Ezekiel 41:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವುಗಳ ಮೇಲೆ ಕೆರೂಬಿದೂತರ ಮತ್ತು ಖರ್ಜೂರ ವೃಕ್ಷದ ಚಿತ್ರಗಳನ್ನು ಕೆತ್ತಲಾಗಿತ್ತು. ಗೋಡೆಗಳಲ್ಲಿ ಹೇಗೆ ಕೆತ್ತಲ್ಪಟ್ಟಿತ್ತೋ ಅದೇ ರೀತಿಯಲ್ಲಿ, ಕೈಸಾಲೆಯ ಮುಂದೆ ಒಂದು ಮರದಿಂದ ಮಾಡಿದ ಸೂರು ಇತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಬಾಗಿಲುಗಳಲ್ಲಿ ಅಂದರೆ ಪರಿಶುದ್ಧ ಸ್ಥಳದ ಬಾಗಿಲುಗಳಲ್ಲಿ ಕೆರೂಬಿಗಳ ಮತ್ತು ಖರ್ಜೂರ ಮರಗಳ ಚಿತ್ರಗಳು ಗೋಡೆಗಳಲ್ಲಿ ಚಿತ್ರಿಸಲ್ಪಟ್ಟ ಹಾಗೆಯೇ ಇದ್ದವು. ದ್ವಾರಮಂಟಪದ ಹೊರಗಡೆ ಮರದ ಹಲಗೆಗಳಿದ್ದವು.
Kannada BSI Bible 2016
ಆಲಯದ ಬಾಗಲುಗಳ ಮೇಲೆ ಕೆರೂಬಿಗಳೂ ಖರ್ಜೂರದ ಮರಗಳೂ ಗೋಡೆಗಳ ಮೇಲೆ ಮಾಡ ಲ್ಪಟ್ಟ ಹಾಗೆಯೇ ಮಾಡಲ್ಪಟ್ಟಿದ್ದವು; ದ್ವಾರಂಗಣದ ಮುಂದೆ ಹೊರಗಡೆಯಲ್ಲಿ ದಪ್ಪವಾದ ಹಲಗೆಗಳಿದ್ದವು.ಇದಲ್ಲದೆ, ಈ ಕಡೆಯೂ ಆ ಕಡೆಯೂ ದ್ವಾರಾಂಗ ಣದ ಪಕ್ಕಕ್ಕೂ ಆಲಯದ ಪಾರ್ಶ್ವ ಕೊಠಡಿಗಳಿಗೂ ಇಕ್ಕಟ್ಟಾದ ಕಿಟಕಿಗಳೂ ಇದ್ದವು; ದಪ್ಪವಾದ ಹಲಗೆಗಳೂ ಸಹ ಇದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಕದಗಳಲ್ಲಿ, ಅಂದರೆ ಪರಿಶುದ್ಧಸ್ಥಳದ ಕದಗಳಲ್ಲಿ ಕೆರೂಬಿಗಳೂ ಖರ್ಜೂರ ವೃಕ್ಷಗಳೂ ಗೋಡೆಗಳಲ್ಲಿ ಚಿತ್ರಿಸಲ್ಪಟ್ಟ ಹಾಗೆಯೇ ಚಿತ್ರಿತವಾಗಿದ್ದವು; ದ್ವಾರಮಂಟಪದ ಹೊರಗಡೆ ಮರದ ಸೂರು ಇತ್ತು
Kannada Bible (KNCL) BSI 2016
ಆ ಕದಗಳಲ್ಲಿ, ಅಂದರೆ ಪರಿಶುದ್ಧ ಸ್ಥಳದ ಕದಗಳಲ್ಲಿ ಕೆರೂಬಿಗಳು ಹಾಗು ಖರ್ಜೂರ ವೃಕ್ಷಗಳು ಗೋಡೆಗಳಲ್ಲಿ ಚಿತ್ರಿತವಾಗಿದ್ದ ಹಾಗೆಯೇ ಚಿತ್ರಿತವಾಗಿದ್ದವು. ದ್ವಾರಮಂಟಪದ ಹೊರಗಡೆ ಮರದ ಸೂರು ಇತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಲಯದ ಬಾಗಿಲುಗಳ ಮೇಲೆ ಕೆರೂಬಿಗಳೂ ಖರ್ಜೂರದ ಮರಗಳೂ ಗೋಡೆಗಳ ಮೇಲೆ ಚಿತ್ರಿತವಾಗುವ ಹಾಗೆಯೇ ಚಿತ್ರಿತವಾಗಿದ್ದವು. ದ್ವಾರಾಂಗಣದ ಮುಂದೆ ಹೊರಗಡೆಯಲ್ಲಿ ದಪ್ಪವಾದ ಹಲಗೆಗಳಿದ್ದವು.