (KNCL) BSI 2016
ಅದರ ಕೈಸಾಲೆ ಹೊರಗಣ ಪ್ರಾಕಾರಕ್ಕೆ ಅಭಿಮುಖವಾಗಿತ್ತು. ಕೈಸಾಲೆಯ ಎದುರುಬದುರಿನ ನಿಲವುಕಂಬಗಳಲ್ಲಿ ಖರ್ಜೂರ ವೃಕ್ಷಗಳು ಚಿತ್ರಿತವಾಗಿದ್ದವು; ಇಲ್ಲಿ ಹತ್ತುವುದಕ್ಕೆ ಎಂಟು ಮೆಟ್ಟಲುಗಳಿದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದರ ಪಡಸಾಲೆಗಳು ಹೊರಗಿನ ಅಂಗಳದ ಕಡೆಗೆ ಇದ್ದವು; ಅದರ ಕಂಬಗಳ ಮೇಲೆ ಆ ಕಡೆಗೂ ಈ ಕಡೆಗೂ ಖರ್ಜೂರದ ಮರಗಳಿಂದ ಅಲಂಕರಿಸಲಾಗಿದ್ದವು; ಮೇಲೆ ಹತ್ತುವುದಕ್ಕೆ ಎಂಟು ಮೆಟ್ಟಲುಗಳು ಇದ್ದವು.