Ezekiel 40:36 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದರ ಕೋಣೆಗಳು, ಗೋಡೆಗಳು ಮತ್ತು ಕೈಸಾಲೆ ಇವೆಲ್ಲವೂ ಬೇರೆ ದ್ವಾರದ ಅಳತೆಯಂತಿತ್ತು. ದ್ವಾರದ ಸುತ್ತಲೂ ಕಿಟಕಿಗಳಿದ್ದವು. ದ್ವಾರವು ಐವತ್ತು ಮೊಳ ಉದ್ದ, ಇಪ್ಪತ್ತೈದು ಮೊಳ ಅಗಲವಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿನ ಕೋಣೆಗಳ, ಕಂಬಗಳ, ಕೈಸಾಲೆಗಳ ಎಲ್ಲಾ ಕಡೆಗಳಲ್ಲಿಯೂ ಕಿಟಕಿಗಳಿದ್ದವು; ಅದರ ಉದ್ದ ಐವತ್ತು ಮೊಳ ಮತ್ತು ಅಗಲ ಇಪ್ಪತ್ತೈದು ಮೊಳವಾಗಿತ್ತು.
Kannada BSI Bible 2016
ಅಲ್ಲಿನ ಚಿಕ್ಕ ಕೋಣೆಗಳು, ಕಂಬಗಳು ಕಮಾನುಗಳು ಮತ್ತು ಅದರ ಸುತ್ತಲೂ ಇರುವ ಕಿಟಕಿಗಳ ಉದ್ದವು ಐವತ್ತು ಮೊಳ, ಅಗಲವು ಇಪ್ಪತ್ತೈದು ಮೊಳ;
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರಲ್ಲಿ ಎಲ್ಲಾ ಕಡೆ ಕಿಟಕಿಗಳಿದ್ದವು; ಅದರ ಉದ್ದ ಐವತ್ತು ಮೊಳ, ಅಗಲ ಇಪ್ಪತ್ತೈದು ಮೊಳ.
Kannada Bible (KNCL) BSI 2016
ಅದರಲ್ಲಿ ಎಲ್ಲಾ ಕಡೆ ಕಿಟಕಿಗಳಿದ್ದವು; ಅದರ ಉದ್ದ ಇಪ್ಪತ್ತೈದು ಮೀಟರ್, ಅಗಲ ಹನ್ನೆರಡುವರೆ ಮೀಟರ್.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲಿಯ ಕೋಣೆಯ ಉಪವಿಭಾಗಗಳು, ಅಲ್ಲಿನ ಕಂಬಗಳು, ಅಲ್ಲಿನ ಕೈಸಾಲೆಗಳು ಮತ್ತು ಅದರ ಸುತ್ತಲೂ ಇರುವ ಕಿಟಕಿಗಳ ಉದ್ದವು ಸುಮಾರು ಇಪ್ಪತ್ತೈದು ಮೀಟರ್ ಮತ್ತು ಅದರ ಅಗಲವು ಸುಮಾರು ಹದಿಮೂರು ಮೀಟರ್ ಇತ್ತು.