Ezekiel 40:48 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಮೇಲೆ ಅವನು ಆಲಯದ ಕೈಸಾಲೆಗೆ ನನ್ನನ್ನು ಕರೆದುಕೊಂಡು ಹೋದನು. ಅದರ ಇಕ್ಕೆಡೆಗಳಲ್ಲಿಯೂ ಇರುವ ಗೋಡೆಗಳನ್ನು ಅವನು ಅಳತೆ ಮಾಡಲಾಗಿ ಗೋಡೆಯು ಐದು ಮೊಳ ದಪ್ಪ, ಮೂರು ಮೊಳ ಅಗಲವಾಗಿತ್ತು. ಅದರ ಮಧ್ಯದ ಸ್ಥಳ ಹದಿನಾಲ್ಕು ಮೊಳವಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೂಡಲೆ ಅವನು ನನ್ನನ್ನು ದೇವಸ್ಥಾನದ ದ್ವಾರಮಂಟಪಕ್ಕೆ ಕರೆ ತಂದನು. ಅದನ್ನು ಅಳೆಯಲು, ಅದರ ಎದುರುಬದುರಿನ ಕಂಬಗಳ ಅಗಲ ಐದೈದು ಮೊಳ, ಬಾಗಿಲಿನ ಎರಡು ಪಕ್ಕದ ಗೋಡೆಗಳ ಅಗಲ ಮೂರು ಮೂರು ಮೊಳವಾಗಿತ್ತು.
Kannada BSI Bible 2016
ಅವನು ನನ್ನನ್ನು ಮನೆಯ ದ್ವಾರಾಂಗಣಕ್ಕೆ ಕರೆದು ಕೊಂಡು ಹೋಗಿ ದ್ವಾರಾಂಗಣದ ಪ್ರತಿಯೊಂದು ಕಂಬವನ್ನು ಅಳೆದನು; ಆ ಕಡೆ ಈ ಕಡೆ ಐದುಮೊಳ ಮತ್ತು ಬಾಗಲಿನ ಅಗಲ ಆ ಕಡೆ ಮೂರುಮೊಳ, ಈ ಕಡೆ ಮೂರುಮೊಳ ಇತ್ತು.ದ್ವಾರಾಂಗಣದ ಉದ್ದ ಇಪ್ಪತ್ತು ಮೊಳ ಅಗಲ ಹನ್ನೊಂದು ಮೊಳ ಮತ್ತು ಅವರು ಮೇಲಕ್ಕೆ ಹತ್ತುವ ಮೆಟ್ಟಲುಗಳಿಂದ ನನ್ನನ್ನು ಕರೆತಂದರು. ಪಡಸಾಲೆಯಲ್ಲಿ ಈ ಕಡೆ ಒಂದು, ಆ ಕಡೆ ಒಂದು; ಎರಡು ಸ್ತಂಭಗಳಿದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೂಡಲೆ ಅವನು ನನ್ನನ್ನು ದೇವಸ್ಥಾನದ ದ್ವಾರಮಂಟಪಕ್ಕೆ ಕರತಂದು ಅದನ್ನು ಅಳೆಯಲು ಅದರ ಎದುರುಬದುರಿನ ನಿಲವು ಕಂಬಗಳ ಅಗಲ ಐದೈದು ಮೊಳ, ಬಾಗಿಲಿನ ಎರಡು ಪಕ್ಕದ [ಗೋಡೆಗಳ] ಅಗಲ ಮೂರು ಮೂರು ಮೊಳ,
Kannada Bible (KNCL) BSI 2016
ಕೂಡಲೆ ಆ ಪುರುಷ ನನ್ನನ್ನು ದೇವಸ್ಥಾನದ ದ್ವಾರಮಂಟಪಕ್ಕೆ ಕರೆದುತಂದು ಅದನ್ನು ಅಳೆದನು. ಅದರ ಎದುರುಬದುರಿನ ನಿಲವುಕಂಬಗಳ ಅಗಲ ಎರಡುವರೆ ಮೀಟರುಗಳು, ಬಾಗಿಲಿನ ಎರಡು ಪಕ್ಕದ ಗೋಡೆಗಳ ಅಗಲ ಅರ್ಧರ್ಧ ಮೀಟರ್,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ನನ್ನನ್ನು ಮನೆಯ ದ್ವಾರಮಂಟಪಕ್ಕೆ ಕರೆದುಕೊಂಡು ಹೋಗಿ, ದ್ವಾರಮಂಟಪ ಪ್ರತಿಯೊಂದು ಕಂಬವನ್ನೂ ಅಳೆದನು. ದ್ವಾರಮಂಟಪ ಅಗಲವು ಸುಮಾರು ಏಳು ಮೀಟರ್ ಮತ್ತು ಪಕ್ಕದ ಗೋಡೆಗಳ ಅಗಲವು ಎರಡೂ ಬದಿಗಳಲ್ಲಿ ಸುಮಾರು ಒಂದೂವರೆ ಮೀಟರ್ ಆಗಿತ್ತು.