Ezekiel 40:46 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಉತ್ತರಕ್ಕೆ ಅಭಿಮುಖವಾಗಿರುವ ಕೋಣೆಯು ಯಜ್ಞವೇದಿಯಲ್ಲಿ ಕಾರ್ಯವಹಿಸುತ್ತಿರುವ ಯಾಜಕರಿಗಾಗಿ, ಯಾಜಕರೆಲ್ಲರೂ ಲೇವಿ ಕುಲದವರಾಗಿದ್ದಾರೆ. ಎರಡನೇ ಗುಂಪಿನ ಯಾಜಕರು ಚಾದೋಕನ ಸಂತತಿಯವರಾಗಿದ್ದರು. ಅವರು ಮಾತ್ರವೇ ಯಜ್ಞವೇದಿಯಲ್ಲಿ ಯಜ್ಞಾರ್ಪಣೆ ಮಾಡಘಹುದು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಉತ್ತರಕ್ಕೆ ಅಭಿಮುಖವಾಗಿರುವ ಆ ಕೋಣೆಯು ಯಜ್ಞವೇದಿಯ ಕಾರ್ಯದರ್ಶಿಗಳಾದ ಯಾಜಕರಿಗೆ ನೇಮಕವಾಗಿದೆ. ಚಾದೋಕನ ಸಂತತಿಯವರಾದ ಇವರು ಲೇವಿಯ ಕುಲದವರಲ್ಲಿ ಯೆಹೋವನ ಸನ್ನಿಧಿ ಸೇವಕರಾಗಿದ್ದಾರೆ” ಎಂದು ಹೇಳಿದನು.
Kannada BSI Bible 2016
ಉತ್ತರಕ್ಕೆ ಅಭಿಮುಖವಾಗಿರುವ ಕೊಠಡಿ ಯಜ್ಞವೇದಿಯ ಮೇಲ್ವಿಚಾರಕರಾದ ಯಾಜಕ ರದು. ಚಾದೋಕನ ಕುಮಾರರಾದ ಇವರು ಲೇವಿಯ ಕುಮಾರ ರಲ್ಲಿ ಕರ್ತನ ಸನ್ನಿಧಿಯ ಸೇವಕರಾಗಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಡಗಲಿಗೆ ಅಭಿಮುಖವಾಗಿರುವ ಆ ಕೋಣೆಯು ಯಜ್ಞವೇದಿಯ ಕಾರ್ಯದರ್ಶಿಗಳಾದ ಯಾಜಕರಿಗೆ ನೇಮಕವಾಗಿದೆ; ಚಾದೋಕನ ಸಂತತಿಯವರಾದ ಇವರು ಲೇವಿಯ ಕುಲದವರಲ್ಲಿ ಯೆಹೋವನ ಸನ್ನಿಧಿಸೇವಕರಾಗಿದ್ದಾರೆ ಎಂದು ಹೇಳಿದನು.
Kannada Bible (KNCL) BSI 2016
ಉತ್ತರಕ್ಕೆ ಅಭಿಮುಖವಾಗಿರುವ ಆ ಕೋಣೆ ಬಲಿಪೀಠದ ಕಾರ್ಯದರ್ಶಿಗಳಾದ ಯಾಜಕರಿಗೆ ನೇಮಕವಾಗಿದೆ. ಚಾದೋಕನ ಸಂತತಿಯವರಾದ ಇವರು ಲೇವಿಯ ಕುಲದವರಲ್ಲಿ ಸರ್ವೇಶ್ವರನ ಸನ್ನಿಧಿಸೇವಕರಾಗಿದ್ದಾರೆ ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಉತ್ತರಕ್ಕೆ ಅಭಿಮುಖವಾಗಿರುವ ಕೊಠಡಿ ಬಲಿಪೀಠದ ಮೇಲ್ವಿಚಾರಕರಾದ ಯಾಜಕರದು. ಚಾದೋಕನ ಪುತ್ರರಾದ ಇವರು ಲೇವಿಯ ಕುಲದವರಲ್ಲಿ ಯೆಹೋವ ದೇವರ ಸನ್ನಿಧಿಯ ಸೇವಕರಾಗಿದ್ದಾರೆ.”