Ezekiel 40:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಲಯದ ಹೊರಗಿನಿಂದ ಸುತ್ತಲೂ ಗೋಡೆ ಇರುವದನ್ನು ನಾನು ಕಂಡೆನು. ಅವನ ಕೈಯಲ್ಲಿ ಅಳತೆಯ ಕೋಲಿತ್ತು. ಅದು ಉದ್ದ ಅಳತೆಯಲ್ಲಿ ಉದ್ದವಾಗಿತ್ತು. ಅವನು ಗೋಡೆಯ ಅಗಲವನ್ನು ಅಳತೆ ಮಾಡಿದಾಗ, ಅದು ಒಂದು ಕೋಲು ಅಗಲವಾಗಿತ್ತು. ಅವನು ಗೋಡೆಯ ಎತ್ತರವನ್ನು ಅಳತೆ ಮಾಡಿದಾಗ ಅದು ಒಂದು ಕೋಲು ಎತ್ತರವಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಗೋ, ಒಂದು ಗೋಡೆಯು ಆ ಕಟ್ಟಡವನ್ನು ಸುತ್ತಿಕೊಂಡಿತ್ತು. ಆ ಪುರುಷನ ಕೈಯಲ್ಲಿ ಆರು ಮೊಳ ಉದ್ದದ ಅಳತೆ ಕೋಲು ಇತ್ತು. (ಉದ್ದಮೊಳ ಅಂದರೆ ಮೊಳದ ಮೇಲೆ ಒಂದು ಹಿಡಿ ಉದ್ದ); ಅವನು ಆ ಗೋಡೆಯ ಅಗಲವನ್ನು ಅಳತೆ ಮಾಡಿದಾಗ ಅದರ ಅಗಲವೂ ಮತ್ತು ಎತ್ತರವೂ ಒಂದೇ ಕೋಲಾಗಿತ್ತು.
Kannada BSI Bible 2016
ನೋಡು, ಮನೆಯ ಹೊರಗೆ ಸುತ್ತಮುತ್ತಲೂ ಇರುವ ಗೋಡೆ; ಆ ಮನುಷ್ಯನ ಕೈಯಲ್ಲಿ ಒಂದು ಹಿಡಿ ಉದ್ಧವಾದಂಥ ಆರುಮೊಳ ಉದ್ದ ಅಳತೆ ಕೋಲು ಇತ್ತು; ಹಾಗೆಯೇ ಅವನು ಆ ಕಟ್ಟಡದ ಅಗಲವನ್ನು ಅಳತೆ ಮಾಡಿದಾಗ ಅದರ ಎತ್ತರ ಅಗಲ ಒಂದೇ ಕೋಲಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ಒಂದು ಗೋಡೆಯು ಆ ಕಟ್ಟಡವನ್ನು ಸುತ್ತಿಕೊಂಡಿತ್ತು; ಆ ಪುರುಷನ ಕೈಯಲ್ಲಿ ಆರು ಉದ್ದಮೊಳದ ಅಳತೇಕೋಲೊಂದಿತ್ತು (ಉದ್ದಮೊಳ ಅಂದರೆ ಮೊಳದ ಮೇಲೆ ಒಂದು ಹಿಡಿಯುದ್ದ); ಅವನು ಆ ಗೋಡೆಯ ದಪ್ಪವನ್ನು ಒಂದು ಕೋಲು, ಎತ್ತರವನ್ನು ಒಂದು ಕೋಲು ಅಳೆದನು.
Kannada Bible (KNCL) BSI 2016
ಇಗೋ, ಒಂದು ಗೋಡೆಯು ಆ ಕಟ್ಟಡವನ್ನು ಸುತ್ತಿಕೊಂಡಿತ್ತು. ಆ ಪುರುಷನ ಕೈಯಲ್ಲಿ ಮೂರು ಮೀಟರ್ ಅಳತೆಕೋಲೊಂದಿತ್ತು. ಆ ಗೋಡೆ ಮೂರು ಮೀಟರ್ ದಪ್ಪ ಹಾಗು ಮೂರು ಮೀಟರ್ ಎತ್ತರ ಇತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ದೇವಾಲಯದ ಪ್ರದೇಶವನ್ನು ಸಂಪೂರ್ಣವಾಗಿ ಸುತ್ತುವರೆದಿರುವ ಒಂದು ಗೋಡೆಯನ್ನು ಕಂಡೆನು. ಆ ಮನುಷ್ಯನ ಕೈಯಲ್ಲಿದ್ದ ಅಳತೆ ಕೋಲು ಸುಮಾರು ಮೂರು ಮೀಟರ್ ಉದ್ದವಿತ್ತು, ಪ್ರತಿಯೊಂದೂ ಒಂದು ಮೀಟರ್ ಮತ್ತು ಒಂದು ಅಂಗೈ ಅಗಲವಾಗಿತ್ತು. ಆ ಮನುಷ್ಯನು ಗೋಡೆಯನ್ನು ಅಳೆದನು. ಅದು ಒಂದು ಕೋಲು ಅಗಲ ಮತ್ತು ಒಂದು ಕೋಲು ಎತ್ತರವಾಗಿತ್ತು.