Ezekiel 40:37 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕೈಸಾಲೆಯು ಹೊರ ಪ್ರಾಕಾರದಲ್ಲಿಯ ದ್ವಾರದ ಕೊನೆಯಲ್ಲಿತ್ತು. ಖರ್ಜೂರ ವೃಕ್ಷದ ಚಿತ್ರವು ಗೋಡೆಗಳ ಎರಡೂ ಕಡೆಯ ಮೇಲೆ ಕೆತ್ತಲ್ಪಟ್ಟಿತ್ತು. ದ್ವಾರವನ್ನು ಮುಟ್ಟಲು ಎಂಟು ಮೆಟ್ಟಿಲುಗಳಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದರ ಕಂಬಗಳು, ಕೈಸಾಲೆಗಳು ಹೊರಗಣ ಅಂಗಳಕ್ಕೆ ಅಭಿಮುಖವಾಗಿದ್ದವು; ಆ ಎದುರುಬದುರಿನ ಕಂಬಗಳಲ್ಲಿ ಖರ್ಜೂರ ಮರಗಳು ಚಿತ್ರಿತವಾಗಿದ್ದವು; ಅಲ್ಲಿ ಹತ್ತುವುದಕ್ಕೆ ಎಂಟು ಮೆಟ್ಟಿಲುಗಳಿದ್ದವು.
Kannada BSI Bible 2016
ಅದರ ಕಂಬಗಳು ಹೊರಗಿನ ಅಂಗಳದ ಕಡೆಗೆ ಇದ್ದವು; ಅದರ ಕಂಬಗಳ ಮೇಲೆ ಆ ಕಡೆಗೂ ಈ ಕಡೆಗೂ ಖರ್ಜೂರದ ಮರಗಳಿದ್ದವು; ಅದರ ಮೇಲೆ ಹೋಗುವ ಹಾಗೆ ಎಂಟು ಮೆಟ್ಟಲುಗಳು ಇದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರ ನಿಲವುಕಂಬಗಳು ಹೊರಗಣ ಪ್ರಾಕಾರಕ್ಕೆ ಅಭಿಮುಖವಾಗಿದ್ದವು; ಆ ಎದುರುಬದುರಿನ ನಿಲವುಕಂಬಗಳಲ್ಲಿ ಖರ್ಜೂರ ವೃಕ್ಷಗಳು ಚಿತ್ರಿತವಾಗಿದ್ದವು; ಅಲ್ಲಿ ಹತ್ತುವದಕ್ಕೆ ಎಂಟು ಮೆಟ್ಲುಗಳಿದ್ದವು.
Kannada Bible (KNCL) BSI 2016
ಆದರೆ ನಿಲವುಕಂಬಗಳು ಹೊರಗಣ ಪ್ರಾಕಾರಕ್ಕೆ ಅಭಿಮುಖವಾಗಿದ್ದವು. ಆ ಎದುರುಬದುರಿನ ನಿಲವುಕಂಬಗಳಲ್ಲಿ ಖರ್ಜೂರ ವೃಕ್ಷಗಳು ಚಿತ್ರಿತವಾಗಿದ್ದವು; ಅಲ್ಲಿ ಹತ್ತುವುದಕ್ಕೆ ಎಂಟು ಮೆಟ್ಟಲುಗಳಿದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದರ ಪಡಸಾಲೆಗಳು ಹೊರಗಿನ ಅಂಗಳದ ಕಡೆಗೆ ಇದ್ದವು. ಅದರ ಕಂಬಗಳ ಮೇಲೆ ಆ ಕಡೆಗೂ ಈ ಕಡೆಗೂ ಖರ್ಜೂರದ ಮರಗಳಿಂದ ಅಲಂಕರಿಸಲಾಗಿದ್ದವು; ಮೇಲೆ ಹತ್ತುವುದಕ್ಕೆ ಎಂಟು ಮೆಟ್ಟಲುಗಳು ಇದ್ದವು.