Ezekiel 40:39 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಾಗಿಲಿನ ಅಕ್ಕಪಕ್ಕದಲ್ಲಿ ಎರಡು ಮೇಜುಗಳಿದ್ದವು. ಸರ್ವಾಂಗಹೋಮ, ದೋಷಪರಿಹಾರಕಯಜ್ಞ, ಪಾಪಪರಿಹಾರಕಯಜ್ಞಗಳಿಗೆ ಅರ್ಪಿಸುವ ಪ್ರಾಣಿಗಳನ್ನು ಈ ಮೇಜುಗಳ ಮೇಲೆ ಕೊಲ್ಲುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೆಬ್ಬಾಗಿಲಿನ ಕೈಸಾಲೆಯಲ್ಲಿ ಎರಡು ಕಡೆಯಲ್ಲಿಯೂ ಎರಡೆರಡು ಪೀಠಗಳಿದ್ದವು; ಅವುಗಳ ಮೇಲೆ ಸರ್ವಾಂಗಹೋಮ ಪಶು, ದೋಷಪರಿಹಾರಕ ಯಜ್ಞ ಪಶು, ಪ್ರಾಯಶ್ಚಿತ್ತಯಜ್ಞ ಪಶು ಇವುಗಳನ್ನು ವಧಿಸುತ್ತಿದ್ದರು.
Kannada BSI Bible 2016
ಬಾಗಲ ದ್ವಾರಾಂಗಣದಲ್ಲಿ ಎರಡು ಮೇಜುಗಳು ಆ ಕಡೆಗೆ ಇದ್ದವು. ದಹನಬಲಿ ಯನ್ನೂ ಪಾಪ ಬಲಿಯನ್ನೂ ಅಪರಾಧ ಬಲಿಯನ್ನೂ ವಧಿಸುವ ಹಾಗೆ ಅವು ಇದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೆಬ್ಬಾಗಿಲ ಕೈಸಾಲೆಯಲ್ಲಿ ಎರಡು ಕಡೆಯಲ್ಲಿಯೂ ಎರಡೆರಡು ಪೀಠಗಳಿದ್ದವು; ಅವುಗಳ ಮೇಲೆ ಸರ್ವಾಂಗಹೋಮಪಶು, ದೋಷಪರಿಹಾರಕಯಜ್ಞಪಶು, ಪ್ರಾಯಶ್ಚಿತ್ತಯಜ್ಞಪಶು ಇವುಗಳನ್ನು ವಧಿಸುತ್ತಿದ್ದರು.
Kannada Bible (KNCL) BSI 2016
ಹೆಬ್ಬಾಗಿಲ ಕೈಸಾಲೆಯಲ್ಲಿ ಎರಡು ಕಡೆಯಲ್ಲೂ ಎರಡೆರಡು ಪೀಠಗಳಿದ್ದವು. ಅವುಗಳ ಮೇಲೆ ದಹನಬಲಿಪ್ರಾಣಿ, ದೋಷಪರಿಹಾರಕ ಬಲಿಪ್ರಾಣಿ, ಪ್ರಾಯಶ್ಚಿತ್ತ ಬಲಿಪ್ರಾಣಿ, ಇವುಗಳನ್ನು ವಧಿಸುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೈಸಾಲೆಯಲ್ಲಿ ಎರಡು ಕಡೆಯಲ್ಲಿಯೂ ಎರಡು ಮೇಜುಗಳು ಈ ಕಡೆಗೆ ಮತ್ತು ಎರಡು ಮೇಜುಗಳು ಆ ಕಡೆಗೆ ಇದ್ದವು. ದಹನಬಲಿಯನ್ನೂ ದೋಷಪರಿಹಾರ ಬಲಿಯನ್ನೂ ಪ್ರಾಯಶ್ಚಿತ್ತ ಬಲಿಯನ್ನೂ ವಧಿಸುವ ಹಾಗೆ ಅವು ಇದ್ದವು.