Ezekiel 41:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಮೇಲೆ ಅವನು ನನ್ನನ್ನು ಪವಿತ್ರಸ್ಥಳಕ್ಕೆ ಕರೆದುಕೊಂಡು ಹೋದನು. ಅದರ ಇಕ್ಕೆಡೆಗಳಲ್ಲಿರುವ ಗೋಡೆಯನ್ನು ಅವನು ಅಳತೆ ಮಾಡಿದನು. ಆ ಗೋಡೆಗಳು ಆರು ಮೊಳ ದಪ್ಪವಾಗಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಮೇಲೆ ಅವನು ನನ್ನನ್ನು ದೇವಾಲಯದ ಪರಿಶುದ್ಧ ಸ್ಥಳಕ್ಕೆ ಕರೆದುಕೊಂಡು ಬಂದು, ಅದರ ದ್ವಾರಕಂಬಗಳನ್ನು ಅಳತೆ ಮಾಡಲು, ಅದರ ಎರಡು ಕಡೆಗಳು ಆರು ಮೊಳ ಅಗಲವಾಗಿತ್ತು.
Kannada BSI Bible 2016
ಆಮೇಲೆ, ಅವನು ನನ್ನನು ದೇವಾಲಯಕ್ಕೆ ಕರೆತಂದು ಕಂಬಗಳನ್ನೂ ಒಂದು ಕಡೆಯಲ್ಲಿ ಆರು ಮೊಳ ಅಗಲವೆಂದೂ ಮತ್ತೊಂದು ಕಡೆ ಆರು ಮೊಳ ಅಗಲವೆಂದೂ ಅಳೆದನು. ಇದೇ ಆ ಗುಡಾರದ ಅಡ್ಡಗಲವಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಅವನು ನನ್ನನ್ನು ಪರಿಶುದ್ಧಸ್ಥಳಕ್ಕೆ ತಂದು ಅದನ್ನು ಅಳೆಯಲು ಅದರ ಎದುರುಬದುರಿನ ನಿಲವುಕಂಬಗಳ ಅಗಲ ದೇವರ ಗುಡಾರದ ಅಗಲದಂತೆ ಆರಾರು ಮೊಳ, ದ್ವಾರದ ಅಗಲ ಹತ್ತು ಮೊಳ,
Kannada Bible (KNCL) BSI 2016
ಆಮೇಲೆ ಆ ಪುರುಷ ನನ್ನನ್ನು ಪರಿಶುದ್ಧಸ್ಥಳಕ್ಕೆ ತಂದು ಅದನ್ನು ಅಳೆಯಲು ಅದರ ಎದುರುಬದುರಿನ ನಿಲವುಕಂಬಗಳ ಅಗಲ ದೇವರ ಗುಡಾರದ ಅಗಲದಂತೆ ಮೂರು ಮೂರು ಮೀಟರ್,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಮೇಲೆ, ಆ ಮನುಷ್ಯನು ನನ್ನನ್ನು ದೇವಾಲಯಕ್ಕೆ ಕರೆತಂದು ಕಂಬಗಳನ್ನು ಎರಡೂ ಕಡೆಯಲ್ಲಿ ಸುಮಾರು 3.2 ಮೀಟರ್ ಎಂದು ಅಳೆದನು. ಇದೇ ಆ ಗುಡಾರದ ಉದ್ದಗಲವಾಗಿತ್ತು.