Ezekiel 41:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಗೋಡೆಗಳಿಗೆ ಮರದ ಹಲಗೆಗಳು ಹೊದಿಸಲ್ಪಟ್ಟಿದ್ದವು. ಎಲ್ಲಾ ಕಿಟಕಿ ಬಾಗಿಲುಗಳಿಗೆ ಮರದ ಹೊದಿಕೆಯಿತ್ತು. ದ್ವಾರದ ಪಕ್ಕದಲ್ಲಿ ಆಲಯದ ಗೋಡೆಗೆ ನೆಲದಿಂದ ಹಿಡಿದು ಕಿಟಕಿಯ ತನಕ ಮರದ ಹಲಗೆಯ ಹೊದಿಕೆ ಇತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಬಾಗಿಲುಗಳ ಕಂಬಗಳನ್ನೂ, ಇಕ್ಕಟ್ಟಾದ ಕಿಟಕಿಗಳನ್ನೂ ಮತ್ತು ಅದರ ಸುತ್ತಲೂ ಇದ್ದಂತಹ ಮೂರು ಅಂತಸ್ತಿನ ಬಾಗಿಲಿಗೆ ಎದುರಾಗಿ ಸುತ್ತಲೂ ಕಟ್ಟಲ್ಪಟ್ಟ ಗೋಡೆಗಳನ್ನೂ ಅಳೆದನು.
Kannada BSI Bible 2016
ಬಾಗಲುಗಳ ಕಂಬಗಳನ್ನೂ ಇಕ್ಕಟ್ಟಾದ ಕಿಟಕಿ ಗಳನ್ನೂ ಅದರ ಸುತ್ತಲೂ ಇದ್ದಂತಹ ಮೂರು ಅಂತಸ್ತು ಗಳಲ್ಲಿ ಬಾಗಲಿಗೆ ಎದುರಾಗಿ ಸುತ್ತಲೂ ಮರದಿಂದ ಹೊದಿಸಲ್ಪಟ್ಟಿದ್ದವು. ಪಡಸಾಲೆಗಳನ್ನೂ ನೆಲವು ಮೊದಲ್ಗೊಂಡು ಮುಚ್ಚಲ್ಪಟ್ಟಂತ ಕಿಟಕಿಗಳ ವರೆಗೂ;
Kannada BSI JV (ಕನ್ನಡ ಸತ್ಯವೇದವು J.V. (BSI))
ಗರ್ಭಗೃಹ, ಪ್ರಾಕಾರದಲ್ಲಿನ ದ್ವಾರಮಂಟಪಗಳು, ಹೊಸ್ತಲುಗಳು, ತೆರೆಯಲಾಗದ ಕಿಟಕಿಗಳು, ಹೊಸ್ತಲಿನ ಎದುರಿಗೆ ಮೂರಂತಸ್ತಾಗಿ ಸುತ್ತಲು ಕಟ್ಟಲ್ಪಟ್ಟ ಗೋಡೆಯಟ್ಟಗಳು, ಇವುಗಳನ್ನೂ ಅಳೆದನು;
Kannada Bible (KNCL) BSI 2016
ಗರ್ಭಗೃಹ, ಪ್ರಾಕಾರದಲ್ಲಿನ ದ್ವಾರಮಂಟಪಗಳು, ಹೊಸ್ತಿಲುಗಳು, ತೆರೆಯಲಾಗದ ಕಿಟಕಿಗಳು, ಹೊಸ್ತಿಲಿನ ಎದುರಿಗೆ ಮೂರಂತಸ್ತಾಗಿ ಸುತ್ತಲು ಕಟ್ಟಲಾಗಿದ್ದ ಗೋಡೆಯಟ್ಟಗಳು, ಇವುಗಳನ್ನೂ ಅಳೆದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗೆಯೇ ಗರ್ಭಗೃಹ, ಪ್ರಾಕಾರದಲ್ಲಿನ ದ್ವಾರಮಂಟಪಗಳು, ಹೊಸ್ತಿಲುಗಳು ಮತ್ತು ಇಕ್ಕಟ್ಟಾದ ಕಿಟಕಿಗಳನ್ನೂ ಮತ್ತು ಅದರ ಸುತ್ತಲೂ ಇದ್ದಂತಹ ಮೂರು ಅಂತಸ್ತುಗಳಲ್ಲಿ ಬಾಗಿಲಿಗೆ ಎದುರಾಗಿ ಸುತ್ತಲೂ ಮರದಿಂದ ಹೊದಿಕೆಯಾಗಿದ್ದವು. ನೆಲ, ಕಿಟಕಿಯವರೆಗಿನ ಗೋಡೆ ಮತ್ತು ಕಿಟಕಿಗಳನ್ನು ಮುಚ್ಚಲಾಯಿತು.