Ezekiel 41:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಒಂದು ವಸ್ತು ಇತ್ತು. ಅದು ಮೂರು ಮೊಳ ಎತ್ತರ, ಎರಡು ಮೊಳ ಉದ್ದವಿತ್ತು. ಅದರ ಮೂಲೆಗಳು, ಅದರ ಚೌಕಟ್ಟು ಮತ್ತು ಘದಿಗಳೆಲ್ಲಾ ಮರದಿಂದ ಮಾಡಿದ್ದವುಗಳಾಗಿದ್ದವು. “ಈ ಮೇಜು ಯೆಹೋವನ ಸನ್ನಿಧಾನದಲ್ಲಿದೆ” ಎಂದು ಆ ಮನುಷ್ಯನು ನನಗೆ ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿ ಮರದ ವೇದಿಕೆಯೊಂದಿತ್ತು. ಅದರ ಎತ್ತರ ಮೂರು ಮೊಳ, ಉದ್ದ ಎರಡು ಮೊಳವಾಗಿತ್ತು. ಅದರ ಮೂಲೆಗಳೂ, ಪೀಠವೂ, ಪಕ್ಕಗಳೂ ಮರದ್ದೇ ಆಗಿದ್ದವು. ಆ ಪುರುಷನು ನನಗೆ, “ಇದು ಯೆಹೋವನ ಸಮ್ಮುಖದ ಮೇಜು” ಎಂದು ಹೇಳಿದನು.
Kannada BSI Bible 2016
ಮರದ ಯಜ್ಞ ವೇದಿಯು ಮೂರುಮೊಳ ಎತ್ತರವಾಗಿತ್ತು; ಉದ್ದವು ಎರಡು ಮೊಳವಾಗಿತ್ತು; ಅದರ ಮೂಲೆಗಳೂ ಉದ್ದವೂ ಪಾರ್ಶ್ವವೂ ಮರದಿಂದಲೇ ಮಾಡಲ್ಪಟ್ಟಿತ್ತು; ಅವನು ನನಗೆ ಹೇಳಿದ್ದೇನಂದರೆ--ಕರ್ತನ ಮುಂದೆ ಇರುವ ಮೇಜು ಇದೇ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿ ಮರದ ವೇದಿಯೊಂದಿತ್ತು; ಅದರ ಎತ್ತರ ಮೂರು ಮೊಳ, ಉದ್ದ ಎರಡು ಮೊಳ; ಅದರ ಮೂಲೆಗಳೂ ಪೀಠವೂ ಪಕ್ಕಗಳೂ ಮರದ್ದೇ; ಆ ಪುರುಷನು ನನಗೆ - ಇದು ಯೆಹೋವನ ಸಮ್ಮುಖದ ಮೇಜು ಎಂದು ಹೇಳಿದನು.
Kannada Bible (KNCL) BSI 2016
ಅಲ್ಲಿ ಮರದ ವೇದಿಕೆಯೊಂದಿತ್ತು: ಅದರ ಎತ್ತರ ಒಂದೂವರೆ ಮೀಟರ್, ಉದ್ದ ಒಂದು ಮೀಟರ್; ಅದರ ಮೂಲೆಗಳು, ಪೀಠ ಹಾಗು ಪಕ್ಕೆಗಳು ಮರದ್ದೇ ಆಗಿದ್ದವು. ಆ ಪುರುಷ ನನಗೆ, “ಇದು ಸರ್ವೇಶ್ವರನ ಸಮ್ಮುಖದ ಮೇಜು,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸುಮಾರು ಒಂದೂವರೆ ಮೀಟರ್ ಎತ್ತರ ಮತ್ತು ಸುಮಾರು ಒಂದು ಮೀಟರ್ ಉದ್ದ ಮತ್ತು ಅಗಲವಿರುವ ಮರದ ಬಲಿಪೀಠವಿತ್ತು. ಅದರ ಮೂಲೆಗಳು, ಅದರ ತಳ ಮತ್ತು ಅದರ ಬದಿಗಳು ಮರದಿಂದ ಆಗಿದ್ದವು. ಆ ಮನುಷ್ಯನು ನನಗೆ, “ಇದು ಯೆಹೋವ ದೇವರ ಮುಂದೆ ಇರುವ ಮೇಜು” ಎಂದು ಹೇಳಿದನು.