Ezekiel 41:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದರ ಬಾಗಿಲು ಹತ್ತು ಮೊಳ ಅಗಲವಾಗಿದ್ದು ಅದರ ಎರಡು ಘದಿಯೂ ಐದೈದು ಮೊಳವಿದ್ದವು. ಅವನು ಆ ಕೋಣೆಯ ಅಳತೆ ತೆಗೆದನು. ಅದು ನಲವತ್ತು ಮೊಳ ಉದ್ದ, ಇಪ್ಪತ್ತು ಮೊಳ ಅಗಲವಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದ್ವಾರದ ಅಗಲವು ಹತ್ತು ಮೊಳಗಳೂ, ದ್ವಾರದ ಎರಡು ಪಕ್ಕದ ಗೋಡೆಗಳ ಅಗಲವು ಐದೈದು ಮೊಳಗಳೂ ಆಗಿದ್ದವು. ಅವನು ಪರಿಶುದ್ಧ ಸ್ಥಳವನ್ನು ಅಳತೆಮಾಡಿದಾಗ ಅದರ ಉದ್ದ ನಲ್ವತ್ತು ಮೊಳಗಳೂ, ಅಗಲ ಇಪ್ಪತ್ತು ಮೊಳಗಳೂ ಇದ್ದವು.
Kannada BSI Bible 2016
ಬಾಗಲಿನ ಅಗಲವು ಹತ್ತು ಮೊಳ ಬಾಗಲಿನ ಪಾರ್ಶ್ವಗಳು ಒಂದು ಕಡೆಯಲ್ಲಿ ಐದು ಮೊಳ, ಇನ್ನೊಂದು ಕಡೆಯಲ್ಲಿ ಐದು ಮೊಳವೆಂದು ಅವನು ಅದರ ಉದ್ದವನ್ನು ನಲವತ್ತು ಮೊಳವೆಂದೂ ಅಗಲವನ್ನು ಇಪ್ಪತ್ತು ಮೊಳವೆಂದೂ ಅಳೆದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದ್ವಾರದ ಎರಡು ಪಕ್ಕದ ಗೋಡೆಗಳ ಅಗಲ ಐದೈದು ಮೊಳ, ಪರಿಶುದ್ಧ ಸ್ಥಳದ ಉದ್ದ ನಾಲ್ವತ್ತು ಮೊಳ, ಅಗಲ ಇಪ್ಪತ್ತು ಮೊಳ ಇದ್ದವು.
Kannada Bible (KNCL) BSI 2016
ದ್ವಾರದ ಅಗಲ ಐದು ಮೀಟರು ದ್ವಾರದ ಎರಡು ಪಕ್ಕದ ಗೋಡೆಗಳ ಅಗಲ ಎರಡುವರೆ ಎರಡುವರೆ ಮೀಟರ್, ಪರಿಶುದ್ಧ ಸ್ಥಳದ ಉದ್ದ ಇಪ್ಪತ್ತು ಮೀಟರ್, ಅಗಲ ಹತ್ತು ಮೀಟರ್ ಇದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಾಗಿಲಿನ ಅಗಲವು ಸುಮಾರು ಐದು ಮೀಟರ್ ಮತ್ತು ಅದರ ಎರಡೂ ಬದಿಗಳಲ್ಲಿ ಗೋಡೆಗಳ ಅಗಲ ಸುಮಾರು ಎರಡೂವರೆ ಮೀಟರ್. ಅವನು ಮುಖ್ಯಸಭಾಂಗಣವನ್ನೂ ಅಳೆದನು. ಅದು ಸುಮಾರು ಇಪ್ಪತ್ತೊಂದು ಮೀಟರ್ ಉದ್ದ ಮತ್ತು ಸುಮಾರು ಹನ್ನೊಂದು ಮೀಟರ್ ಅಗಲವಿತ್ತು.