Ezekiel 41:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಂತರ ಅವನು ಆಲಯದ ಅಳತೆ ತೆಗೆದನು. ಆಲಯವು ನೂರು ಮೊಳ ಉದ್ದವಾಗಿತ್ತು. ನಿಯಮಿತದ ಸ್ಥಳ, ಅದರ ಕಟ್ಟಡ ಮತ್ತು ಗೋಡೆಯ ಸಹಿತ ನೂರು ಮೊಳ ಉದ್ದವಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಪುರುಷನು ಅಳೆಯಲು, ದೇವಸ್ಥಾನದ ಉದ್ದ ನೂರು ಮೊಳವೂ, ಪ್ರತ್ಯೇಕಿಸಿದ ಸ್ಥಳವನ್ನೂ ಮತ್ತು ಕಟ್ಟಡವನ್ನೂ ಗೋಡೆಗಳ ಸಹಿತವಾಗಿ ನೂರು ಮೊಳ ಉದ್ದವೆಂದು ಅಳೆದನು.
Kannada BSI Bible 2016
ಹೀಗೆ ಅವನು ಆಲಯವನ್ನು ನೂರು ಮೊಳ ಉದ್ದವೆಂದೂ; ಪ್ರತ್ಯೇಕಿಸಿದ ಸ್ಥಳವನ್ನೂ ಕಟ್ಟಡವನ್ನೂ ಗೋಡೆಗಳ ಸಹಿತವಾಗಿ ನೂರುಮೊಳ ಉದ್ದವೆಂದೂ ಅಳೆದನು;
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಪುರುಷನು ಅಳೆಯಲು ದೇವಸ್ಥಾನದ ಉದ್ದ ನೂರು ಮೊಳವೂ ದೀಕ್ಷಿತರ ಪ್ರಾಕಾರ, ಶಾಲೆ, ಶಾಲೆಯ ಗೋಡೆಗಳು, ಇವುಗಳ ಒಟ್ಟಗಲ ನೂರು ಮೊಳವೂ,
Kannada Bible (KNCL) BSI 2016
ಆ ಪುರುಷ ಅಳೆದಾಗ ದೇವಸ್ಥಾನದ ಉದ್ದ ಐವತ್ತು ಮೀಟರ್, ದೀಕ್ಷಿತರ ಪ್ರಾಕಾರ, ಶಾಲೆಶಾಲೆಯ ಗೋಡೆಗಳು, ಇವುಗಳ ಒಟ್ಟಗಲ ಐವತ್ತು ಮೀಟರ್.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಅವನು ಆಲಯವನ್ನು ನೂರು ಮೊಳ ಉದ್ದವೆಂದೂ; ಪ್ರತ್ಯೇಕಿಸಿದ ಸ್ಥಳವನ್ನೂ ಮತ್ತು ಕಟ್ಟಡವನ್ನೂ ಗೋಡೆಗಳ ಸಹಿತವಾಗಿ ನೂರು ಮೊಳ ಉದ್ದವೆಂದೂ ಅಳೆದನು;